Homeಕರ್ನಾಟಕರಾಜ್ಯದಲ್ಲಿ ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? - ಸಿದ್ದರಾಮಯ್ಯ ಪ್ರಶ್ನೆ

ರಾಜ್ಯದಲ್ಲಿ ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? – ಸಿದ್ದರಾಮಯ್ಯ ಪ್ರಶ್ನೆ

ತಮ್ಮನ್ನು ಮಂತ್ರಿಯೂ ಮಾಡಬೇಕು ಹಾಗೂ ಉಪಚುನಾವಣೆಯಲ್ಲಿ ಹಣವನ್ನೂ ಖರ್ಚು ಮಾಡಬೇಕೆಂದು ಯಡಿಯೂರಪ್ಪ ಅವರ ಜೊತೆ ಅನರ್ಹರು ಮೊದಲೇ ಒಪ್ಪಂದ ಮಾಡಿಕೊಂಡಿದ್ದರು.

- Advertisement -
- Advertisement -

ನಾನು ಜೆಡಿಎಸ್ ಬಿಡಲಿಲ್ಲ, ನನ್ನನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಿದ್ದರು. ಧರಂಸಿಂಗ್ ಸರ್ಕಾರದಲ್ಲಿ ನಾನು ಉಪಮುಖ್ಯಮಂತ್ರಿಯಾಗಿದ್ದೆ, ಆ ಸ್ಥಾನದಿಂದ ನನ್ನನ್ನು ವಜಾ ಮಾಡಿದರು. ಇದಾದ ಒಂದು ವರ್ಷದ ನಂತರ ನಾನು ಕಾಂಗ್ರೆಸ್ ಸೇರಿದ್ದು. ನಾನು ಕಾಂಗ್ರೆಸ್ ಸೇರುವಾಗ ಕಾಂಗ್ರೆಸ್ ಅಧಿಕಾರದಲ್ಲಿ ಇರಲಿಲ್ಲ, ವಿರೋಧ ಪಕ್ಷದ ಸ್ಥಾನದಲ್ಲಿತ್ತು. ಹಣ, ಅಧಿಕಾರದಾಸೆಗೆ ಬೇರೆಯವರಂತೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಇನ್ನೊಂದು ಪಕ್ಷ ಸೇರಿದವನಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಜಾರೋಷವಾಗಿ ಬಿಜೆಪಿ ಪಕ್ಷ ದುಡ್ಡು ಹಂಚ್ತಿದೆ, ಸಚಿವ ಕಾರಜೋಳ ದುಡ್ಡು ಹಂಚಿದ್ದು ಟಿವಿಯಲ್ಲಿ ಬರ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಜಾತಿ ಮೇಲೆ ಮತ ಕೇಳ್ತಿದ್ದಾರೆ, ಮಂತ್ರಿ ಮಾಡ್ತೀನಿ, ತಾಲ್ಲೂಕು ಮಾಡ್ತೀನಿ ಎಂದು ಆಶ್ವಾಸನೆ ಕೊಡ್ತಿದ್ದಾರೆ. ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟರೂ ಕ್ರಮ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? ಹದಿನೇಳು ಶಾಸಕರನ್ನು ಬಿಜೆಪಿ ದುಡ್ಡು ಕೊಟ್ಟೇ ಖರೀದಿಸಿದ್ದಕ್ಕೆ ಸಾಂದರ್ಭಿಕ ಸಾಕ್ಷ್ಯಗಳಿವೆ. ಈಗಿನ ಡಿಸಿಎಂ ಅಶ್ವಥನಾರಾಯಣ, ಶಾಸಕರಾದ ವಿಶ್ವನಾಥ್, ಲಿಂಬಾವಳಿ ಮತ್ತು ಯೋಗೇಶ್ವರ್ ಮನೆಗೆ ಬಂದು 5 ಕೋಟಿ ರೂ. ನೀಡಿದ್ದರು ಎಂದು ಮಾಜಿ ಸಚಿವ ಶ್ರೀನಿವಾಸಗೌಡ ವಿಧಾನಸಭೆಯಲ್ಲಿಯೇ ಹೇಳಿಲ್ವೆ? ಇನ್ನು ಏನು ಸಾಕ್ಷಿ ಬೇಕು? ದೇವದುರ್ಗಕ್ಕೆ ಯಡಿಯೂರಪ್ಪ ಹೋಗಿ ಜೆಡಿಎಸ್ ಶಾಸಕನ ಖರೀದಿಗೆ ಯತ್ನಿಸಿದ್ದು ಅಡಿಯೋ ಟೇಪ್‌ನಲ್ಲಿಲ್ವೇ? ಅದು ತಮ್ಮದೇ ಧ್ವನಿ ಎಂದು ಅವರು ಒಪ್ಪಿಕೊಂಡಿಲ್ವೆ? ಇದರ ಅರ್ಥ ಏನು? ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಯಾವುದು? ಎಂದು ಕಿಡಿಕಾರಿದ್ದಾರೆ.

ತಮ್ಮನ್ನು ಮಂತ್ರಿಯೂ ಮಾಡಬೇಕು ಹಾಗೂ ಉಪಚುನಾವಣೆಯಲ್ಲಿ ಹಣವನ್ನೂ ಖರ್ಚು ಮಾಡಬೇಕೆಂದು ಯಡಿಯೂರಪ್ಪ ಅವರ ಜೊತೆ ಅನರ್ಹರು ಮೊದಲೇ ಒಪ್ಪಂದ ಮಾಡಿಕೊಂಡಿದ್ದರು. ಹಾಗಾಗಿ ಉಪಚುನಾವಣೆಯಲ್ಲಿ ಬಿಜೆಪಿ ಕೋಟಿಗಟ್ಟಲೆ ಹಣ ಸುರಿಯುತ್ತಿದೆ, ನಮ್ಮ ಪಕ್ಷದಲ್ಲಿ ಹಣವಿಲ್ಲ‌. ಹಣ ಖರ್ಚು ಮಾಡುವ ವಿಚಾರದಲ್ಲಿ ಬಿಜೆಪಿ ಜೊತೆ ಸ್ಪರ್ಧೆ ಅಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...