Homeಕರ್ನಾಟಕ'ಸಂಘ'ದೋಷದ ಫಲ: ದೇವೇಗೌಡರ 'ಕಾಂಗ್ರೆಸ್‌ ಮುಕ್ತ' ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

‘ಸಂಘ’ದೋಷದ ಫಲ: ದೇವೇಗೌಡರ ‘ಕಾಂಗ್ರೆಸ್‌ ಮುಕ್ತ’ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

- Advertisement -
- Advertisement -

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಂತ್ಯ ಕಾಣಲಿದೆ ಎಂದು ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ನಿನ್ನೆ ಹೇಳಿಕೆಯನ್ನು ಕೊಟ್ಟಿದ್ದರು. ಇದಕ್ಕೆ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್‌ಗಳ ಮೂಲಕ ಪ್ರತಿಕ್ರಿಯಿಸಿದ್ದು, ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ. ಇದುಸಂಘ’ದೋಷದ ಫಲ ಎಂದು ಹೇಳಿದ್ದಾರೆ.

ದೇವೇಗೌಡ ಅವರ ಹೇಳಿಕೆ ಬಗ್ಗೆ ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ ಮಾಡಿದ ಸಿದ್ದರಾಮಯ್ಯ, ನನ್ನ ಮತ್ತು ಡಿಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಮತ್ತು ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ ದೇವೇಗೌಡ ಅವರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ. ಆದರೆ ಜೆಡಿಎಸ್ ಮತ್ತು ಅವರ ಹೊಸ ಮಿತ್ರ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷ ಈ ಬಯಕೆ ಈಡೇರಿಕೆಗೆ ನಿರಂತರ ಪ್ರಯತ್ನ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಯಾವ ರಾಜಕೀಯ ಪಕ್ಷ ಕೂಡಾ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು “ಸಂಘ”ದೋಷದ ಫಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜಾತ್ಯತೀತ ಜನತಾ ಪಕ್ಷ ಎನ್ನುವುದು “ಬಿಜೆಪಿಯ ಬಿ ಟೀಮ್” ಎಂದು ಹಿಂದಿನಿಂದಲೇ ನಾನು ಹೇಳಿಕೊಂಡು ಬಂದಿದ್ದೇನೆ. ನನ್ನ ಮಾತನ್ನು ಒಪ್ಪಿಕೊಂಡು ತಮ್ಮ ಸೈದ್ದಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಪಕ್ಷವನ್ನು ಅಭಿನಂದಿಸುತ್ತೇನೆ. ಈ ಪಕ್ಷದ ಜಾತ್ಯತೀತ ಮುಖವನ್ನು ನಿಜ ಎಂದು ನಂಬಿ ಒಂದಷ್ಟು ಸೆಕ್ಯುಲರ್ ಮತದಾರರು ದಾರಿತಪ್ಪುವುದನ್ನು ಜೆಡಿಎಸ್ ಪಕ್ಷದ ಈ ನಿಲುವು ತಪ್ಪಿಸಿದೆ. ಇದು ಮುಂದಿನ ಚುನಾವಣೆಯನ್ನು ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವಿನ ನೇರ ಸಂಘರ್ಷವಾಗಿ ಪರಿವರ್ತಿಸಿದೆ. ಜಾತ್ಯತೀತತೆ ಮತ್ತು ಸೌಹಾರ್ದತೆಯ ಪರಂಪರೆಯ ಕರ್ನಾಟಕದ ಮತದಾರರು ಮುಂದಿನ ಚುನಾವಣೆಗಳಲ್ಲಿ ಸರಿಯಾದ ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ನನಗೆ ಇದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಎಚ್.ಡಿ. ದೇವೇಗೌಡ, 60 ವರ್ಷಗಳಿಂದ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ಕರ್ನಾಟಕದಲ್ಲಿ ಇವರು ಅಂತ್ಯ ಕಾಣುತ್ತಿದ್ದಾರೆ ಎಂದು ಇವತ್ತೇ ಹೇಳುತ್ತಿದ್ದೇನೆ. ನಾವು ಅವರನ್ನು ಸೋಲಿಸಿಯೇ ತೀರುತ್ತೇವೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಂತ್ಯ ಕಾಣಲಿದೆ. ಅಲ್ಲಿ ಪ್ರಧಾನಿ ಮೋದಿಯವರು ಶ್ರೀರಾಮ ಅನ್ನುತ್ತಾ ಉಪವಾಸ, ನದಿಸ್ನಾನ, ತಣ್ಣೀರು ಸ್ನಾನ ಇವೆಲ್ಲ ಮಾಡುತ್ತಿದ್ದಾರೆ. ಇಲ್ಲಿ ಇವರಿಗೆ ಸಿದ್ದರಾಮ ಮಾತ್ರ. ಸಿದ್ದರಾಮ ಹೆಸರಿನಲ್ಲಿ ಎನ್‌ಡಿಎ ಸೋಲಿಸಿ 20 ಸೀಟು ಗೆಲ್ಲುತ್ತೇವೆ ಎಂಬ ಅಹಂಕಾರದಿಂದ ಇವೆಲ್ಲ ಮಾಡುತ್ತಿದ್ದಾರೆ. 20 ಸೀಟು ಗೆಲ್ಲುವುದು ಅವರ ಕನಸು ಮಾತ್ರ ಎಂದು ಹೇಳಿಕೆ ಕೊಟ್ಟಿದ್ದರು.

 

ಇದನ್ನು ಓದಿ: ‘ಒಂದು ರಾಷ್ಟ್ರ ಒಂದು ಚುನಾವಣೆ‘: ಸಾರ್ವಜನಿಕ ಸಲಹೆ ಕೇಳಿದ ಕೋವಿಂದ್‌ ಸಮಿತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು...

0
ಮಣಿಪುರ ಹಿಂಸಾಚಾರದ ಸಮಯದಲ್ಲಿ ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳ ಉಲ್ಲೇಖವಾಗಿದ್ದು, ಮಹಿಳೆಯರನ್ನು ಗಲಭೆಕೋರರ ಗುಂಪಿಗೆ ಪೊಲೀಸರೇ ಒಪ್ಪಿಸಿದ್ದಾರೆ ಎಂದು ತಿಳಿಸಿದೆ. ಪೊಲೀಸರ...