Homeಮುಖಪುಟಜಾಮೀನು ಸಿಕ್ಕರೂ ಸಿದ್ದಿಕ್‌ ಕಪ್ಪನ್‌ಗೆ ಸಿಗದ ಬಿಡುಗಡೆ; ಯುಎಪಿಎ ಬಳಿಕ ಇ.ಡಿ. ತೊಂದರೆ

ಜಾಮೀನು ಸಿಕ್ಕರೂ ಸಿದ್ದಿಕ್‌ ಕಪ್ಪನ್‌ಗೆ ಸಿಗದ ಬಿಡುಗಡೆ; ಯುಎಪಿಎ ಬಳಿಕ ಇ.ಡಿ. ತೊಂದರೆ

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣದಲ್ಲಿ ಎರಡು ವರ್ಷಗಳಿಂದ ಜೈಲಿನಲ್ಲಿರುವ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್‌ರವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಲು ಒಪ್ಪಿದರೂ ಮತ್ತೊಂದು ಸವಾಲು ಕಪ್ಪನ್‌ ಅವರಿಗೆ ಎದುರಾಗಿದೆ. ಜಾರಿ ನಿರ್ದೇಶನಾಲಯದ (ಇ.ಡಿ.) ಮುಂದೆ ಅವರು ವಿಚಾರಣೆಗೆ ಒಳಗಾಗಬೇಕಿದೆ.

“ಜಾರಿ ನಿರ್ದೇಶನಾಲಯವು ತನಿಖೆ ನಡೆಸುತ್ತಿರುವ ಪ್ರಕರಣವು ಇನ್ನೂ ವಿಚಾರಣೆಗೆ ಬಾಕಿ ಇರುವ ಕಾರಣ ಲಕ್ನೋ ಜೈಲಿನಲ್ಲಿ ಸಿದ್ದಿಕ್‌ ಮುಂದುವರಿಯಲಿದ್ದಾರೆ” ಎಂದು ಕಾರಾಗೃಹ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಯೊಬ್ಬ ವ್ಯಕ್ತಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಎಂದಿದ್ದ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಯುಯು ಲಲಿತ್‌ರವರು, ಕಪ್ಪನ್‌ರವರಿಗೆ ಜಾಮೀನು ನೀಡಲು ಒಪ್ಪಿದ್ದರು. ಯುಎಪಿಎ ಕುಣಿಕೆಯಿಂದ ಕೊಂಚ ಬಿಡಿಸಿಕೊಂಡು ನಿಟ್ಟುಸಿರು ಬಿಡಬೇಕೆನ್ನುವ ಹೊತ್ತಿನಲ್ಲಿ ಜಾರಿ ನಿರ್ದೇಶನಾಲಯದ ಸವಾಲುಗಳನ್ನು ಸಿದ್ದಿಕ್ ಎದುರಿಸಬೇಕಾಗಿದೆ.

“ಕಪ್ಪನ್‌ ಮಾನ್ಯತೆ ಪಡೆದ ಪತ್ರಕರ್ತರಲ್ಲ. ಅವರಿಗೆ ಗಲಭೆಗಳನ್ನು ಪ್ರಚೋದಿಸಲು ಹಣ ನೀಡಲಾಗಿದೆ. ಅವರು ಗಲಭೆ ಪರಿಸ್ಥಿತಿಯನ್ನು ಸೃಷ್ಟಿಸಲು ಮತ್ತು ಸ್ಫೋಟಕಗಳನ್ನು ಬಳಸಲು ಪ್ರಯತ್ನಿಸುತ್ತಿದ್ದರು. ಅವರು ಪಿಎಫ್‌ಐಗೆ ಸೇರಿದವರು ಮತ್ತು ಇದು ಭಯೋತ್ಪಾದಕ ಸಂಘಟನೆ” ಎಂದು ಉತ್ತರ ಪ್ರದೇಶ ಸರ್ಕಾರದ ಪರವಾಗಿ ವಕೀಲ ಮಹೇಶ್ ಜೇಠ್ಮಲಾನಿ ಕೋರ್ಟ್‌ನಲ್ಲಿ ವಾದಿಸಿದ್ದರು.

ಕಪ್ಪನ್ ಬಳಿಯಿಂದ ಏನನ್ನು ವಶಪಡಿಸಿಕೊಂಡಿದ್ದೀರಿ? ಕಾರಿನಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ, ಅವನ ಬಳಿ ಯಾವುದೇ ವಸ್ತುಗಳು ಕಂಡುಬಂದಿಲ್ಲ. ಹಾಗಿದ್ದ ಮೇಲೆ ಸ್ಪೋಟಕಗಳನ್ನು ಎಲ್ಲಿ ಬಳಸಿದರು ಎಂದು ಪ್ರಶ್ನಿಸಿದ ಲಲಿತ್‌ರವರು ಜಾಮೀನು ಮಂಜೂರು ಮಾಡಿದ್ದರು. ಮುಂದಿನ ಆರು ವಾರಗಳ ಕಾಲ ದೆಹಲಿ ಪೊಲೀಸರಿಗೆ ಮತ್ತು ಆನಂತರ ಕೇರಳ ಪೊಲೀಸರಿಗೆ ವರದಿ ಮಾಡಿಕೊಳ್ಳಬೇಕು ಎಂಬ ಷರತ್ತು ವಿಧಿಸಲಾಗಿದೆ.

2020ರ ಅಕ್ಟೋಬರ್ 5 ರಂದು ಸಿದ್ದಿಕ್‌ ಕಪ್ಪನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. 2020ರ ಸೆಪ್ಟೆಂಬರ್ 14 ರಂದು ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡುವುದಾಕ್ಕಾಗಿ ಕಪ್ಪನ್ ಇತರ ಮೂವರೊಂದಿಗೆ ಕಾರಿನಲ್ಲಿ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದಾಗ ಬಂಧನಕ್ಕೊಳಗಾಗಿದ್ದರು. ಅಂದಿನಿಂದ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು.

ಇದನ್ನೂ ಓದಿರಿ: ನೀಟ್ ಟಾಪರ್ ಮೂರು ಕೋಚಿಂಗ್ ಸೆಂಟರ್‌ಗಳಲ್ಲಿ ತರಬೇತಿ ಪಡೆದಿದ್ದು ನಿಜವೇ? ಜಾಹೀರಾತುಗಳ ಹಿಂದಿನ ಮರ್ಮವೇನು?

ಕೇರಳ ಮೂಲದ ಪತ್ರಕರ್ತರಾಗಿರುವ ಸಿದ್ದಿಕ್‌ ಜಾತಿ ಆಧಾರಿತ ಗಲಭೆಯನ್ನು ಪ್ರಾರಂಭಿಸಲು ಮತ್ತು ಕೋಮು ಸೌಹಾರ್ದತೆಯನ್ನು ಸೃಷ್ಟಿಸಲು ಉದ್ದೇಶಿಸಿದ್ದಾರೆ ಎಂದು ಉತ್ತರ ಪ್ರದೇಶದ ಪೊಲೀಸರು ಮೊದಲು ಆರೋಪಿಸಿದ್ದರು. ತರುವಾಯ, ದೇಶದ್ರೋಹದ ಆರೋಪಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

“ಸಿದ್ದಿಕ್ ಕಪ್ಪನ್ ನಿರಪರಾಧಿಯಾಗಿದ್ದು ಅವರು ಸಾಮರಸ್ಯ ಕದಡಲು ಯಾವುದೇ ವೇದಿಕೆಯನ್ನು ಬಳಸಿಲ್ಲ. ಕಪ್ಪನ್‌ ಅವರಿಗೆ ಮರೆಮಾಚಲು ಏನೂ ಇಲ್ಲ. ಅವರು ತಮ್ಮ ಮುಗ್ಧತೆಯನ್ನು ಸಾಬೀತುಪಡಿಸಲು ನಾರ್ಕೋ ವಿಶ್ಲೇಷಣೆ ಅಥವಾ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗಳಿಗೆ ಒಳಗಾಗಲು ಕೂಡಾ ತಯಾರು” ಎಂದು ನ್ಯಾಯಾಲಯದಲ್ಲಿ ಅವರ ಪರ ವಕೀಲರು ವಾದಿಸಿದ್ದರು.

ಕಪ್ಪನ್ ಮತ್ತು ಇತರ ಇಬ್ಬರೊಂದಿಗೆ ಬಂಧಿಸಲ್ಪಟ್ಟ ಕ್ಯಾಬ್ ಚಾಲಕನಿಗೆ ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್  ಜಾಮೀನು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...