ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ‘ಸಿದ್ರಾಮುಲ್ಲಾ ಖಾನ್’ ಎಂದು ಹೇಳಿದ್ದ ಪ್ರಕರಣದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ 43 ಜನರ ವಿರುದ್ಧ ಮೇಲ್ಮನವಿ ಸಲ್ಲಿಸದೆ ಇರಲು ರಾಜ್ಯದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ ಎಂದು ದಿ ಫೈಲ್ ಶನಿವಾರ ವರದಿ ಮಾಡಿದೆ. ಸಿದ್ರಾಮುಲ್ಲಾ ಖಾನ್ ಪ್ರಕರಣ
1992ರ ಅಯೋಧ್ಯೆ ರಾಮಮಂದಿರ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ 2024ರ ಜನವರಿ 3ರಂದು ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ಎದುರು ಪ್ರತಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಹಲವರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು, ಸಿದ್ರಾಮುಲ್ಲಾಖಾನ, ಲುಚ್ಚಾ, ಹೇಡಿ ಎಂದು ಹೇಳಿ ಅವಹೇಳನ ಮಾಡಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಇದರ ವಿರುದ್ಧ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರು ಅವರು ಹುಬ್ಬಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ‘‘2024ರ ಜನವರಿ 3ರಂದು ಮಧ್ಯಾಹ್ನ 12 ಗಂಟೆಗೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿ, ಪ್ರಚೋದನಾಕಾರಿ ಭಾಷಣವನ್ನು ಮಾಡಿ ಸಾರ್ವಜನಿಕರಿಗೆ ಹಾಗೂ ವ್ಯಾಪಾರಸ್ಥರಿಗೆ ಅಡ್ಡಿಪಡಿಸಿದ್ದಾರೆ” ಎಂದು ದೂರಿದ್ದರು.
“ಅಲ್ಲದೆ, 6 ಕೋಟಿ ಜನರ ಪ್ರತಿನಿಧಿಯಾದ ಮುಖ್ಯಮಂತ್ರಿಗೆ ಸಿದ್ರಾಮುಲ್ಲಾಖಾನ ಮತ್ತು ಸಿದ್ದರಾಮಯ್ಯ ಲುಚ್ಚಾ, ಹೇಡಿ ಮುಖ್ಯಮಂತ್ರಿ ಎಂದು ಘೋಷಣೆ ಕೂಗಿ ಅವರಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅವಮಾನ ಮಾಡಿ ಅವಾಚ್ಯ ಶಬ್ದಗಳಿಂದ ಬೈದು, ನಾಗರಿಕ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಆರ್ ಅಶೋಕ್ ಸೇರಿ ಆರೋಪಿತರ ಮೆಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಹುಸೇನ್ ಅವರು ದೂರು ನೀಡಿದ್ದರು.
ಹಾಗಾಗಿ ಆರ್. ಅಶೋಕ್ ಸೇರಿ ಒಟ್ಟು 43 ಮಂದಿ ವಿರುದ್ಧ ಪ್ರಕರಣವೂ ದಾಖಲಾಗಿತ್ತು. ಶಾಸಕರ ಅರವಿಂದ ಬೆಲ್ಲದ್, ಮಹೇಶ್ ಟೆಂಗಿನ ಕಾಯಿ ಅವರು ಸಹ ಎ 2, ಎ 3 ಆರೋಪಿಯನ್ನಾಗಿಸಲಾಗಿತ್ತು ಎಂದು ದಿ ಫೈಲ್ ವರದಿ ಹೇಳಿದೆ. ಸಿದ್ರಾಮುಲ್ಲಾ ಖಾನ್ ಪ್ರಕರಣ
ಪ್ರಸ್ತುತ ಕ್ರಿಮಿನಲ್ ಅರ್ಜಿಯನ್ನು CR.P. ನ U/SE. 482 ರಲ್ಲಿ ಸಲ್ಲಿಸಲಾಗಿತ್ತು. ಹಾಗಾಗಿ ಪ್ರಕರಣದ ಮೊದಲ ಆರೋಪಿ ಆರ್. ಅಶೋಕ್ ಸೇರಿದಂತೆ 43 ಆರೋಪಿಗಳು ತಮ್ಮ ವಿರುದ್ಧದ ಕ್ರಿಮಿನಲ್ ಅರ್ಜಿಯನ್ನು ರದ್ದುಗೊಳಿಸಲು ಕೋರಿದ್ದರು. ಅದಾಗ್ಯೂ, ಅರ್ಜಿದಾರರ ಪರವಾಗಿ ನ್ಯಾಯಾಯದಲ್ಲಿ ಯಾರೊಬ್ಬರೂ ಹಾಜರಾಗದ ಕಾರಣ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು ವಜಾಗೊಳಿಸಿತ್ತು.
ಪ್ರಸ್ತತ ಪ್ರಕರಣವು ಮೇಲ್ಮನವಿ ಮತ್ತು ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ಅರ್ಹವಾಗಿಲ್ಲ ಎಂದು ಒಳಾಡಳಿತ ಇಲಾಖೆಯು ಅಭಿಪ್ರಾಯಪಟ್ಟಿದೆ ಎಂದು ದಿಫೈಲ್ ವರದಿ ಹೇಳಿದೆ.
ಇದನ್ನೂಓದಿ: ಪಶ್ಚಿಮ ಬಂಗಾಳ| ಆರ್‌ಎಸ್‌ಎಸ್ ರ‍್ಯಾಲಿಗೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್
ಪಶ್ಚಿಮ ಬಂಗಾಳ| ಆರ್‌ಎಸ್‌ಎಸ್ ರ‍್ಯಾಲಿಗೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್


