Homeಮುಖಪುಟಶತಮಾನಕ್ಕೊಮ್ಮೆ ಬರುವ ಸಾಂಕ್ರಾಮಿಕದ ಅಡ್ಡ ಪರಿಣಾಮ 100 ದಿನಗಳಲ್ಲಿ ಮಾಯವಾಗುವುದಿಲ್ಲ: ಉದ್ಯೋಗ ಮೇಳದಲ್ಲಿ ಪ್ರಧಾನಿ ಮೋದಿ

ಶತಮಾನಕ್ಕೊಮ್ಮೆ ಬರುವ ಸಾಂಕ್ರಾಮಿಕದ ಅಡ್ಡ ಪರಿಣಾಮ 100 ದಿನಗಳಲ್ಲಿ ಮಾಯವಾಗುವುದಿಲ್ಲ: ಉದ್ಯೋಗ ಮೇಳದಲ್ಲಿ ಪ್ರಧಾನಿ ಮೋದಿ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ನಂತರ ವಿಶ್ವದಾದ್ಯಂತ ಹಲವಾರು ದೇಶಗಳು ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳ ಹೊಡೆತವನ್ನು ಎದುರಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಶನಿವಾರ ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, “ಶತಮಾನಕ್ಕೊಮ್ಮೆ ಬರುವ ಸಾಂಕ್ರಾಮಿಕ ರೋಗದ ಅಡ್ಡ ಪರಿಣಾಮಗಳು 100 ದಿನಗಳಲ್ಲಿ ಮಾಯವಾಗುವುದಿಲ್ಲ” ಎಂದು ತಿಳಿಸಿದ್ದಾರೆ.

ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ 75,000 ನೇಮಕಾತಿ ಪತ್ರಗಳನ್ನು ವಿತರಿಸಿದ ನಂತರ “ರೋಜ್ಗಾರ್ ಮೇಳ”ವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಯುವಜನರಿಗೆ ಗರಿಷ್ಠ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಒಕ್ಕೂಟ ಸರ್ಕಾರವು ಅನೇಕ ರಂಗಗಳಲ್ಲಿ ಕೆಲಸ ಮಾಡುತ್ತಿದೆ ಎಂದು ಪ್ರತಿಪಾದಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜಾಗತಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂಬುದು ಸತ್ಯ. ಹಲವಾರು ದೊಡ್ಡ ಆರ್ಥಿಕತೆಗಳು ಹೆಣಗಾಡುತ್ತಿವೆ. ಹಲವಾರು ದೇಶಗಳಲ್ಲಿ, ಹೆಚ್ಚಿನ ಹಣದುಬ್ಬರ ಮತ್ತು ನಿರುದ್ಯೋಗದಂತಹ ಸಮಸ್ಯೆಗಳು ಉತ್ತುಂಗದಲ್ಲಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಒಪ್ಪಿದ ಮೋದಿ ಸರ್ಕಾರ; ಏನೇನಾಯ್ತು ಈ ವರೆಗೆ? | ಸಂಕ್ಷಿಪ್ತ ವರದಿ

ಶತಮಾನಕ್ಕೊಮ್ಮೆ ಬರುವ ಸಾಂಕ್ರಾಮಿಕ ರೋಗದ ಅಡ್ಡ ಪರಿಣಾಮಗಳು 100 ದಿನಗಳಲ್ಲಿ ಮಾಯವಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

“ಈ ಬಿಕ್ಕಟ್ಟು ಪ್ರಪಂಚದಾದ್ಯಂತ ಎದುರಿಸಲಾಗುತ್ತಿದೆ. ಇದರ ಪರಿಣಾಮವು ಎಲ್ಲಾ ಕಡೆ ಅನುಭವಕ್ಕೆ ಬರುತ್ತಿದೆ. ಭಾರತವು ಈ ಸಮಸ್ಯೆಗಳಿಂದ ನಮ್ಮ ದೇಶವನ್ನು ರಕ್ಷಿಸಲು ಹೊಸ ಉಪಕ್ರಮಗಳು ಮತ್ತು ಕೆಲವು ಅಪಾಯಗಳಿಗೆ ಒಡ್ಡಿಕೊಳ್ಳುತ್ತಿದೆ” ಎಂದು ಅವರು ಹೇಳಿದ್ದಾರೆ.

“ನಮ್ಮ ದೇಶದ ಮೇಲೆ ಬೀಡುವ ಈ ಪರಿಣಾಮವನ್ನು ಮೃದುಗೊಳಿಸಲು ನಾವು ಕೆಲಸ ಮಾಡುತ್ತಿದ್ದೇವೆ. ಇದು ಸವಾಲಿನ ಕೆಲಸ, ಆದರೆ ನಿಮ್ಮ ಆಶೀರ್ವಾದದಿಂದ ನಾವು ಇಲ್ಲಿಯವರೆಗೆ ರಕ್ಷಿಸಲ್ಪಟ್ಟಿದ್ದೇವೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ

ಇದಕ್ಕೂ ಮುನ್ನ ಪ್ರಧಾನಿಯವರು 75,000 ಉದ್ಯೋಗಾಕಾಂಕ್ಷಿಗಳಿಗೆ ವಿದ್ಯುನ್ಮಾನವಾಗಿ ನೇಮಕಾತಿ ಪತ್ರಗಳನ್ನು ಕಳುಹಿಸಿದ್ದರು.

ಇದನ್ನೂ ಓದಿ: ಗುಜರಾತ್ ಬಿಜೆಪಿಗೆ ಮೋದಿ ಬಿಟ್ಟರೆ ಗತಿಯಿಲ್ಲ!

ದೇಶದಾದ್ಯಂತ ಆಯ್ಕೆಯಾದ ಹೊಸ ಉದ್ಯೋಗಾಕಾಂಕ್ಷಿಗಳು ಭಾರತ ಸರ್ಕಾರದ 38 ಸಚಿವಾಲಯಗಳು ಅಥವಾ ಇಲಾಖೆಗಳಿಗೆ ಸೇರಿಕೊಳ್ಳುತ್ತಾರೆ. ಅವರು ಗ್ರೂಪ್ ಎ ಮತ್ತು ಬಿ (ಗೆಜೆಟೆಡ್), ಗ್ರೂಪ್ ಬಿ (ನಾನ್ ಗೆಜೆಟೆಡ್) ಮತ್ತು ಸಿ ಗುಂಪಿನಲ್ಲಿ ವಿವಿಧ ಹಂತಗಳಲ್ಲಿ ಸರ್ಕಾರದ ಕೆಲಸಕ್ಕೆ ಸೇರಲಿದ್ದಾರೆ.

ಕೇಂದ್ರ ಸಶಸ್ತ್ರ ಪಡೆಗಳ ಸಿಬ್ಬಂದಿ, ಸಬ್ ಇನ್‌ಸ್ಪೆಕ್ಟರ್‌ಗಳು, ಕಾನ್‌ಸ್ಟೆಬಲ್‌ಗಳು, ಎಲ್‌ಡಿಸಿಗಳು, ಸ್ಟೆನೋಗ್ರಾಫರ್‌ಗಳು, ಪಿಎಗಳು, ಆದಾಯ ತೆರಿಗೆ ಇನ್ಸ್‌ಪೆಕ್ಟರ್‌ಗಳು ಮತ್ತು ಎಂಟಿಎಸ್ ಹುದ್ದೆಗಳನ್ನು ನೇಮಕ ಮಾಡಲಾಗುತ್ತಿದೆ ಎಂದು ಸರ್ಕಾರ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ.

ಈ ನೇಮಕಾತಿಗಳನ್ನು ಸಚಿವಾಲಯಗಳು ಮತ್ತು ಇಲಾಖೆಗಳು ಸ್ವತಃ ಅಥವಾ UPSC, SSC ಮತ್ತು ರೈಲ್ವೇ ನೇಮಕಾತಿ ಮಂಡಳಿಯಂತಹ ನೇಮಕಾತಿ ಏಜೆನ್ಸಿಗಳ ಮೂಲಕ ಮಾಡುತ್ತಿವೆ. ತ್ವರಿತ ನೇಮಕಾತಿಗಾಗಿ, ಆಯ್ಕೆ ಪ್ರಕ್ರಿಯೆಗಳನ್ನು ಸರಳೀಕರಿಸಲಾಗಿದೆ ಮತ್ತು ತಂತ್ರಜ್ಞಾನವನ್ನು ಸಕ್ರಿಯಗೊಳಿಸಲಾಗಿದೆ ಎಂದು ಒಕ್ಕೂಟ ಸರ್ಕಾರ ಹೇಳಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಕಾರ್ಯಕ್ರಮದ ವರದಿಗೆ ಬರುವ ಪತ್ರಕರ್ತರಿಗೆ ‘ನಡತೆ ಪ್ರಮಾಣಪತ್ರ’ ಕೇಳಿದ ಸರ್ಕಾರ

ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಜನರನ್ನು “ಮಿಷನ್ ಮೋಡ್” ನಲ್ಲಿ ನೇಮಿಸಿಕೊಳ್ಳುವಂತೆ ಪ್ರಧಾನಿ ಜೂನ್‌ನಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ಕೇಳಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...