Homeಮುಖಪುಟನಿದ್ರಿಸುತ್ತಿರುವವರನ್ನು ಎಬ್ಬಿಸಬಹುದು, ನಿದ್ರಿಸುತ್ತಿರುವಂತೆ ನಟಿಸುವವರನ್ನು ಎಬ್ಬಿಸುವುದು ಅಸಾಧ್ಯ: ಸಿದ್ದರಾಮಯ್ಯ..

ನಿದ್ರಿಸುತ್ತಿರುವವರನ್ನು ಎಬ್ಬಿಸಬಹುದು, ನಿದ್ರಿಸುತ್ತಿರುವಂತೆ ನಟಿಸುವವರನ್ನು ಎಬ್ಬಿಸುವುದು ಅಸಾಧ್ಯ: ಸಿದ್ದರಾಮಯ್ಯ..

- Advertisement -
- Advertisement -

ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆಂದು ಹೋದಾಗ ಅಲ್ಲಿನ ಸರ್ಕಾರ ಐದು ವರ್ಷ ಏನು ಅಭಿವೃದ್ಧಿ ಮಾಡಿದೆ ಎಂಬ ಬಗ್ಗೆ ಅನುಮಾನ ಮೂಡಿತು. ಹೈದರಾಬಾದ್- ಪೂನಾ ಹೆದ್ದಾರಿಯಲ್ಲಿ ವಾಹನ ಸಂಚರಿಸಲು ಪರದಾಡಬೇಕಿದೆ. ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ತವರು ರಾಜ್ಯದ ಸ್ಥಿತಿಯೇ ಹೀಗೆ. ಆದರೂ ಜನ ಬಿಜೆಪಿಗೆ ಮತ ನೀಡುತ್ತಾರೆಯೇ? ಎಂದು ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಿನ್ನೆ ನಡೆದ ಮಹಾರಾಷ್ಟ್ರ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲು ಅಲ್ಲಿಗೆ ತೆರಳಿದ್ದ ಅವರು ಚುನಾವಣೆಯ ನಂತರ ಅಲ್ಲಿನ ಸ್ಥಿತಿಯನ್ನು ವಿಶ್ಲೇಷಿಸಿದ್ದಾರೆ.

ಬಿಜೆಪಿಯವರು ಇವಿಎಂ ದುರುಪಯೋಗ ಮಾಡಿಕೊಂಡು ಚುನಾವಣೆಯಲ್ಲಿ ಗೆಲ್ಲುತ್ತಿರುವ ಸಾಧ್ಯತೆಗಳೂ ಇರಬಹುದು. ಅಭಿವೃದ್ಧಿ ಕಾರ್ಯಗಳನ್ನೇ ಮಾಡದಿದ್ದರೂ ಹೇಗೆ ಚುನಾವಣೆ ಗೆಲ್ಲಲು ಸಾಧ್ಯ? ಅಧಿಕಾರ ಹಿಡಿಯಲು ಚುನಾವಣಾ ಆಯೋಗ ಸೇರಿದಂತೆ ಎಲ್ಲ ಸ್ವಾಯತ್ತ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳತ್ತಿದೆ. ಚುನಾವಣೆ ಘೋಷಣೆಯಾದ ದಿನದಿಂದ ನೀತಿಸಂಹಿತೆ ಜಾರಿಯಾಗಬೇಕು. ಆದರೆ ರಾಜ್ಯದಲ್ಲಿ 70 ದಿನ ಮುಂಚಿತವಾಗಿ ಚುನಾವಣೆಯ ದಿನವನ್ನು ಘೋಷಿಸಿದರೂ ಇನ್ನೂ ನೀತಿಸಂಹಿತೆ ಜಾರಿಯಾಗಿಲ್ಲ. ಇವೆಲ್ಲ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ಪ್ರಭಾವ ಬೀರುತ್ತಿರುವುದಕ್ಕೆ ಸ್ಪಷ್ಟ ನಿದರ್ಶನಗಳು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಇವಿಎಂ ಯಂತ್ರಗಳು ನಂಬಿಕಾರ್ಹವಲ್ಲ ಎಂಬ ಕಾರಣದಿಂದ ಅಮೆರಿಕಾ, ಜಪಾನ್, ಜರ್ಮನಿಯಂತಹ ಮುಂದುವರೆದ ರಾಷ್ಟ್ರಗಳೇ ಸಾಂಪ್ರದಾಯಿಕ ಮತದಾನದ ಶೈಲಿಯಾದ ಮತಚೀಟಿ ಬಳಕೆಯನ್ನು ಮರು ಅಳವಡಿಕೆ ಮಾಡಿಕೊಂಡಿರುವಾಗ ಭಾರತ ಏಕೆ ಮಾಡಿಕೊಳ್ಳಬಾರದು? ಇಷ್ಟೊಂದು ಜನ ಇವಿಎಂ ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನಿಸಿದರೂ ಅದರ ಮೇಲೆ ಬಿಜೆಪಿಗರ ಅತಿಯಾದ ಪ್ರೀತಿಗೆ ಕಾರಣವೇನು? ಎಂದು ಪ್ರಶ್ನಿಸಿದ್ದಾರೆ.

ಪ್ರವಾಹದಲ್ಲಿ‌ ಮನೆ ಕಳೆದುಕೊಂಡವರಿಗೆ ಪರಿಹಾರಧನ ನೀಡಿಲ್ಲ, ತಾತ್ಕಾಲಿಕ ಶೆಡ್ ಹಾಕಿಕೊಟ್ಟಿಲ್ಲ, ಕೆಲವರಿಗೆ ಹತ್ತು ಸಾವಿರ ಕೊಟ್ಟಿದ್ದು ಬಿಟ್ಟರೆ ಇದುವರೆಗೂ ರಾಜ್ಯ ಸರ್ಕಾರ ಬೇರಾವ ಗಮನಾರ್ಹ ಕೆಲಸವನ್ನು ಮಾಡಿಲ್ಲ. ಈಗ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಸರ್ಕಾರ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಹೀಗಾದರೆ ಸಂತ್ರಸ್ತರ ಗತಿಯೇನು? ಯು.ಪಿ.ಎ ಅವಧಿಯಲ್ಲಿ ದೊರೆತ ಪರಿಹಾರಕ್ಕೂ, ಎನ್‌ಡಿಎ ಅವಧಿಯಲ್ಲಿ ದೊರೆತ ಪರಿಹಾರದ ಮೊತ್ತಕ್ಕು ತಾಳೆ ಹಾಕುವುದು ಮೂರ್ಖತನ. ಹಿಂದೆ ಸಂಭವಿಸಿದ ಪ್ರವಾಹಕ್ಕೂ, ಈ ಬಾರಿಯ ಪ್ರವಾಹಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಸಾವು, ನೋವು, ನಷ್ಟದ ಪ್ರಮಾಣ ಈ ಬಾರಿ ಅತಿ ಹೆಚ್ಚಾಗಿದೆ. ನಾನು ಮೊದಲ ಬಜೆಟ್ ಮಂಡಿಸಿದಾಗ ಒಂದು ಲಕ್ಷ ಕೋಟಿಯಿದ್ದ ಬಜೆಟ್ ಗಾತ್ರ, ಕೊನೆಯ ಬಜೆಟ್‌ಗೆ ರೂ.2 ಲಕ್ಷ ಕೋಟಿ ಮೀರಿತ್ತು. ಅಂದರೆ ಹಣದ ಮೌಲ್ಯ ಒಂದೇ ಪ್ರಕಾರವಾಗಿ ಇಲ್ಲ. ಹಾಗಾಗಿ ಕೇಂದ್ರ ನೀಡಿರುವ ಪರಿಹಾರ ಹಣದ ಪ್ರಮಾಣದಲ್ಲಿ ಸ್ವಲ್ಪ ಹೆಚ್ಚಿರಬಹುದು. ಹಾಗೆಂದ ಮಾತ್ರಕ್ಕೆ ಅಗತ್ಯ ಪ್ರಮಾಣದ ನೆರವು ದೊರೆತಿದೆ ಎಂದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೆರೆ ಪರಿಹಾರ ಕಾರ್ಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷವಾಗಿ ನಾವು ನಿತ್ಯವೂ ಸರ್ಕಾರವನ್ನು ಎಚ್ಚರಿಸುವ ಕಾರ್ಯ ಮಾಡುತ್ತಿದ್ದೇವೆ. ಆದರೆ ಇದು ಭಂಡಗೆಟ್ಟ ಸರ್ಕಾರ, ಅಧಿಕಾರದ ಹೊರತಾಗಿ ಅವರಿಗೆ ಬೇರೇನೂ ಬೇಡ.
“ನಿದ್ರಿಸುತ್ತಿರುವವರನ್ನು ಎಬ್ಬಿಸಬಹುದು, ನಿದ್ರಿಸುತ್ತಿರುವಂತೆ ನಟಿಸುವವರನ್ನು ಎಬ್ಬಿಸುವುದು ಅಸಾಧ್ಯದ ಮಾತು”.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಪ್ರತಿ ಸಾರಿ ಚುನಾವಣೆ ನಡೆದಾಗ ಇವರು ಇದನ್ನೇ ಹೇಳೋದು ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಾಗ ಈ ಮಾತುಗಳನ್ನು ಹೇಳಲಿಲ್ಲವೇ

LEAVE A REPLY

Please enter your comment!
Please enter your name here

- Advertisment -

Must Read

ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ...

0
ಕರ್ನಾಟಕದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಪಂಚ ಗ್ಯಾರಂಟಿಗಳ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯದ ಕೋಟ್ಯಾಂತರ ಜನರಿಗೆ ಆಶ್ರಯವಾದ ಗ್ಯಾರಂಟಿ ಯೋಜನೆಗಳನ್ನು 'ಮತಿ ಹೀನ ಉಚಿತ ಕೊಡುಗೆ'...