Homeಮುಖಪುಟಬಿಜೆಪಿಯಿಂದ 'ಸಿದ್ದು ನಿಜಕನಸುಗಳು' ಪುಸ್ತಕ ಬಿಡುಗಡೆ ಇಂದು: ಕಾರ್ಯಕ್ರಮ ರದ್ದುಗೊಳಿಸಲು ಕಾಂಗ್ರೆಸ್ ದೂರು

ಬಿಜೆಪಿಯಿಂದ ‘ಸಿದ್ದು ನಿಜಕನಸುಗಳು’ ಪುಸ್ತಕ ಬಿಡುಗಡೆ ಇಂದು: ಕಾರ್ಯಕ್ರಮ ರದ್ದುಗೊಳಿಸಲು ಕಾಂಗ್ರೆಸ್ ದೂರು

- Advertisement -
- Advertisement -

ಆಧಾರ ರಹಿತವಾಗಿ, ಧರ್ಮಗಳ ನಡುವೆ ಕಲಹ ಉಂಟು ಮಾಡುವಂತೆ ರಚನೆಯಾಗಿರುವ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟ ಮಾಡದಂತೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿರುವ ಬೆನ್ನಲ್ಲೆ ಬಿಜೆಪಿಯು ಇಂದು ‘ಸಿದ್ದು ನಿಜಕನಸುಗಳು’ ಎಂಬ ಪುಸ್ತಕ ಬಿಡುಗಡೆಗೆ ಮುಂದಾಗಿದೆ. ಇದು ಮಾಜಿ ಸಿಎಂ ಸಿದ್ದರಾಮಯ್ಯನವರ ತೇಜೋವಧೆ ಮಾಡಲು ನಡೆಸಿರುವ ಪಿತೂರಿ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷವು ಪುಸ್ತಕ ಬಿಡುಗಡೆ ಕಾರ್ಯಕ್ರಮ ರದ್ದುಪಡಿಸುವಂತೆ ಒತ್ತಾಯಿಸಿ ಪೊಲೀಸರಿಗೆ ದೂರು ನೀಡಿದೆ.

“ಸಿದ್ದು ನಿಜಕನಸುಗಳು” ಎಂಬ ಪುಸ್ತಕದ ಮೂಲಕ ಹಲವು ಸೂಕ್ಷ್ಮ ವಿಷಯಗಳನ್ನು ಬಹಿರಂಗಪಡಿಸುವ ಜತೆ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಿ ಕೊಡುವ ಪ್ರಯತ್ನವನ್ನು ಶ್ಲಾಘಿಸುತ್ತೇನೆ. ಈ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ. ನೀವೂ ಬನ್ನಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಆಹ್ವಾನ ಪತ್ರಿಕೆಯನ್ನು ಟ್ವೀಟ್ ಮಾಡಿದ್ದಾರೆ.

ಆಹ್ವಾನ ಪತ್ರಿಕೆಯ ಪ್ರಕಾರ ಈ ಪುಸ್ತಕವನ್ನು ವಿಕೆಪಿ ಎಂಬ ಅನಾಮಧೇಯ ವ್ಯಕ್ತಿ ಬರೆದಿದ್ದಾರೆ. ಇದು ಮೊದಲ ಸಂಪುಟವಾಗಿದ್ದು, ಇನ್ನು ಹಲವು ಸಂಪುಟಗಳನ್ನು ರಚಿಸುವ ಉದ್ದೇಶ ಬಿಜೆಪಿಗಿದೆ ಎಂಬುದು ತಿಳಿದುಬಂದಿದೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಟೌನ್‌ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಡಾ.ಅಶ್ವಥ್ ನಾರಾಯಣ್ ಪುಸ್ತಕ ಬಿಡುಗಡೆ ಮಾಡಿದರೆ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪಠ್ಯಪುಸ್ತಕ ತಿರುಚಿದ ಆರೋಪ ಹೊತ್ತಿರುವ ಬಲಪಂಥೀಯ ಬರಹಗಾರ-ಪತ್ರಕರ್ತರಾದ ರೋಹಿತ್ ಚಕ್ರತೀರ್ಥ, ವೃಶಾಂಕ್ ಭಟ್, ಸಂತೋಷ್ ತಮ್ಮಯ್ಯ  ಮತ್ತು ರಾಕೇಶ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ ಎನ್ನಲಾಗಿದೆ.

ಈ ಪುಸ್ತಕವು ಸಿದ್ದರಾಮಯ್ಯನವರ ವಿರುದ್ಧ ಇಲ್ಲ ಸಲ್ಲದ ಅಪಪ್ರಚಾರ ಮಾಡಲು ಮತ್ತು ಒಂದು ಸಮುದಾಯವನ್ನು ತುಚ್ಛೀಕರಣ ಮಾಡಲು ರಚಿಸಲಾಗಿದೆ ಎಂದು ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

“ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ದುರುದ್ದೇಶದ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜ.9ರಂದು ಮಧ್ಯಾಹ್ನ 3 ಗಂಟೆಗೆ ತಮ್ಮ ಠಾಣಾ ವ್ಯಾಪ್ತಿಯಲ್ಲಿ ಬರುವ ಪುರಭವನದಲ್ಲಿ ಈ ಕಾರ್ಯಕ್ರಮ ಇರುವ ಬಗ್ಗೆ ಆಹ್ವಾನ ಪತ್ರಿಕೆ ಹರಿದಾಡುತ್ತಿದೆ ಸಿದ್ದರಾಮಯ್ಯ ಅವರ ವಿರೂಪಗೊಳಿಸಿದ ಭಾವಚಿತ್ರವನ್ನು ಬಳಸಿ ‘ಸಿದ್ದು ನಿಜಕನಸುಗಳು’ ಎಂಬ ಶೀರ್ಷಿಕೆಯಡಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪತ್ರಿಕೆಯಲ್ಲಿನ ಪುಸ್ತಕದ ಮುಖಪುಟ ವಿಪಕ್ಷ ನಾಯಕರ ಅವಹೇಳನಕಾರಿ, ಕಪೋಲಕಲ್ಪಿತ, ಪ್ರಚೋದನಕಾರಿ ಲೇಖನಗಳನ್ನು ಒಳಗೊಂಡಿರುವುದು ಸ್ಪಷ್ಟವಾಗಿದೆ. ಇಂತಹ ದ್ವೇ‍ಷಪೂರಿತ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೆ ಕಾಂಗ್ರೆಸ್ ಪಕ್ಷವು ಬಿಜೆಪಿಯ ಪುಸ್ತಕ ಬಿಡುಗಡೆಗೆ ತಿರುಗೇಟು ನೀಡಲು ಸಜ್ಜಾಗಿದೆ. ಸಿದ್ದರಾಮಯ್ಯ ಸರ್ಕಾರದ ಅಭಿವೃದ್ದಿ ಯೋಜನೆಗಳ ಸಾಲು ಸಾಲು ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದೆ.

ಸಿದ್ದರಾಮಯ್ಯನವರ ಕನಸು ಹಸಿವು ಮುಕ್ತ ಕರ್ನಾಟಕ: ಬಡಜನರು ಯಾರ ಬಳಿಯೂ ಅನ್ನಕ್ಕಾಗಿ ಕೈಚಾಚದೆ ಸ್ವಾಭಿಮಾನದ ಬದುಕನ್ನು ಸಾಗಿಸಬೇಕೆನ್ನುವುದು ಸಿದ್ದರಾಮಯ್ಯ ಸರ್ಕಾರದ ನಿಜಕನಸುಗಳು. ಇದಕ್ಕಾಗಿ ಹಸಿವು ಮುಕ್ತ ಕರ್ನಾಟಕದ ಕನಸಿನೊಂದಿಗೆ ಅನ್ನಭಾಗ್ಯ ಯೋಜನೆಯು ರಾಜ್ಯದಲ್ಲಿ ಅನುಷ್ಠಾನಗೊಳಿಸಿದ ಸಿದ್ದು, ಈ ಯೋಜನೆಯಿಂದ 3.85 ಕೋಟಿ ಬಡ ಜನರ ಪೌಷ್ಠಿಕತೆ ಉತ್ತಮಗೊಂಡಿದೆ.

ಬಡವರಿಗೆ ಉದ್ಯೋಗ: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪಶುಸಂಗೋಪನೆ ಬಹುಮುಖ್ಯ ಕಸುಬಾಗಿದ್ದು, ಈ ಕ್ಷೇತ್ರದಲ್ಲಿ ಉದ್ಯೋಗಾಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಪ್ರಮುಖ ಯೋಜನೆಗಳಾದ ಕುರಿಗಾಹಿ ಸುರಕ್ಷಾ ಯೋಜನೆ, ಕ್ಷೀರಭಾಗ್ಯ, ಪಶುಭಾಗ್ಯ ಮುಂತಾದವುಗಳ ಮೂಲಕ ಗ್ರಾಮೀಣ ರೈತರಿಗೆ ಸಿದ್ದರಾಮಯ್ಯನವರ ಸರ್ಕಾರವು ಪ್ರೋತ್ಸಾಹ ನೀಡಿದೆ. ಇದರ ಫಲವಾಗಿ ಫಲಾನುಭವಿಗಳ ಸಂಖ್ಯೆಯಲ್ಲಿ ಒಂದು ಲಕ್ಷದಷ್ಟು ಹೆಚ್ಚಳವಾಗಿ 10 ಲಕ್ಷಕ್ಕೆ ಏರಿಕೆಗೊಂಡಿತ್ತು.

ಗುಡಿಸಲು ಮುಕ್ತ ಕರ್ನಾಟಕದ ಕನಸು: ಸಿದ್ದರಾಮಯ್ಯ ಸರ್ಕಾರ ತನ್ನ ಆಡಳಿತಾವಧಿಯಲ್ಲಿ ಗುಡಿಸಲು ಮುಕ್ತ ಕರ್ನಾಟಕವನ್ನಾಗಿಸುವ ನಿಜಕನಸನ್ನು ಹೊಂದಿತ್ತು, ಇದಕ್ಕಾಗಿ ಪ್ರತಿ ವರ್ಷವೂ 3 ಲಕ್ಷ ಮನೆಗಳನ್ನು ನಿರ್ಮಿಸಿದೆ. ಸಾರ್ವಜನಿಕ ವಸತಿಗೆ ಹೆಚ್ಚಿನ ಆದ್ಯತೆ ನೀಡಿರುವ ಕೆಲವೇ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿತ್ತು. ಸಿದ್ದರಾಮಯ್ಯನವರ 5 ವರ್ಷದ ಆಡಳಿತದಲ್ಲಿ 15 ಲಕ್ಷಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಿದ್ದು ಸಿದ್ದು ಸರ್ಕಾರ. ಇದಕ್ಕಾಗಿ ಸರ್ಕಾರವು ಹುಟ್ಕ ಸಂಸ್ಥೆಯಿಂದ ವಸತಿ ಯೋಜನೆಗಳ ಅನುಷ್ಠಾನದ ಅತ್ಯುತ್ತಮ ಸಾಧನೆಯ ಪುರಸ್ಕಾರಕ್ಕೂ ಭಾಜನವಾಗಿದೆ.

ಶಿಕ್ಷಣ ಕ್ರಾಂತಿ -ಸಿದ್ದು ಕನಸು: ‘ಪ್ರತಿಯೊಂದು ಮಗು ಶಾಲೆಯಲ್ಲಿ ಮತ್ತು ಉತ್ತಮ ಕಲಿಕೆಯೊಂದಿಗೆ’ ಎನ್ನುವ ಗುರಿಯೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟದ ಹೆಚ್ಚಳಕ್ಕಾಗಿ ಸರ್ಕಾರ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ ಮತ್ತು ಬಿಸಿಹಾಲನ್ನು ನೀಡಿತ್ತು. 1 ಕೋಟಿಗೂ ಹೆಚ್ಚು ಮಕ್ಕಳು ಪ್ರಯೋಜನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...