Homeಮುಖಪುಟರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬೇಡಿ: ಶಾಲೆಗಳಲ್ಲಿ ಧ್ಯಾನ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬೇಡಿ: ಶಾಲೆಗಳಲ್ಲಿ ಧ್ಯಾನ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

ಇನ್ನು ಮುಂದೆ ಶಾಲೆಗಳಲ್ಲಿ ನಿತ್ಯ 10 ನಿಮಿಷ ಧ್ಯಾನ ಮಾಡುವುದು ಕಡ್ಡಾಯ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೊರಡಿಸಿರುವ ಸುತ್ತೋಲೆಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ತಮ್ಮ ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬಾರದು” ಎಂದು ಆಗ್ರಹಿಸಿದ್ದಾರೆ.

“ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧ ಇಲ್ಲ. ಆದರೆ ಶಾಲೆಗಳಲ್ಲಿ ಯಾವುದು ಮುಖ್ಯ, ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಯಾವುದಕ್ಕೆ ಆದ್ಯತೆ ನೀಡಬೇಕೆನ್ನುವುದಷ್ಟೇ ಪ್ರಶ್ನೆ. ಒಂದೆಡೆ ಶಾಲೆ ನಡೆಸಲು ಸಾರ್ವಜನಿಕರಿಂದ ಭಿಕ್ಷೆ ಬೇಡುತ್ತಿರುವ ಬಿಜೆಪಿ ಸರ್ಕಾರ ಇನ್ನೊಂದೆಡೆ ದಿನಕ್ಕೊಂದರಂತೆ ಗಿಮಿಕ್‌ಗಳನ್ನು ಮಾಡುತ್ತಿರುವುದು ಖಂಡನೀಯ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಬಿ.ಸಿ ನಾಗೇಶ್‌ರವರು ಶಿಕ್ಷಣ ಸಚಿವರಾದ ದಿನದಿಂದ ಪಠ್ಯಪುಸ್ತಕ ವಿವಾದದಿಂದ ಹಿಡಿದು ಶಾಲಾ ಶಿಕ್ಷಕರ ನೇಮಕದವರೆಗೆ ಬರೀ ಹಗರಣಗಳಲ್ಲೇ ಈಜಾಡುತ್ತಿದ್ದಾರೆ. ಅವರ ಮನಸ್ಸು ಸ್ಥಿಮಿತದಲ್ಲಿದ್ದ ಹಾಗಿಲ್ಲ, ನಿಜವಾಗಿ ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ ಎಂದು ಕಿಡಿಕಾರಿದ್ದಾರೆ.

ಕೊರೊನಾವನ್ನು ಸರಿಯಾಗಿ ನಿಯಂತ್ರಿಸಲಾಗದೆ ಶಾಲೆಗಳನ್ನು ಮುಚ್ಚಿ, ಆನ್ ಲೈನ್ ತರಗತಿಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮೊಬೈಲ್ ಹುಚ್ಚು ಹತ್ತಿಸಿರುವ ಬಿಜೆಪಿ ಸರ್ಕಾರ, ಈಗ ಆ ಹುಚ್ಚು ಬಿಡಿಸಲು ಧ್ಯಾನ ನಡೆಸಲು ಮುಂದಾಗಿರುವುದು ಹುಚ್ಚುತನವಲ್ಲದೆ ಮತ್ತೇನು? ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು. ಇದರ ಬದಲಿಗೆ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರು ಇನ್ನಷ್ಟು ಕುಗ್ಗಿಹೋಗುತ್ತಾರೆ ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಮೊದಲು ಶಾಲೆಗಳಲ್ಲಿ ಅಗತ್ಯ ಸಂಖ್ಯೆಯಲ್ಲಿ ಶಿಕ್ಷಕರನ್ನು ನೇಮಿಸಿ ಅವಶ್ಯಕವಾದ ಬೋದನಾ ಸಲಕರಣೆಗಳನ್ನು ಬಿಜೆಪಿ ಸರ್ಕಾರ ಒದಗಿಸಬೇಕು. ಪ್ರತಿಶಾಲೆಯಲ್ಲಿ ಕಲೆ, ಸಂಗೀತ ಮತ್ತು ಕ್ರೀಡೆಗಳಲ್ಲಿ ತರಬೇತಿ ನೀಡುವ ಶಿಕ್ಷಕರನ್ನು ನೇಮಿಸಬೇಕು. ಇದನ್ನು ಬಿಟ್ಟು ತಮ್ಮ ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬಾರದು ಎಂದು ಆಗ್ರಹಿಸಿದ್ದಾರೆ.

ಅದಕ್ಕೂ ಮೊದಲು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು “ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನವನ್ನು ಮಾಡಿಸುವುದು ಅಗತ್ಯವಾಗಿರುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ, ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಲು ಸಹಕಾರಿಯಾಗುತ್ತದೆ” ಎಂದು  ಸುತ್ತೋಲೆ ಹೊರಡಿಸಿದ್ದರು.

ಈಗಾಗಲೇ ಕೆಲವು ಜಿಲ್ಲೆಗಳ ಶಾಲೆಗಳಲ್ಲಿ ಧ್ಯಾನವನ್ನು ಮಾಡಿಸಲಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನವನ್ನು ಮಾಡಿಸಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಕೋರಿದ್ದ ಹಿನ್ನೆಲೆಯಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದರು.

ಇದನ್ನೂ ಓದಿ: ಇನ್ನು ಮುಂದೆ ಶಾಲೆಗಳಲ್ಲಿ ನಿತ್ಯ 10 ನಿಮಿಷ ಧ್ಯಾನ ಕಡ್ಡಾಯ: ಸಚಿವ ಬಿ.ಸಿ ನಾಗೇಶ್ ಹೊಸ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...