Homeಕರ್ನಾಟಕಜಾತಿಗಣತಿ ವರದಿ ನವೆಂಬರ್‌ನಲ್ಲಿ ಸಲ್ಲಿಸುವ ನಿರೀಕ್ಷೆ ಇದೆ: ಸಿಎಂ ಸಿದ್ದರಾಮಯ್ಯ

ಜಾತಿಗಣತಿ ವರದಿ ನವೆಂಬರ್‌ನಲ್ಲಿ ಸಲ್ಲಿಸುವ ನಿರೀಕ್ಷೆ ಇದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಜಾತಿಗಣತಿ ಆಯೋಗವು ನವೆಂಬರ್‌ನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮೈಸೂರಿನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ,  ಈ ಹಿಂದೆ ಕಾಂತರಾಜು ಆಯೋಗವು ನೀಡಿದ್ದ ವರದಿಯನ್ನು ಅಂದಿನ ಸಿಎಂ ಎಚ್.ಡಿ. ಕುಮಾರಸ್ವಾಮಿ ಸ್ವೀಕರಿಸಲಿಲ್ಲ. ಈಗ ಆಯೋಗಕ್ಕೆ ಹೊಸ ಅಧ್ಯಕ್ಷರು ಇದ್ದಾರೆ. ಅವರು ವರದಿ ಸಲ್ಲಿಸಿದ ನಂತರ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸರ್ಕಾರದ ಯೋಜನೆಗಳನ್ನು ಎಲ್ಲ ವರ್ಗಗಳ ಜನರಿಗೆ ಸಮಾನವಾಗಿ ತಲುಪಿಸಲು ಜಾತಿ ಮತ್ತು ಸಾಮಾಜಿಕ ಗಣತಿಯ ಅಂಕಿ ಅಂಶಗಳು ಅಗತ್ಯ. ಸಬ್‌ ಕ ಸಾಥ್ ಸಬ್‌ಕ ವಿಕಾಸ್ ಎನ್ನುವ ಪ್ರಧಾನಿ ಜಾತಿಗಣತಿಯನ್ನು ಏಕೆ ವಿರೋಧಿಸುತ್ತಿದ್ದಾರೆ ಎಂದು ಸಿಎಂ ಪ್ರಶ್ನಿಸಿದ್ದಾರೆ.

ಈ ಮೊದಲು ಜಾತಿಗಣತಿ ಕುರಿತು ಬೆಳಗಾವಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಹೆಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾಂತರಾಜು ಅವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದು, ವರದಿ  ಸಿದ್ದಪಡಿಸಿದ್ದರು. ವರದಿ ಸಲ್ಲಿಸಲು ಹೋದಾಗ ಅದನ್ನು ಅವರು ಸ್ವೀಕರಿಸಲಿಲ್ಲ. ಆಗಿನ ಕಾರ್ಯದರ್ಶಿಗಳು ವರದಿಗೆ ಸಹಿ ಮಾಡಿಲ್ಲ ಎಂದು ಹೇಳಿದ್ದರು.

ಜಾತಿಗಣತಿ ಹಾಗೂ ಸಾಮಾಜಿಕ ಆರ್ಥಿಕ ಸಮೀಕ್ಷೆ ಮಾಡಬೇಕೆಂದು ನಾನು ಹಿಂದೆ ಆದೇಶ ಮಾಡಿದ್ದು, ಆಗ ಕಾಂತರಾಜು ಆವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ನಮ್ಮ ಸರ್ಕಾರದ ಅವಧಿಯಲ್ಲಿ ವರದಿ ಪೂರ್ಣವಾಗಿರಲಿಲ್ಲ. ಸಮ್ಮಿಶ್ರ ಸರ್ಕಾರ ಇರುವಾಗ ಅಂದಿನ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿ ಪುಟ್ಟರಂಗಶೆಟ್ಟಿ ಇದ್ದರು. ಆಗ ಅವರು ವರದಿಯನ್ನು  ಪಡೆಯಲಿಲ್ಲ ಎಂದು ಹೇಳಿದ್ದಾರೆ.

ಬಿಹಾರ ಸರಕಾರ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಿತ್ತು. ಪ್ರತಿಪಕ್ಷಗಳ INDIA ಒಕ್ಕೂಟ ವರದಿಯನ್ನು ಸ್ವಾಗತ ಮಾಡಿತ್ತು. ದೇಶದಲ್ಲೇ ‘ಬಿಹಾರ’ ಜಾತಿಗಣತಿ ವರದಿ ಸಿದ್ಧಪಡಿಸಿದ ಮೊದಲ ರಾಜ್ಯವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಜಾತಿಗಣತಿ ವರದಿ ಬಿಡುಗಡೆ ಮಾಡುವಂತೆ ಆಗ್ರಹ ಕೇಳಿ ಬಂದಿತ್ತು.

ಇದನ್ನು ಓದಿ: ಬಿಹಾರ ಸರಕಾರದಂತೆ ಕರ್ನಾಟಕದಲ್ಲೂ ಜಾತಿ ಗಣತಿ ವರದಿ ಬಹಿರಂಗಪಡಿಸಬೇಕು: ಬಿ.ಕೆ ಹರಿಪ್ರಸಾದ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...