Homeಮುಖಪುಟಚಂದ್ರನ ಮೇಲೆ ವಿಕ್ರಂ ಲ್ಯಾಂಡರ್: ಐತಿಹಾಸಿಕ ಸಾಧನೆ ಎಂದ ಸಿಎಂ ಸಿದ್ದರಾಮಯ್ಯ

ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್: ಐತಿಹಾಸಿಕ ಸಾಧನೆ ಎಂದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಇಳಿದಿರುವುದು ಐತಿಹಾಸಿಕ ಸಾಧನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಬೆಳಿಗ್ಗೆ ಇಸ್ರೋ ಸಂಸ್ಥೆಗೆ ಭೇಟಿ ನೀಡಿ ಅಧ್ಯಕ್ಷ ಎಸ್.ಸೋಮನಾಥ್ ಹಾಗೂ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಇಸ್ರೋ ಸಾಧನೆಯನ್ನು ಮೆಚ್ಚಿ ಅಭಿನಂದಿಸಬೇಕು. ಇಸ್ರೋ ಸಾಧನೆಯಿಂದ ಇಡೀ ಜಗತ್ತು ಭಾರತದ ಕಡೆಗೆ ನೋಡುವ ಕೆಲಸವಾಗಿದೆ . ಜಗತ್ತಿನಲ್ಲಿಯೇ ರಷ್ಯಾ, ಅಮೆರಿಕ, ಚೈನಾ ದೇಶಗಳನ್ನು ಬಿಟ್ಟರೆ ಚಂದ್ರನ ದಕ್ಷಿಣ ಭಾಗದಲ್ಲಿ ಕಾಲಿರಿಸಿರುವ ನಾಲ್ಕನೇ ದೇಶ ಭಾರತ. ನಾವೆಲ್ಲರೂ ಇಸ್ರೋ ಸಾಧನೆಯನ್ನು ಮೆಚ್ಚಿ ಅಭಿನಂದಿಸಬೇಕು ಎಂದು ಹೇಳಿದ್ದಾರೆ.

ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿ ಇಸ್ರೋ ವಿಜ್ಞಾನಿಗಳನ್ನು ಸರ್ಕಾರ ಗೌರವಿಸಲಿದೆ ಎಂದು ಹೇಳಿದ್ದಾರೆ. ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿದಂತೆ ಕರ್ನಾಟಕದ 500 ವಿಜ್ಞಾನಿಗಳು ಇದರಲ್ಲಿ ಪಾಲ್ಗೊಂಡಿದ್ದು, ಅವರೆಲ್ಲರಿಗೂ ಸನ್ಮಾನಿಸಲಾಗುವುದು ಎಂದರು. 3 ಲಕ್ಷ 84 ಕಿಮೀ ಪ್ರಯಾಣ ಮಾಡಿರುವ ವಿಕ್ರಂ ಸಾಧನೆ ಕಡಿಮೆಯಲ್ಲ. ಸರ್ಕಾರದ ಸಹಕಾರ ಬೆಂಬಲ ಇರಲಿದೆ. ಇದು ದೇಶದ ಹೆಮ್ಮೆ ಎಂದರು.

ವಿಜ್ಞಾನಿಗಳು ಹಗಲು ಇರುಳು ಎನ್ನದೆ ಇದಕ್ಕಾಗಿ ಶ್ರಮಿಸಿದ್ದಾರೆ. ದೇಶದ ಒಟ್ಟು ಒಂದು ಸಾವಿರ ವಿಜ್ಞಾನಿಗಳು ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಿಂದಲೇ 500 ಜನ ಪಾಲ್ಗೊಂಡಿದ್ದಾರೆ. ಸೆ. 2ರ ನಂತರ ಸನ್ಮಾನ ಕಾರ್ಯಕ್ರಮದ ದಿನಾಂಕ ನಿಗದಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನು ಓದಿ:  ಮೋದಿ ಕುರಿತು ಸುದ್ದಿ ಮಾಡಿದ ಬಳಿಕ ‘ಸೈಬರ್ ದಾಳಿ” ನಡೆದಿದೆ ಎಂದ ದ. ಆಫ್ರಿಕಾದ ಸುದ್ದಿ ವೆಬ್‌ಸೈಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...