Homeಮುಖಪುಟದಲಿತನೆಂಬ ಕಾರಣಕ್ಕೆ ಮೂಲೆಗೆ ತಳ್ಳಲಾಗಿದೆ: ಯೋಗಿ ಸರ್ಕಾರದ ಮೊದಲ ವಿಕೆಟ್ ಪತನ

ದಲಿತನೆಂಬ ಕಾರಣಕ್ಕೆ ಮೂಲೆಗೆ ತಳ್ಳಲಾಗಿದೆ: ಯೋಗಿ ಸರ್ಕಾರದ ಮೊದಲ ವಿಕೆಟ್ ಪತನ

ಮತ್ತೊಬ್ಬ ಸಚಿವ ಜಿತಿನ್ ಪ್ರಸಾದ ಅವರು ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ದೆಹಲಿ ನಾಯಕರನ್ನು ಭೇಟಿಯಾಗಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಚಂಡ ಬಹುಮತದಿಂದ ಪುನರಾಯ್ಕೆಯಾದ ಕೆಲವೇ ತಿಂಗಳುಗಳಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಭಾರಿ ಹಿನ್ನಡೆಯಾಗಿದೆ.

“ನಾನು ದಲಿತ ಎಂಬ ಕಾರಣದಿಂದ ಸೈಡ್‌ಲೈನ್ ಮಾಡಲಾಗಿದೆ” ಎಂದು ದೂರಿ ಉತ್ತರ ಪ್ರದೇಶದ ಸಚಿವರೊಬ್ಬರು ರಾಜೀನಾಮೆ ನೀಡಿದ್ದಾರೆ. ಸಚಿವ ದಿನೇಶ್ ಖಟಿಕ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಳುಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮತ್ತೊಬ್ಬ ಸಚಿವ ಜಿತಿನ್ ಪ್ರಸಾದ ಅವರು ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಬಹಿರಂಗವಾಗಿ ಅಸಮಾಧಾನ ಹೊರಹಾಕಿ ದೆಹಲಿ ನಾಯಕರನ್ನು ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ಉತ್ತರ ಪ್ರದೇಶದ ಜಲಸಂಪನ್ಮೂಲ ಸಚಿವ ಖಟಿಕ್ ಅವರು ತಮ್ಮ ಪತ್ರದಲ್ಲಿ, “100 ದಿನಗಳ ಕಾಲ ಯಾವುದೇ ಕೆಲಸವನ್ನು ನಿಯೋಜಿಸಿಲ್ಲ” ಎಂದು ಹೇಳಿದ್ದಾರೆ. “ಇಲಾಖಾ ವರ್ಗಾವಣೆಯಲ್ಲಿ ಅವ್ಯವಹಾರ ನಡೆದಿದೆ. ನನಗೆ ನೋವಾಗಿದೆ” ಎಂದು ಕಾರಣ ರಾಜೀನಾಮೆಗೆ ಕಾರಣ ನೀಡಿದ್ದಾರೆ.

“ನಾನು ದಲಿತ ಎಂಬ ಕಾರಣಕ್ಕೆ ನನಗೆ ಯಾವುದೇ ಪ್ರಾಮುಖ್ಯತೆ ನೀಡಿಲ್ಲ, ನನಗೆ ಸಚಿವನಾಗಿ ಅಧಿಕಾರವಿಲ್ಲ, ನಾನು ರಾಜ್ಯ ಸಚಿವನಾಗಿ ಕೆಲಸ ಮಾಡುತ್ತಿದ್ದು, ದಲಿತ ಸಮುದಾಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ನನ್ನನ್ನು ಯಾವುದೇ ಸಭೆಗೆ ಕರೆಯುತ್ತಿಲ್ಲ. ನನ್ನ ಸಚಿವಾಲಯದ ಬಗ್ಗೆ ಏನನ್ನೂ ಹೇಳುತ್ತಿಲ್ಲ. ಇದು ದಲಿತ ಸಮುದಾಯಕ್ಕೆ ಮಾಡಿದ ಅವಮಾನ” ಎಂದು ಖಟಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜೀನಾಮೆಯನ್ನು ಹಿಂಪಡೆಯುವಂತೆ  ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿರುವಾಗಿ ಎನ್‌ಡಿಟಿವಿ ವರದಿ ಮಾಡಿದೆ.

ತಮ್ಮ ತಂಡದ ಅಧಿಕಾರಿಯೊಬ್ಬರನ್ನು ಮುಖ್ಯಮಂತ್ರಿ ಅಮಾನತು ಮಾಡಿರುವ ಬಗ್ಗೆ ಜಿತಿನ್ ಪ್ರಸಾದ ಕೋಪಗೊಂಡಿದ್ದಾರೆ. ಪ್ರಸಾದ ಅವರು ಕಳೆದ ವರ್ಷ ಯುಪಿ ಚುನಾವಣೆಯ ಮೊದಲು ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಿದ್ದರು.

ಪ್ರಸಾದ ಅವರಿಗೆ ಲೋಕೋಪಯೋಗಿ ಇಲಾಖೆ (PWD) ನೀಡಲಾಯಿತು. ಆದರೆ ಇಲಾಖೆಯು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದೆ. ಮುಖ್ಯಮಂತ್ರಿ ಕಚೇರಿಯು ತನಿಖೆಗೆ ಆದೇಶಿಸಿದೆ ಎಂದು ವರದಿಯಾಗಿದೆ. ಹಲವಾರು ಅಧಿಕಾರಿಗಳು ಲಂಚದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ.

ಯುಪಿ ಸರ್ಕಾರವು ಇಲಾಖಾ ವರ್ಗಾವಣೆಯಲ್ಲಿ ಗಂಭೀರ ಅಕ್ರಮಗಳ ಮೇಲೆ ಐವರು ಹಿರಿಯ ಪಿಡಬ್ಲ್ಯೂಡಿ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

ಇದನ್ನೂ ಓದಿರಿ: ಕರಾವಳಿ ಕರ್ನಾಟಕದ ರಕ್ತಸಿಕ್ತ ಚರಿತ್ರೆಯ ನಿಜ ಕಥನ ‘ನೇತ್ರಾವತಿಯಲ್ಲಿ ನೆತ್ತರು’

ವಿಶೇಷ ಕರ್ತವ್ಯದಲ್ಲಿರುವ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಪಾಂಡೆ ಅವರು ವರ್ಗಾವಣೆ ಮತ್ತು ಪೋಸ್ಟಿಂಗ್‌ಗಾಗಿ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಪಾಂಡೆ ಅವರನ್ನು ತೆರವುಗೊಳಿಸಿ, ಅವರ ವಿರುದ್ಧ ವಿಜಿಲೆನ್ಸ್ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ.

ಪಾಂಡೆಯವರ ತೆರವಿನ ಬಳಿಕ ಸಚಿವ ಪ್ರಸಾದ ಅವರೂ ವಿಚಾರಣೆಯನ್ನು ಎದುರಿಸುವಂತಾಗಿದೆ. ಮೂಲಗಳ ಪ್ರಕಾರ ಯೋಗಿ ಆದಿತ್ಯನಾಥ್ ಸಚಿವರನ್ನು ಕರೆಸಿ, ಅನಿಲ್‌ ಪಾಂಡೆ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಗರಂ ಆಗಿದ್ದಾರೆ ಎನ್ನಲಾಗುತ್ತಿದೆ.

ನಂತರ ಪ್ರಸಾದ ಅವರು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಈ ಸಚಿವ ಸರಿಯಾಗಿ ಜನ ಪರ ಕೆಲಸ ಮಾಡಿಲ್ಲ ಅಂತ ಸಂಪುಟದಿಂದ ತೆಗೆದಿದ್ದಾರೆ,ಆದರೆ ಈ ಸಚಿವ ದಲಿತ ಅನ್ನೋ ಟ್ರಂಪ್ ಕಾರ್ಡ್ ಬಳಸಿ ಬೇಳೆ ಬೇಯಿಸಿ ಕೊಳ್ಳೋ ಪ್ರಯತ್ನ ಮಾಡ್ತಿದ್ದಾನೇ ಈ ಅಸಮರ್ಥ ಸಚಿವ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...