Homeಕರ್ನಾಟಕಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

ಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

- Advertisement -
- Advertisement -

ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಕಾಂಗ್ರೆಸ್ ನೆಲ ಕಚ್ಚುತ್ತಿದೆ. 2013ರಲ್ಲಿ ರಾಜ್ಯದಲ್ಲಿ ಬಹುಮತದ ಸರ್ಕಾರ ರಚಿಸಿದ್ದ ಕಾಂಗ್ರೆಸ್‍ಗೂ, ದಿವಂಗತ ದೇವರಾಜು ಅರಸು ನಂತರ 5 ವರ್ಷ ಸುಭದ್ರ ಸರ್ಕಾರ ನೀಡಿದ ಖ್ಯಾತಿಗೆ ಒಳಗಾಗಿದ್ದ ಸಿದ್ದರಾಮಯ್ಯನವರಿಗೂ 2018ರ ವಿಧಾನಸಭೆ ದೊಡ್ಡ ಹೊಡೆತ ಕೊಟ್ಟಿತ್ತು. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ 122 ಸ್ಥಾನದಿಂದ ಕೇವಲ 88 ಸ್ಥಾನಕ್ಕೆ ಕುಸಿದಿತ್ತು. ಆದರೂ ಪಕ್ಷದಲ್ಲಿ ರಾಜೀನಾಮೆ ಪರ್ವ ಆರಂಭವಾಗಿರಲಿಲ್ಲ.

ಇನ್ನು 2019ರ ಲೋಕಸಭಾ ಚುನಾವಣೆಯಂತೂ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಹೇಳಹೆಸರಿಲ್ಲದಂತೆ ಮಾಡಿತ್ತು. 2014ರಲ್ಲಿ ದೇಶಾದ್ಯಂತ ವ್ಯಾಪಿಸಿದ್ದ ನರೇಂದ್ರ ಮೋದಿ ಅಲೆಯ ನಡುವೆಯೂ ರಾಜ್ಯದಲ್ಲಿ 9 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್, ಜೆಡಿಎಸ್ ಜೊತೆಗೆ ಮೈತ್ರಿ ಸಾಧಿಸಿಕೊಂಡು ಚುನಾವಣೆ ಎದುರಿಸಿದ್ದಾಗ್ಯೂ ಕೇವಲ 1 ಸ್ಥಾನಕ್ಕೆ ಮಾತ್ರ ತೃಪ್ತಿಪಡಬೇಕಾಗಿ ಬಂದದ್ದು ವಿಪರ್ಯಾಸ. ಆಗಲೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗಲಿ, ಸಿಎಲ್‍ಪಿ ನಾಯಕ ಸಿದ್ದರಾಮಯ್ಯನವರಾಗಲಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿರಲಿಲ್ಲ. ಆದರೆ, ಈ ಒಂದು ಉಪಚುನಾವಣೆ ಕೈ ಪಕ್ಷದಲ್ಲಿ ದೊಡ್ಡ ತಲ್ಲಣಕ್ಕೆ ಕಾರಣವಾಗಿದೆ.

ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ.

ಉಪಚುನಾವಣೆಯ ಹೊಣೆಹೊತ್ತು ಸಾಲುಸಾಲು ನಾಯಕರು ರಾಜೀನಾಮೆ ನೀಡುತ್ತಿದ್ದಾರೆ. ಸೋಮವಾರ ಫಲಿತಾಂಶ ಹೊರಬೀಳುತ್ತಿದ್ದಂತೆ ಸಂಜೆ ವೇಳೆಗೆ ಪತ್ರಿಕಾಗೋಷ್ಠಿ ಕರೆದಿದ್ದ ಸಿದ್ದರಾಮಯ್ಯ ತಾವು ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೂ ಕಳುಹಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ವೇಳೆ ಆಪ್ತರೊಂದಿಗೆ ರಾಜೀನಾಮೆಯ ಕಾರಣ ಬಿಚ್ಚಿಟ್ಟಿರುವ ಸಿದ್ದರಾಮಯ್ಯ, “ನಾನು ಬಿಜೆಪಿಯ ಎದುರು ಸೆಣಸಬಲ್ಲೆ. ಆದರೆ, ಕತ್ತಲಿನಲ್ಲಿ ನಿಂತು ಬಾಣ ಬಿಡುವ ಸ್ವಪಕ್ಷದ ಹಿತಶತ್ರುಗಳ ವಿರುದ್ಧ ಹೋರಾಡಲಾರೆ” ಎಂದು ಹೇಳಿರುವುದು ಕೈ ಪಕ್ಷದೊಳಗಿರುವ ಭಿನ್ನಮತಕ್ಕೆ ಸಾಕ್ಷಿಯಾಗಿದೆ.

ಇನ್ನೂ ಸಿದ್ದರಾಮಯ್ಯ ಬೆನ್ನಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಇವರಲ್ಲದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸೂಚನೆ ನೀಡಿದ್ದಾರೆ. ದಿಢೀರ್ ಬೆಳವಣಿಗೆಯಲ್ಲಿ ಈ ಇಬ್ಬರೂ ನಾಯಕರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದರೆ ಅಚ್ಚರಿಯಿಲ್ಲ.

ಅಲ್ಲಿಗೆ ವಿಧಾನಸಭೆ-ಲೋಕಸಭೆ ಚುನಾವಣಾ ಸೋಲಿಗೆ ಕುಗ್ಗದ ಕಾಂಗ್ರೆಸ್ ಘಟಾನುಘಟಿ ನಾಯಕರನ್ನು 15 ಕ್ಷೇತ್ರದ ಉಪಚುನಾವಣೆ ಹುರಿದು ಮುಕ್ಕಿದಂತಾಗಿದೆ. ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪ ಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ. ಸಿದ್ದರಾಮಯ್ಯ ಅವರ ಈ ನಿರ್ಧಾರ ಸಾಮಾನ್ಯವಾಗಿ ರಾಜ್ಯ ಕಾಂಗ್ರೆಸ್‍ನಲ್ಲಿ ನಾಯಕತ್ವ ನಿರ್ವಾತ ಸ್ಥಿತಿಗೆ ಕಾರಣವಾಗಿದ್ದು, ಹೈಕಮಾಂಡ್ ಅನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿರುವುದು ಸುಳ್ಳಲ್ಲ.

ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಡೆ ಏನು?

ಸತತ ಎಲ್ಲಾ ಚುನಾವಣೆಯಲ್ಲೂ ಸೋಲನುಭವಿಸಿದರೂ ಸಹ ಕಾಂಗ್ರೆಸ್ ಪಾಲಿಗೆ ಸಿದ್ದರಾಮಯ್ಯ ಈಗಲೂ ವರ್ಚಸ್ವಿ ನಾಯಕ ಎಂಬುದರಲ್ಲಿ ಎರಡು ಮಾತಿಲ್ಲ. ಸತತ 5 ವರ್ಷ ಸಿಎಂ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿದ್ದ ಸಿದ್ದರಾಮಯ್ಯ, ವಿಪಕ್ಷ ನಾಯಕನ ಸ್ಥಾನವನ್ನೂ ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ. ಅಲ್ಲದೆ, ಆಡಳಿತಾರೂಢ ಪಕ್ಷವನ್ನು ಕಟು ಟೀಕೆಗೆ ಗುರಿಪಡಿಸುವ ಮೂಲಕ ಇಕ್ಕಟ್ಟಿಗೆ ಸಿಲುಕಿಸಬಲ್ಲ ಸಾಮಥ್ರ್ಯವಿರುವ ನಾಯಕ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಬೆನ್ನಿಗಿದೆ.

ಮುಂದಿನ ಮೂರೂ ವರ್ಷವೂ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಆಡಳಿತ ಪಕ್ಷದ ಎಲ್ಲಾ ವೈಫಲ್ಯವನ್ನು ಜನರ ಮುಂದೆ ಬಿಚ್ಚಿಡುತ್ತಾರೆ ಎಂಬ ಭಯ ಸ್ವತಃ ಬಿಜೆಪಿ ಪಾಳಯದಲ್ಲೂ ಇರುವುದು ಸುಳ್ಳಲ್ಲ. ಅಕಸ್ಮಾತ್ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂಗೀಕಾರ ಮಾಡಿದರೆ ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಸೈಲೆಂಟ್ ಆಗಿಬಿಡುತ್ತಾರೆ. ಈ ಬೆಳವಣಿಗೆ ಬಿಜೆಪಿ ಪಕ್ಷಕ್ಕೆ ಲಾಭವಾಗಿ ಪರಿಣಮಿಸುವ ಸಾಧ್ಯತೆ ಇದೆ. ಹೀಗಾಗಿ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಬಹುದಾದ ಲಾಭದ ಕುರಿತ ಮಾಹಿತಿ ಕಾಂಗ್ರೆಸ್ ರಾಷ್ಟ್ರ ನಾಯಕರಿಗೂ ತಿಳಿದಿದೆ. ಅಲ್ಲದೆ, ಪ್ರಸ್ತುತ ಸಿದ್ದರಾಮಯ್ಯ ಅವರ ಸ್ಥಾನವನ್ನು ತುಂಬಬಲ್ಲ ಮತ್ತೋರ್ವ ನಾಯಕನ ಹುಡುಕಾಟ ಮಾಡುತ್ತಾ ಕೂತರೆ ಮತ್ತಷ್ಟು ಭಿನ್ನಮತ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ..

ಹೀಗಾಗಿ ಕಾಂಗ್ರೆಸ್ ಹೈಕಮಾಂಡ್‍ಗೆ ಸಿದ್ದರಾಮಯ್ಯ ಅವರನ್ನು ರಾಜ್ಯ ರಾಜಕೀಯದಲ್ಲಿ ಉಳಿಸಿಕೊಳ್ಳದೆ ಬೇರೆ ವಿಧಿಯಿಲ್ಲ. ಇದೇ ಕಾರಣಕ್ಕೆ ಉಪಚುನಾವಣಾ ಫಲಿತಾಂಶದ ಕಾವು ತಣ್ಣಗಾದ ನಂತರ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಮುಂದುವರೆಸುತ್ತದೆ ಅನ್ನುತ್ತವೆ ರಾಜಕೀಯ ವಠಾರಗಳು. ಇಲ್ಲದೆ ಹೋದರೆ ಎಂ ಬಿ ಪಾಟೀಲ್, ಎಚ್ ಕೆ ಪಾಟೀಲ್ ಇಲ್ಲವೇ ಕೃಷ್ಣ ಭೈರೆಗೌಡರಿಗೆ ಲಾಟರಿ ಹೊಡೆಯಬಹುದು….

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ನೇಮಕ ಸಾಧ್ಯತೆ?

ಕರ್ನಾಟಕ ಪ್ರದೇಶ ಕಾಂಗ್ರೆಸ್‍ಗೆ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕವಾದ ದಿನದಿಂದ ಒಂದಲ್ಲಾ ಒಂದು ಅಪಸ್ವರ, ಭಿನ್ನಮತ ಕೇಳಿಬರುತ್ತಲೇ ಇವೆ. ಮತ್ತೊಂದೆಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ಸರಿಸುಮಾರು ಒಂದು ತಿಂಗಳು ದೆಹಲಿಯ ತಿಹಾರ್ ಜೈಲಿನಲ್ಲಿ ಕಳೆದುಬಂದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಗ್ರಾಫ್ ಕಾಂಗ್ರೆಸ್‍ನಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡುವುದಕ್ಕೂ, ಆ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಹೆಸರು ಕೇಳಿಬರುತ್ತಿರುವುದಕ್ಕೂ ಸರಿಯಾಗಿದೆ.

ಕಾಂಗ್ರೆಸ್ ಪಕ್ಷದ ವರ್ಚಸ್ವಿ ನಾಯಕರ ಪೈಕಿ ಡಿ.ಕೆ. ಶಿವಕುಮಾರ್ ಮುಂಚೂಣಿ ನಾಯಕ. ಯಾವುದೇ ಸಂದರ್ಭದಲ್ಲಿ ಪಕ್ಷಕ್ಕೆ ಎದುರಾಗಬಲ್ಲ ಸಮಸ್ಯೆಯನ್ನು ನೀಗಿಸಬಲ್ಲ ಸಾಮಥ್ರ್ಯವಿರುವ ನಾಯಕ. ಇದೇ ಕಾರಣಕ್ಕೆ ಅವರನ್ನು ಕಾಂಗ್ರೆಸ್ ಟ್ರಬಲ್ ಶೂಟರ್ ಎಂದು ಕರೆಯಲಾಗುತ್ತದೆ. ಆದರೆ, ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದಲ್ಲಿ ಕೆಲವಾರು ಪ್ರಕರಣಗಳು ಇದ್ದ ಕಾರಣಕ್ಕೆ ಅವರಿಗೆ ಪಕ್ಷದಲ್ಲಿ ಈವರೆಗೆ ಉನ್ನತ ಸ್ಥಾನಮಾನಗಳನ್ನು ನೀಡಲಾಗಿರಲಿಲ್ಲ.

ಆದರೆ, ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ಪಾತಾಳಕ್ಕೆ ಕುಸಿದಿದ್ದು ಪಕ್ಷವನ್ನು ಮತ್ತೆ ಮೇಲೆತ್ತಲು ಡಿ.ಕೆ. ಶಿವಕುಮಾರ್ ಅವರಂತಹ ನಾಯಕತ್ವದ ಅಗತ್ಯವಿದೆ. ಹೀಗಾಗಿ ಶೀಘ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಿದರೂ ಅಚ್ಚರಿ ಇಲ್ಲ. ಇಲ್ಲದೇ ಹೋದರೆ ಚುನಾವಣೆ ಹತ್ತಿರ ಬರುವವರೆಗು ಶಾಂತಿ ಸಮಯದ ನಾಯಕ ಸ್ಥಾನ ಮುನಿಯಪ್ಪ, ಪಾಟೀಲ್ ಇಲ್ಲವೇ ಸತೀಶ್ ಜಾರಕಿಹೊಳಿ ಪಾಲಾದರು ಅಚ್ಚರಿ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...