Homeಕರ್ನಾಟಕಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ

- Advertisement -
- Advertisement -

ಶತಮಾನದ ಸಂತ ಎಂಬ ಗೌರವಕ್ಕೆ ಪಾತ್ರರಾದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಹಲವು ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಸಂಜೆ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು.

ಸ್ವಾಮೀಜಿಯವರ ಅಂತಿಮ ದರ್ಶನ ಪಡೆಯುವುದಕ್ಕಾಗಿ ವಿಜಯಪುರದ ಜ್ಞಾನಯೋಗಾಶ್ರಮದತ್ತ ಜನರು ಸಾಗರೋಪಾದಿಯಲ್ಲಿ ಧಾವಿಸುತ್ತಿದ್ದಾರೆ. ಮಂಗಳವಾರ ಸಂಜೆ 5 ಗಂಟೆಗೆ ಸ್ವಾಮೀಜಿಯವರ ಸಂಕಲ್ಪದ ಪ್ರಕಾರದಂತೆಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ.

ಕೆಲವು ವರ್ಷಗಳ ಹಿಂದೆಯೇ ತಮ್ಮ ಅಂತ್ಯಕ್ರಿಯೆಯ ವಿಧಿವಿಧಾನಗಳ ಬಗ್ಗೆ ಇಚ್ಛೆಯನ್ನು ಸ್ಪಷ್ಟವಾಗಿ ತಿಳಿಸಿದ್ದ ಸ್ವಾಮೀಜಿಯವರು ತಮಗಾಗಿ ಯಾವುದೇ ಸ್ಮಾರಕ ನಿರ್ಮಿಸಬಾರದು ಎಂಬ ಸೂಚಿಸಿದ್ದರು ಎಂದು ಯೋಗಾಶ್ರಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೈತ ಕುಟುಂಬದಲ್ಲಿ 1941ರ ಅಕ್ಟೋಬರ್ 24ರಂದು ಜನಿಸಿದ್ದ ಸ್ವಾಮೀಜಿಯವರ ಪೂರ್ವಾಶ್ರಮದ ಹೆಸರು ಸಿದ್ದಗೊಂಡಪ್ಪ. ಬಿಜ್ಜರಗಿ ಗ್ರಾಮದ ಶಾಲೆಯಲ್ಲಿ 4ನೇ ತರಗತಿವರೆಗೆ ಓದಿದ ನಂತರ ಜ್ಞಾನಯೋಗಾಶ್ರಮದ ಮಲ್ಲಿಕಾರ್ಜುನ ಸ್ವಾಮೀಜಿಯವರಲ್ಲಿ ಆಶ್ರಯಪಡೆದರು.

ತಾವು ಪ್ರವಚನ ಮಾಡುವ ಸ್ಥಳಗಳಿಗೆ ಮಲ್ಲಿಕಾರ್ಜುನಾ ಸ್ವಾಮೀಜಿಯವರು, ಸಿದ್ದೇಶ್ವರರನ್ನು ಕರೆದುಕೊಂಡು ಹೋಗುತ್ತಿದ್ದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಸಿದ್ದೇಶ್ವರ ಸ್ವಾಮೀಜಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದರು. ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಪಡೆದರು.

ಕನ್ನಡದ ಜೊತೆ ಸಂಸ್ಕೃತ, ಇಂಗ್ಲೀಷ್, ಮರಾಠಿ, ಮತ್ತು ಹಿಂದಿ ಭಾಷೆಗಳಲ್ಲಿ ಸಿದ್ದೇಶ್ವರ ಸ್ವಾಮೀಜಿಯವರಿಗೆ ಅಪಾರ ಪಾಂಡಿತ್ಯವಿತ್ತು. ಅತ್ಯಂತ ಸರಳವಾಗಿ ಬದುಕುತ್ತಾ, ಅಧ್ಯಾತ್ಮವನ್ನು ಬೋಧಿಸಿದರು.

ಜನತೆಗೆ ಜ್ಞಾನದಾಸೋಹ ನೀಡುವ ಮೂಲಕ ಜ್ಞಾನಯೋಗಾಶ್ರಮ, ಉತ್ತರ ಕರ್ನಾಟಕದ ಜನಮಾನಸದಲ್ಲಿ ಬಹಳವಾಗಿ ಮಹತ್ವ ಪಡೆಯಿತು. ವಿಜಯಪುರ ಜ್ಞಾನಯೋಗಾಶ್ರಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಸಿದ್ಧೇಶ್ವರರು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

ಕೊಲ್ಹಾಪುರದಲ್ಲಿ ತಮ್ಮ ಗುರುಗಳಾದ ಮಲ್ಲಿಕಾರ್ಜುನ ಸ್ವಾಮೀಜಿಯವರು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ ‘ಸಿದ್ದಾಂತ ಶಿಖಾಮಣಿ’ ಎಂಬ ಪುಸ್ತಕವನ್ನು ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು. ಸ್ವಾಮೀಜಿಯವರು ವಚನಕಾರರ ಅಧ್ಯಾತ್ಮವನ್ನು ಜನರಿಗೆ ಸರಳವಾಗಿ ಬಿಡಿಸಿ ಹೇಳಿದರು. ಬದುಕಿನ ಮಾರ್ಗವನ್ನು ತೋರಿದರು. ‘ಪತಂಜಲಿಯ ಯೋಗಶಾಸ್ತ್ರ’ವನ್ನು ಸಂಪಾದಿಸಿದರು.

ಗಣ್ಯರ ಸಂತಾಪ

ಸ್ವಾಮೀಜಿಯವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿದ್ದು, “ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು” ಎಂದಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರತಿಕ್ರಿಯಿಸಿದ್ದು, “ದೇಶ ಕಂಡ ಶ್ರೇಷ್ಟ ಸಂತರು,ಆಧ್ಯಾತ್ಮಿಕ ಪ್ರವಚನಕಾರ, ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿರವರು ಲಿಂಗೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖ ಉಂಟುಮಾಡಿದೆ. ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ,ಅವರ ಭಕ್ತ ಸಮೂಹಕ್ಕೆ ಈ ದುಃಖ ತಡೆಯುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದು, “ಜ್ಞಾನಯೋಗಾಶ್ರಮದ ಪೀಠಾಧೀಶರಾದ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ಅತೀವ ನೋವುಂಟುಮಾಡಿದೆ. ಧಾರ್ಮಿಕ ಪ್ರವಚನದ ಮೂಲಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿದ್ದ ದಾರ್ಶನಿಕ ಗುರುವಿನ ಅಗಲಿಕೆ ವೈಯಕ್ತಿಕವಾಗಿ ಮತ್ತು ನಾಡಿಗೆ ತುಂಬಲಾಗದ ನಷ್ಟ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...