Homeಮುಖಪುಟಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರ

ಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರ

- Advertisement -
- Advertisement -

ದುನಿಯಾ ವಿಜಯ್ ನಿರ್ದೇಶನದ ಚೊಚ್ಚಲ ಚಿತ್ರ ಸಲಗದಲ್ಲಿ ಉತ್ತರ ಕನ್ನಡದ ಸಿದ್ದಿ ಬುಡಕಟ್ಟು ಜನಾಂಗದ ಜಾನಪದ ಹಾಡೊಂದನ್ನು ಸೇರಿಸಲಾಗಿದೆ; ಆ ಹಾಡನ್ನು ಯಲ್ಲಾಪುರದ ಸಿದ್ದಿ ಮಹಿಳೆಯರೆ ಹಾಡಿ ಕುಣಿದಿದ್ದಾರೆಂದು ಭರ್ಜರಿ ಪ್ರಚಾರ ಮಾಡಲಾಗಿತ್ತು. ಸ್ವತಃ ನಿರ್ದೇಶಕ-ನಟ ವಿಜಯ್ ಅವರೆ ಈ ಟಿಣಿಂಗ ಮಿಣಿಂಗ ಟಿಶ್ಯಾ ಎಂಬ ಹಾಡಿನ ಕುರಿತು, ಸಿದ್ದಿ ಹಾಡುಗಾರ್ತಿಯರ ಬಗ್ಗೆ ಹೆಮ್ಮೆ-ಖುಷಿಯಿಂದ ಮಾತಾಡಿದ್ದು ದೊಡ್ಡ ಸುದ್ದಿಯಾಗಿತ್ತು. ಹಾಡಂತೂ ಯೂಟ್ಯೂಬ್ ಮತ್ತಿತರೆಡೆ ವೈರಲ್ ಆಗಿ ಹವಾ ಸೃಷ್ಟಿಸಿತ್ತು.

ಈಗ ಸಲಗ ಸಿನೆಮಾ ಬಿಡುಗಡೆಯಾಗಿದ್ದು ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿದೆ. ಆದರೆ ಸಿನಿಮಾದ ಯಾವ ಭಾಗದಲ್ಲೂ ಮಂಚಿಕೇರಿ ಸಾವ್ಕಾರ್ ಅಂದರ್ ಬುಲಾಯಾ… ದರ್ವಾಜಾ ಲಗಾಯಾಟಿಣಿಂಗ ಮಿಣಿಂಗ ಟಿಶ್ಯಾ.. ಹಾಡಿಲ್ಲವೇ ಇಲ್ಲ. ಈ ಹಾಡು ಸಲಗ ಸಿನಿಮಾದ್ದು ಎಂಬುದಕ್ಕಿಂತ ಯಲ್ಲಾಪುರದ ಮಂಚಿಕೇರಿ ಬಳಿಯ ಸಿದ್ದಿಗಳ ಕೇರಿಯ ಪ್ರತಿಭಾನ್ವಿತ ಗಾಯಕಿ ಗಿಜಾ ಸಿದ್ದಿ ತಂಡ ಹಾಡಿ ನೃತ್ಯ ಮಾಡಿದೆ ಎಂಬುದೆ ಹೆಚ್ಚು ಪ್ರಚಾರಕ್ಕೆ ಕಾಣವಾಗಿತ್ತು.

ತಮ್ಮವರು ಹಾಡಿದ-ನಟಿಸಿದ ಚಿತ್ರವೆಂಬ ಆಕರ್ಷಣೆಯಿಂದ ಯಲ್ಲಾಪುರ ಸೀಮೆಯ ಸಿದ್ದಿಗಳು ಮತ್ತು ಉತ್ತರ ಕನ್ನಡದ ಸಿನಿಮಾಸಕ್ತರು ಶಿರಸಿಯ ನಟರಾಜ ಥೇಟರಿಗೆ ಹೋಗಿದ್ದಾರೆ. ಆದರೆ ಸಿನಿಮಾದಲ್ಲಿ ತಾವು ನಿರೀಕ್ಷಿಸಿದ ಹಾಡಿಲ್ಲದೆ ನಿರಾಸೆ ಮತ್ತು ಬೇಸರದಿಂದ ಹೊರಬಂದಿದ್ದಾರೆ. ಅಲ್ಲಲ್ಲಿ ಸಣ್ಣ ಸಣ್ಣ ಹಾಡಿನ ತುಣುಕು ಇದೆ ಹೊರತು ಪೂರ್ತಿ ಹಾಡು ಇಲ್ಲ ಎಂಬುದು ಅವರ ಬೇಸರಕ್ಕೆ ಕಾರಣ. ಸಲಗ ಸಿನಿಮಾ ತಂಡದ ತಾತ್ಸಾರದಿಂದ ತಮಗೆ ಅವಮಾನ ಮಾಡಿದಂತಾಗಿದೆಯೆಂದು ಸಿದ್ದಿ ಯುವಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ವಿಶಿಷ್ಟ ಸಂಸ್ಕೃತಿಯ ಸಿದ್ದಿ ಸಮುದಾಯದ ಪ್ರತಿಭೆ, ಮುಗ್ದತೆ ಸಿನಿಮಾ ಪ್ರಪಂಚ ಪ್ರಚಾರದ ಸರಕಾಗಿ ಬಳಸಿಕೊಂಡಿದೆಯೆಂಬ ಮಾತೀಗ ಕೇಳಿಬರುತ್ತಿದೆ.

ಉತ್ತರ ಕನ್ನಡದಲ್ಲಿರುವ ಆಫ್ರಿಕಾದ ನಿಗ್ರೊ ಮೂಲದ ಸಿದ್ದಿ ಬುಡಕಟ್ಟು ಜನಾಂಗಕ್ಕೆ ಅದರದೇ ಆದ ಸಂಸ್ಕ್ರತಿ, ಸಾಹಿತ್ಯ, ಕಲೆ, ಸಂಗೀತ, ಹಾಡು ಆಚರಣೆಗಳಿವೆ. ಮದುವೆ, ಹಬ್ಬ, ಉತ್ಸವ ಮುಂತಾದ ವಿಶೇಷ ಸಂದರ್ಭದಲ್ಲಿ ಜಾನಪದ ಶೈಲಿಯ ಹಾಡು ಹಾಡಿ, ನೃತ್ಯ ಮಾಡಿ ಸಂಭ್ರಮಿಸುತ್ತಾರೆ. ಸಿದ್ದಿಗಳ ಡಮಾಮಿ ಕುಣಿತಕ್ಕಂತೂ ಚೆತೋಹಾರಿ ಸೊಬಗಿದೆ.

ಕಾಡಿನ ವಾಸಿಗಳಾದ ಸಿದ್ದಿಗಳ ವಿಶಿಷ್ಟ ಹಾಡುಗಳೀಗ ಸಾಮಾಜಿಕ ಜಾಲತಾಣಕ್ಕೂ ವ್ಯಾಪಿಸಿ ಮೆಚ್ಚಿಗೆ ಗಳಿಸುತ್ತಿದೆ. ಈ ಬೆನ್ನಲ್ಲೆ ಸಿದ್ದಿ ಹಾಡೊಂದನ್ನು ಖ್ಯಾತ ನಟ ದುನಿಯಾ ವಿಜಯ್ ನಟನೆಯ ಸಲಗ ಸಿನಿಮಾಕ್ಕೆ ತೆಗೆದುಕೊಳ್ಳಲಾಗಿದೆ ಎನ್ನಲಾಗಿತ್ತು.

ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಸಿದ್ದಿ ಹಾಡನ್ನು ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಗೀತಾ ಸಿದ್ದಿ ಮತ್ತು ಗಿರಿಜಾ ಸಿದ್ದಿ ತಂಡ ತುಂಬಾ ಆಕರ್ಷಕವಾಗಿ ಹಾಡಿದೆ. ಜೊತೆಗೆ ಅಭಿನಯವನ್ನೂ ಮಾಡಿದ್ದಾರೆ. ಎ2 ಮ್ಯೂಸಿಕ್ ಕಂಪನಿ ಸಿದ್ದಿ ಕಲಾವಿದರು ಹಾಡಿರುವ ಹಾಡನ್ನು ಯೂ ಟ್ಯೂಬ್‌ನಲ್ಲಿ ಬಿಡುಗಡೆ ಮಾಡಿದೆ. ಈ ಹಾಡನ್ನು ಈಗಾಗಲೇ 8 ಲಕ್ಷ ಜನರು ನೋಡಿದ್ದಾರೆ. ಸಿದ್ದಿಗಳ ಕಲೆಗೆ ಸಿಕ್ಕಿರುವ ಈ ಮನ್ನಣೆ ದಾಖಲೆಯೇ ಸರಿ.


ಇದನ್ನೂ ಓದಿ: ‘ಸಲಗ’ ಸಿನಿಮಾಕ್ಕೆ ಸಿದ್ದಿ ಜಾನಪದ ಹಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...