Homeಮುಖಪುಟಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್‌ ಮೇಲೆ ಸಿಬಿಐ ದಾಳಿ: ಸಿದ್ದರಾಮಯ್ಯ ಆರೋಪ

ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್‌ ಮೇಲೆ ಸಿಬಿಐ ದಾಳಿ: ಸಿದ್ದರಾಮಯ್ಯ ಆರೋಪ

- Advertisement -
- Advertisement -

ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ ಕಾರಣಕ್ಕೆ ಮಾಜಿ ರಾಜ್ಯಪಾಲರು ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್ ಅವರ ಮೇಲೆ ಸಿಬಿಐ ದಾಳಿ ನಡೆದಿದೆ ಮತ್ತು ಅವರನ್ನು ಬೆದರಿಸುವ ಪ್ರಯತ್ನ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ಸತ್ಯಪಾಲ್ ಮಲಿಕ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ಬಗ್ಗೆ ಮಾದ್ಯಮ ಪ್ರಕಟನೆ ಹೊರಡಿಸಿರುವ ಸತ್ಯಪಾಲ್ ಮಲಿಕ್, ಪುಲ್ವಾಮ ದುರಂತ ನಡೆದ ಸಮಯದಲ್ಲಿ ಅವರು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಕಾರಣ ಕೇಂದ್ರದ ವಿರುದ್ಧದ ಅವರ ಆರೋಪವನ್ನು ತಳ್ಳಿಹಾಕಲಾಗದು. ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನಿರೀಕ್ಷೆಯಂತೆ ಅವರಿಗೆ ಸಿಬಿಐ ತನಿಖೆ ಮೂಲಕ ಚಿತ್ರಹಿಂಸೆ ನೀಡಲು ಹೊರಟಿದೆ, ಈ ಕೃತ್ಯ ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.

ಕೇಂದ್ರ ಸರಕಾರ ತಮ್ಮ ದುಷ್ಟಬುದ್ದಿಯನ್ನು ತಿದ್ದಿಕೊಂಡು, ಸತ್ಯಪಾಲ್ ಮಲಿಕ್ ಅವರ ಮೇಲಿನ ದೌರ್ಜನ್ಯ ನಿಲ್ಲಿಸಬೇಕು. ಸತ್ಯವನ್ನು ಸಹಿಸದಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮನ್ನು ಪ್ರಶ್ನಿಸುವವರ ವಿರುದ್ಧ ಐಟಿ, ಇಡಿ, ಸಿಬಿಐಗಳನ್ನು ಛೂ ಬಿಟ್ಟು ಬಲತ್ಕಾರದಿಂದ ಬಾಯಿ ಮುಚ್ಚಿಸುವ ಪ್ರಯತ್ನನ್ನು ಮುಂದುವರಿಸಿದ್ದಾರೆ. ಆದರೆ ದೇಶದ ಜನತೆ ಇಂತಹ ಕುಟಿಲ ಕಾರಸ್ತಾನಗಳನ್ನು ಅರ್ಥಮಾಡಿಕೊಳ್ಳುವಷ್ಟು ಪ್ರಬುದ್ಧರಾಗಿದ್ದಾರೆ ಎಂದು ಎಕ್ಸ್‌ನಲ್ಲಿ ಸಿದ್ದರಾಮಯ್ಯ ಪೋಸ್ಟ್‌ ಮಾಡಿದ್ದಾರೆ.

ಏನಿದು ಪ್ರಕರಣ: ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದ ಭ್ರಷ್ಟಾಚಾರದ ತನಿಖೆಯ ಭಾಗವಾಗಿ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ನಿವಾಸ ಸೇರಿ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಆಗಸ್ಟ್ 23, 2018ರಿಂದ ಅಕ್ಟೋಬರ್ 30, 2019ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಮಲಿಕ್ ಅವರು ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದ ಎರಡು ಕಡತಗಳನ್ನು ತೆರವುಗೊಳಿಸಲು 300 ಕೋಟಿ ರೂಪಾಯಿ ಲಂಚದ ಆಫರ್ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಏಪ್ರಿಲ್ 20, 2022ರಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಮನವಿ ಮೇರೆಗೆ ಈ ಬಗ್ಗೆ ಪ್ರಕರಣವನ್ನು ದಾಖಲಿಸಲಾಗಿದೆ. ಅಂದಿನ ಕಿರು ಜಲವಿದ್ಯುತ್ ಯೋಜನೆಯ ಚಯರ್‌ ಮ್ಯಾನ್‌, ಎಂಡಿ, ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್‌ನ (ಸಿವಿಪಿಪಿಪಿಎಲ್) ಇಬ್ಬರು ನಿರ್ದೇಶಕರು, ಖಾಸಗಿ ಕಂಪನಿ ಮತ್ತು ಇತರ ಅಪರಿಚಿತರ ವಿರುದ್ಧ ಅವ್ಯವಹಾರದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ಕಿರು ಜಲವಿದ್ಯುತ್ ಯೋಜನೆಯ ಸಿವಿಲ್ ಕಾಮಗಾರಿಗೆ ಪ್ಯಾಕೇಜ್‌ನ್ನು ಇ-ಟೆಂಡರ್ ಮಾಡುವ ಮಾರ್ಗಸೂಚಿಗಳನ್ನು ಅನುಸರಿಸದೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಸಿವಿಪಿಪಿಪಿಎಲ್ (ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್ಸ್ (ಪಿ) ಲಿಮಿಟೆಡ್) ಮಂಡಳಿಯ ಸಭೆಯಲ್ಲಿ ಮತ್ತೆ ಹರಾಜಿನ ಮೂಲಕ ಇ-ಟೆಂಡರ್ ಮೂಲಕ ಮರು ಟೆಂಡರ್ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದ್ದರೂ, ಚಾಲ್ತಿಯಲ್ಲಿರುವ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸಿದ ನಂತರ ಅದನ್ನು ಕಾರ್ಯಗತಗೊಳಿಸಲಾಗಿಲ್ಲ. ಅಂತಿಮವಾಗಿ ಟೆಂಡರ್‌ನ್ನು ಖಾಸಗಿ ಕಂಪನಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿತ್ತು.

ಈ ಮೊದಲು ಇದೇ ಪ್ರಕರಣಕ್ಕೆ ಸಂಬಂಧಿಸಿ ಡಿಸೆಂಬರ್ 2ರಂದು ಸಿಬಿಐ ದೆಹಲಿ, ನೋಯ್ಡಾ, ಚಂಡೀಗಢ ಮತ್ತು ಶಿಮ್ಲಾದ ಆರು ಸ್ಥಳಗಳಲ್ಲಿ ಶೋಧ ನಡೆಸಿತ್ತು. ಇದಲ್ಲದೆ ಜನವರಿ 29, 2024ರಂದು ಸಿಬಿಐ, ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರದ ಸುಮಾರು 8 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. 21ಲಕ್ಷಕ್ಕೂ ಹೆಚ್ಚು ನಗದು ಜೊತೆಗೆ ಡಿಜಿಟಲ್ ಸಾಧನಗಳು, ಕಂಪ್ಯೂಟರ್‌ಗಳು, ದಾಖಲೆಗಳನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದರು.

ಈ ಮೊದಲು ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದ ಸತ್ಯಪಾಲ್‌ ಮಲಿಕ್‌, 2024ರ ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ಮತ್ತು ಮೋದಿ ದೇಶದಲ್ಲಿ ಯಾವುದೇ ರೀತಿಯ ಅನಾಹುತ ಮಾಡಿಸಬಹುದು ಎಂದು  ಹೇಳಿಕೆಯನ್ನು ನೀಡಿದ್ದರು. ಈ ಮೊದಲು ಪುಲ್ವಮಾ ದಾಳಿ ಬಗ್ಗೆ ಮೋದಿ ಸರಕಾರದ ಬಗ್ಗೆ ಗಂಭೀರವಾದ ಆರೋಪವನ್ನು ಮಾಡಿದ್ದ ಸತ್ಯಪಾಲ್ ಮಲಿಕ್‌, ಪುಲ್ವಾಮಾ ದಾಳಿಗೂ ಮೊದಲು ಸಿಆರ್‌ಪಿಎಫ್ ಯೋಧರ ಸಾಗಣೆಗೆ ಐದು ವಿಮಾನಗಳಿಗೆ ಬೇಡಿಕೆ ಇಡಲಾಗಿತ್ತು. ಆದರೆ, ಗೃಹ ಸಚಿವಾಲಯವು ಅದನ್ನು ಒದಗಿಸಲಿಲ್ಲ. ಅಲ್ಲದೆ ಅಲ್ಲಿ ಇನ್ನೂ ಹಲವು ಲೋಪಗಳಾಗಿದ್ದು, ರಸ್ತೆ ಮಾರ್ಗವಾಗಿ ತೆರಳುವ ವಾಹನಗಳನ್ನು ತಪಾಸಣೆ ಮಾಡಲು ಯಾವುದೇ ಗಸ್ತು ವಾಹನಗಳಾಗಲಿ, ತಪಾಸಣಾ ಠಾಣೆಗಳಾಗಲಿ ಇರಲಿಲ್ಲ ಎಂದು ಸತ್ಯಪಾಲ್ ಮಲಿಕ್ ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕರೆ ಮಾಡಿ, ಸರ್ಕಾರದ ಲೋಪಗಳ ಕುರಿತು ಏನೂ ಮಾತಾಡಬಾರದೆಂದು ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಕರೆ ಮಾಡಿ ಮೌನವಾಗಿರುವಂತೆ ಸೂಚಿಸಿದ್ದರು ಎಂದು ಹೇಳಿದ್ದರು.

ಇದನ್ನು ಓದಿ: ‘ಮುಸ್ಲಿಂ ವಿವಾಹ-ವಿಚ್ಛೇದನ ನೋಂದಣಿ ಕಾಯಿದೆ’ ರದ್ದುಪಡಿಸಿದ ಅಸ್ಸಾಂ ಬಿಜೆಪಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...