Homeಮುಖಪುಟಬಿಜೆಪಿ ಅವಧಿಯಲ್ಲಿನ  ಕೋವಿಡ್ ಅಕ್ರಮಗಳ ತನಿಖೆಗೆ ಆಯೋಗ ರಚಿಸಿದ ರಾಜ್ಯ ಸರಕಾರ

ಬಿಜೆಪಿ ಅವಧಿಯಲ್ಲಿನ  ಕೋವಿಡ್ ಅಕ್ರಮಗಳ ತನಿಖೆಗೆ ಆಯೋಗ ರಚಿಸಿದ ರಾಜ್ಯ ಸರಕಾರ

- Advertisement -
- Advertisement -

ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎಂಬ ಆರೋಪ ಕೇಳಿ ಬಂದ  ಕೋವಿಡ್ ಹಗರಣದ ಬಗ್ಗೆ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಕಳೆದ ಬಿಜೆಪಿ ಸರ್ಕಾರ ಅವಧಿಯಲ್ಲಿ ಕೋವಿಡ್ ನಿರ್ವಹಣೆ, ತಡೆಗಟ್ಟಲು ಔಷಧ, ಉಪಕರಣಗಳು ಹಾಗೂ ಸಾಮಾಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳ ಕುರಿತು ತನಿಖೆಗೆ ನ್ಯಾ. ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿದ್ದು, 3 ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ.

2021ರ ಜುಲೈ- ಆಗಸ್ಟ್‌ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ನೀಡಿರುವ ವರದಿಯಲ್ಲಿನ ಗಂಭೀರ ಆರೋಪಗಳ  ಹಿನ್ನೆಲೆ ತನಿಖಾ ಆಯೋಗ ರಚನೆ ಮಾಡಲಾಗಿದೆ.

ತನಿಖೆಯ ವೇಳೆ  ಆಯಾ ಇಲಾಖೆಯ ಅಧಿಕಾರಿಗಳು ಆಯೋಗವು ಕಾಲಾನುಕಾಲಕ್ಕೆ ತನಿಖೆಗಾಗಿ ಅಪೇಕ್ಷಿಸುವ ಎಲ್ಲ ಕಡತಗಳು,ದಾಖಲಾತಿಗಳನ್ನು ಒದಗಿಸವಂತೆ ಸೂಚಿಸಲಾಗಿದೆ.

ಈ ಮೊದಲು ರಾಜ್ಯ ಸರಕಾರ 40 ಪರ್ಸೆಂಟ್​ಕಮಿಷನ್ ಆರೋಪದ ಬಗ್ಗೆ ತನಿಖೆಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿತ್ತು.

ಇದನ್ನು ಓದಿ: ರಾಜಸ್ಥಾನ: ಸರಕಾರಿ ಶಾಲೆಯಲ್ಲಿ ದಲಿತ ಬಾಲಕ ಆತ್ಮಹತ್ಯೆ ಪ್ರಕರಣ; ಇಬ್ಬರು ಶಿಕ್ಷಕರು ಅಮಾನತು

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...