Homeಮುಖಪುಟರೈತರ ಹತ್ಯೆ ಪ್ರಕರಣ: ಉತ್ತರ ಪ್ರದೇಶ ಸರ್ಕಾರ ವಜಾ ಮಾಡಲು ಸಿದ್ದರಾಮಯ್ಯ ಆಗ್ರಹ

ರೈತರ ಹತ್ಯೆ ಪ್ರಕರಣ: ಉತ್ತರ ಪ್ರದೇಶ ಸರ್ಕಾರ ವಜಾ ಮಾಡಲು ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವ ಅಜಯ್‌ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಕಾರು ಹರಿಸಿ ನಾಲ್ವರು ರೈತರನ್ನು ಕೊಂದ ಘಟನೆಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕದ ಹಲವು ಕಡೆ ಪ್ರತಿಭಟನೆಗಳು ಭುಗಿಲೆದ್ದಿವೆ. ರೈತರ ಮೇಲೆ ಹಗೆ ಸಾಧಿಸುತ್ತಿರುವ ಉತ್ತರ ಪ್ರದೇಶ ಸರ್ಕಾರವನ್ನು ವಜಾ ಮಾಡಬೇಕೆಂದು ಕರ್ನಾಟಕದ ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ರೈತರು ತನ್ನ ಶತ್ರುಗಳೆಂದು ತಿಳಿದುಕೊಂಡಿರುವ ಬಿಜೆಪಿಯು ಅವರನ್ನು ಪೋಲಿಸರ ಮೂಲಕ ದಮನಿಸಲು ಪ್ರಯತ್ನಿಸಿ ವಿಫಲವಾದ ನಂತರ ಈಗ ನೇರವಾಗಿ ಹತ್ಯೆ ನಡೆಸಲು ಹೊರಟಿದೆ. ಉತ್ತರಪ್ರದೇಶದಲ್ಲಿ ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ‌ ಮನಸ್ಸಿಗೆ ಸಾಕ್ಷಿ” ಎಂದು ಕಿಡಿಕಾರದ್ದಾರೆ.

ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಗೂಂಡಾ ರಾಜ್ಯದಲ್ಲಿ ದಲಿತರು, ರೈತರು,‌ ಮಹಿಳೆಯರು ಮತ್ತು ಬಡವರ ಮಾನ-ಪ್ರಾಣ ಯಾವುದೂ ಸುರಕ್ಷಿತ ಅಲ್ಲ. ಸಂವಿಧಾನವೇ ಕುಸಿದು‌ಬಿದ್ದಿರುವ ಸ್ಥಿತಿಯಲ್ಲಿ ರಾಷ್ಟ್ರಪತಿಗಳು‌ ಮಧ್ಯಪ್ರವೇಶಿಸಿ ಅಲ್ಲಿನ ಬಿಜೆಪಿ
ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ಮತ್ತು ಅದರ ರಾಜ್ಯ ಘಟಕಗಳು ಇಡೀ ದೇಶವನ್ನು ಗೂಂಡಾ ರಾಜ್ ಆಗಿ ಪರಿವರ್ತಿಸಿವೆ. ಅವರು ಮಾಡಿದ ತಪ್ಪುಗಳನ್ನು ಪ್ರಶ್ನಿಸಲು ಜಾಗವಿಲ್ಲ. ಆ ಮುಗ್ಧ ರೈತರು ಏನು ಮಾಡಿದರು, ಏಕೆ ಅವರನ್ನು ಕೊಲ್ಲಲಾಯಿತು? ಅವರು ನರೇಂದ್ರ ಮೋದಿಯವರ ನಿರಂಕುಶಾಧಿಕಾರವನ್ನು ಪ್ರಶ್ನಿಸಿದ್ದೇ ತಪ್ಪೇ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿರೋಧ ಪಕ್ಷಗಳು ರೈತರ ಜೊತೆ ನಿಲ್ಲುವುದನ್ನು ತಡೆಯಲು ಸಿಕ್ಕ ಸಿಕ್ಕವರನ್ನು ಬಂಧಿಸುತ್ತಿರುವ ಬಿಜೆಪಿಯ ತಾಲಿಬಾನ್ ಮನಸ್ಥಿತಿಯನ್ನು ಖಂಡಿಸುತ್ತೇನೆ. ಪ್ರಿಯಾಂಕ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರನ್ನು ಬಂಧಿಸಿರುವುದು ಪ್ರಜಾಪ್ರಭುತ್ವಕ್ಕೆ ದೊಡ್ಡ ಕಳಂಕ. ನ್ಯಾಯ ಸಿಗುವವರೆಗೂ ಕಾಂಗ್ರೆಸ್ ಹೋರಾಟ ಮುಂದುವರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಕಾರು ಹರಿಸಿ ನಾಲ್ವರು ರೈತರನ್ನು ಕೊಂದ ಘಟನೆ ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಆರಂಭವಾಗಿದೆ. ಸಂಯುಕ್ತ ಹೋರಾಟ ಕರ್ನಾಟಕ ಮತ್ತು ರೈತ ಸಂಘಟನೆಗಳು, ಪ್ರಗತಿಪರ ಮತ್ತು ಎಡ ಸಂಘಟನೆಗಳು ಮೈಸೂರು ಬ್ಯಾಂಕ್ ವೃತ್ತದ ಬಳಿ ಸೇರಿ ಆಕ್ರೋಶ ಹೊರ ಹಾಕಿದ್ದಾರೆ. ವಿದ್ಯಾರ್ಥಿ ಯುವಜನ ಸಂಘಟನೆಗಳು ಸಾಥ್ ನೀಡಿವೆ.

“ಸರ್ವಾಧಿಕಾರಿ ಸರ್ಕಾರ ಮಾತ್ರ ಇದನ್ನು ಮಾಡಲು ಸಾಧ್ಯ. ಉತ್ತರ ಪ್ರದೇಶ ಆಡಳಿತಾರೂಢ ಬಿಜೆಪಿ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಲು ಬಯಸುತ್ತಿದೆಯೇ? ಈ ರೀತಿಯಾದ ನಾಗರಿಕ ಹಕ್ಕುಗಳ ಉಲ್ಲಂಘನೆ ಸಂವಿಧಾನದ ಮನೋಭಾವಕ್ಕೆ ವಿರುದ್ಧವಾಗಿದೆ” ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಯುಪಿ ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...