Homeಮುಖಪುಟದೊರೆಸ್ವಾಮಿಯವರ ಮೇಲಿನ ಯತ್ನಾಳ್ ಹೇಳಿಕೆ ಖಂಡಿಸಿ ಇಂದು ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪ್ರತಿಭಟನೆ

ದೊರೆಸ್ವಾಮಿಯವರ ಮೇಲಿನ ಯತ್ನಾಳ್ ಹೇಳಿಕೆ ಖಂಡಿಸಿ ಇಂದು ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪ್ರತಿಭಟನೆ

- Advertisement -
- Advertisement -

ಸಿದ್ದರಾಮಯ್ಯನವರ ನೇತೃತ್ವದಲ್ಲಿ ದೊರೆಸ್ವಾಮಿಯವರ ಮೇಲಿನ ಯತ್ನಾಳ್ ಹೇಳಿಕೆ ಖಂಡಿಸಿ, ವಿಧಾನಸೌಧದ ಗಾಂಧಿ ಪ್ರತಿಮೆ‌ ಮುಂದೆ ಇಂದು ಸಂಜೆ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸ್ವಾತಂತ್ರ್ಯ ಸೇನಾನಿ ಎಚ್‌.ಎಸ್‌ ದೊರೆಸ್ವಾಮಿಯವರ ವಿರುದ್ಧ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನೀಡಿರುವ ಕೀಳು ಮಟ್ಟದ ಹೇಳಿಕೆಯನ್ನು ಖಂಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ,  ಯಡಿಯೂರಪ್ಪನವರೇ ಯತ್ನಾಳ್‌ ಬಾಯಿ ಮುಚ್ಚಿಸಿ, ಇಲ್ಲದಿದ್ದರೆ ಅನಾಹುತ ಕಾದಿದೆ ಎಂದು ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಹಿರಿಯ ಸ್ವಾತಂತ್ರ್ಯ‌ಹೋರಾಟಗಾರರಾದ ಎಚ್. ಎಸ್. ದೊರೆಸ್ವಾಮಿ ಅವರನ್ನು ನಿಂದಿಸಿ ಅತ್ಯಂತ‌ ಕೀಳಾಗಿ ಮಾತನಾಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮಕೈಗೊಂಡು ಬಾಯಿ ಮುಚ್ಚಿಸಿ, ಇಲ್ಲವಾದರೆ ಅವರ ಅಭಿಪ್ರಾಯ ನಿಮ್ಮ ಸರ್ಕಾರದ ಅಭಿಪ್ರಾಯ ಎಂದು ಒಪ್ಪಿಕೊಳ್ಳಿ ಎಂದು ನಿನ್ನೆ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದರು.

ಈ ನಾಡಿನ ಸಾಕ್ಷಿಪ್ರಜ್ಞೆ, ಅಪಾರ ಸಾಮಾಜಿಕ ಕಳಕಳಿಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿಯವರ ಬಗ್ಗೆ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅತ್ಯಂತ ಕೀಳು ಮಟ್ಟದ ಹೇಳಿಕೆ ನೀಡಿರುವುದು ಖಂಡನೀಯ ಹಾಗೂ ಅಕ್ಷಮ್ಯ. ಬಿಜೆಪಿಯು ತಕ್ಷಣ ಕೋಮುವಾದದ ವಿಷ ತಲೆಗೇರಿರುವ ಯತ್ನಾಳ್ ಅವರ ರಾಜೀನಾಮೆ ಪಡೆದು, ದೊರೆಸ್ವಾಮಿಯವರ ಕ್ಷಮೆ ಯಾಚಿಸಲಿ ಎಂದು ನಿನ್ನೆ ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿತ್ತು.

ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ’ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶತಾಯುಷಿ ಎಚ್‌.ಎಸ್‌ ದೊರೆಸ್ವಾಮಿಯವರ ಕುರಿತು ಪಾಕಿಸ್ತಾನದ ಏಜೆಂಟ್‌, ನಕಲಿ ಹೋರಾಟಗಾರ’ ಎಂದೆಲ್ಲಾ ಅವಮಾನ ಮಾಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...