“ನಿನ್ನ ಕಪಟತನ ಗೊತ್ತಿಲ್ಲ ಅನ್ನಕಂಡ್ಯಾ” - ಥೂತ್ತೇರಿ ಯಾಹೂ

ಸಿದ್ದರಾಮಯ್ಯ, ಡಿಕೆಶಿ ದಲಿತರ ಪರವೋ, ಇಲ್ಲ ಭಯೋತ್ಪಾದಕರ ಪರವೋ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್‌ರವರ ಪ್ರಶ್ನೆಗೆ ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ ಸಿದ್ದರಾಮಯ್ಯ ಉತ್ತರಿಸಿದ್ದಾರೆ.

ನಾವು ಮನುಷ್ಯರ ಪರ, ಮನುಷ್ಯವಿರೋಧಿಗಳ ಪರ ಅಲ್ಲ. ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ. ನಾವು ಕಟ್ಟುವವರ ಪರ, ಕೆಡವುವವರ ಪರ ಅಲ್ಲ. ನಮ್ಮನ್ನು ಮತ್ತು ನಿಮ್ಮನ್ನು ಇದಕ್ಕಿಂತ ಚೆನ್ನಾಗಿ ಹೇಗೆ ಪರಿಚಯಿಸಲಿ ಹೇಳಿ ಎಂದು ಸಿದ್ದರಾಮಯ್ಯ ಟ್ವಿಟ್ಟರ್‌ನಲ್ಲಿ ಉತ್ತರಿಸಿದ್ದಾರೆ.

ಮುಂದುವರಿದು ನಳಿನ್ ಕುಮಾರ್ ಕಟೀಲ್‌ರವರೆ, ನೀವು ದಲಿತರ ಪರವೋ? ಹಿಂದೂಗಳ ಪರವೋ? ನೀವೊಬ್ಬ ಹಿಂದುವಾದರೆ, ಅಖಂಡ ಶ್ರೀನಿವಾಸಮೂರ್ತಿ ಯಾಕೆ ಹಿಂದು ಅಲ್ಲ? ಅವರ್ಯಾಕೆ ಹಿಂದು ಆಗದೆ ಕೇವಲ ದಲಿತ ಆಗಿಬಿಟ್ಟರು? ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ನಿಮ್ಮ ಹಿರಿಯರಿಂದ ಕೇಳಿ ತಿಳಿದುಕೊಂಡು ಸ್ಪಷ್ಟಪಡಿಸುವಿರಾ ಎಂದು ಸಿದ್ದರಾಮಯ್ಯ ಮರುಪ್ರಶ್ನಿಸಿದ್ದಾರೆ.

ಮೊನ್ನೆ ನಡೆದ ಘಟನೆಗಳ ಹಿನ್ನೆಲೆಯಲ್ಲಿ ತುಷ್ಟೀಕರಣ ಹಾಗೂ ಸಾಮಾಜಿಕ ನ್ಯಾಯ, ತುಷ್ಟೀಕರಣ ಮತ್ತು ಶಾಂತಿ ವ್ಯವಸ್ಥೆಗಳ ನಡುವೆ ‘ತುಷ್ಟೀಕರಣವೆ’ ತನ್ನ ಮೊದಲ ಆದ್ಯತೆ ಎಂದು ಕಾಂಗ್ರೆಸ್ ಸಾಬೀತುಪಡಿಸಿದೆ. ಕಾಂಗ್ರೆಸ್ಸಿನ ಪರಿಸ್ಥಿತಿ “ಅಕ್ಕಿ ಮೇಲೆ ಆಸೆ, ನೆಂಟರ ಮೇಲೆ ಪ್ರೀತಿ” ಎಂಬಂತಾಗಿದೆ. ಗಲಭೆ ಮಾಡಿದ ಮತಾಂಧರ ಪರ ಮಾತಾಡಿದರೆ ಹಿಂದುಳಿದ ವರ್ಗದವರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ತಮ್ಮ ಶಾಸಕರ ಪರ ಮಾತಾಡಿದರೆ ಮುಸ್ಲಿಂರ ಓಟ್ ಬ್ಯಾಂಕ್ ಕಳೆದುಕೊಳ್ಳಬೇಕಾಗುತ್ತದೆ. ಕೊನೆಗೆ, ಪೊಲೀಸರ ಮೇಲೆ ಗೂಬೆ ಕೂರಿಸಿ ಬಾಯಿ ಮುಚ್ಚಿಕೊಂಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಟೀಕಿಸಿದ್ದರು.


ಇದನ್ನೂ ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ? 

Donate

ಈ ಲೇಖನ, ಈ ವೆಬ್‌ಸೈಟ್ ನಿಮಗೆ ಇಷ್ಟವಾಯಿತೇ? ನಿಮ್ಮ ಬೆಂಬಲ ಇದಕ್ಕೆ ಅಗತ್ಯ.

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

+ posts