Homeಮುಖಪುಟಪಕ್ಷದ ಶಾಸಕರಲ್ಲಿ ಸಿಧು ಮತ್ತು ಚನ್ನಿಗೆ ಕಡಿಮೆ ಬೆಂಬಲವಿದೆ: ಕಾಂಗ್ರೆಸ್‌ ನಾಯಕ ಸುನೀಲ್ ಜಾಖರ್

ಪಕ್ಷದ ಶಾಸಕರಲ್ಲಿ ಸಿಧು ಮತ್ತು ಚನ್ನಿಗೆ ಕಡಿಮೆ ಬೆಂಬಲವಿದೆ: ಕಾಂಗ್ರೆಸ್‌ ನಾಯಕ ಸುನೀಲ್ ಜಾಖರ್

- Advertisement -
- Advertisement -

ಪಂಜಾಬ್‌‌ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿರುವ ಚರಂಜಿತ್ ಸಿಂಗ್ ಚನ್ನಿ ಅಥವಾ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರಿಗೆ ತುಂಬಾ ಕಡಿಮೆ ಬೆಂಬಲ ಇದೆ ಎಂದು ರಾಜ್ಯದ ಕಾಂಗ್ರೆಸ್ ನಾಯಕ ಸುನೀಲ್ ಜಾಖರ್ ಹೇಳಿದ್ದಾರೆ.

ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ಆಂತರಿಕ ಸಮಾಲೋಚನೆಗಳನ್ನು ನಡೆಸುತ್ತಿದ್ದು, ಈ ವೇಳೆ ಜಾಖರ್‌ ಅವರು ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹೊರಹೊಮ್ಮಿದೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ; ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯಲಿರುವ ಸಿಎಂ ಚರಣ್‌ ಜಿತ್ ಚನ್ನಿ

“ಕಳೆದ ವರ್ಷ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡುವಂತೆ ಪಕ್ಷವು ತನ್ನ ಎಲ್ಲಾ 79 ಶಾಸಕರನ್ನು ಕೇಳಿತ್ತು. ಆದರೆ ಈ ವೇಳೆ ಚನ್ನಿ ಮತ್ತು ನವಜೋತ್‌ ಸಿಧುಗೆ ಅತ್ಯಂತ ಕಡಿಮೆ ಮತಗಳು ಸಿಕ್ಕಿವೆ” ಎಂದು ಅವರು ವಿಡಿಯೊದಲ್ಲಿ ಹೇಳಿದ್ದಾರೆ.

ಈ ವೇಳೆ, ತನ್ನ ಪರವಾಗಿ 42 ಕಾಂಗ್ರೆಸ್‌ ಶಾಸಕರು ಮತನೀಡಿದ್ದಾಗಿ ಸುನಿಲ್ ಜಾಖರ್‌ ವಿಡಿಯೊದಲ್ಲಿ ಪ್ರತಿಪಾದಿಸಿದ್ದಾರೆ. ಉಳಿದಂತೆ ಸುಖಜಿಂದರ್ ರಾಂಧವಾ ಅವರಿಗೆ 16 ಮತಗಳು ಮತ್ತು ಪ್ರಣೀತ್ ಕೌರ್ ಅವರಿಗೆ 12 ಶಾಸಕರು ಮತ ಸಿಕ್ಕಿದ್ದು, ನವಜೋತ್ ಸಿಧು ಮತ್ತು ಚರಂಜಿತ್ ಸಿಂಗ್ ಚನ್ನಿ ಅವರನ್ನು ಕ್ರಮವಾಗಿ ಆರು ಮತ್ತು ಇಬ್ಬರು ಶಾಸಕರು ಮಾತ್ರ ಇಷ್ಟಪಟ್ಟಿದ್ದಾರೆ ಎಂದು ಸುನೀಲ್ ಜಾಖರ್ ಅವರು ಅಬೋಹರ್ ಕ್ಷೇತ್ರದಲ್ಲಿ ತಮ್ಮ ಸಂಬಂಧಿ ಪರ ಪ್ರಚಾರ ಮಾಡುವಾಗ ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್‌: ಅಧಿಕಾರದ ಕಿತ್ತಾಟಕ್ಕೆ ಅಂತ್ಯ; ಸಿಎಂ ಅಭ್ಯರ್ಥಿ ಘೋಷಿಸಲು ನಿರ್ಧರಿಸಿದ ಕಾಂಗ್ರೆಸ್‌

ತನಗೆ ಉನ್ನತ ಹುದ್ದೆಯನ್ನು ನಿರಾಕರಿಸಲಾಗಿದ್ದರೂ, ಹೆಚ್ಚಿನ ಶಾಸಕರು ನನ್ನ ಮೇಲೆ ವಿಶ್ವಾಸವಿಟ್ಟಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಎಂದು ಅವರು ವಿಡಿಯೊದಲ್ಲಿ ಹೇಳಿದ್ದಾರೆ. ಅತಿ ಹೆಚ್ಚು ಮತ ಪಡೆದರೂ ಉಪಮುಖ್ಯಮಂತ್ರಿ ಸ್ಥಾನ ನೀಡಿವುದಾಗಿ ಹೇಳಿದ್ದು ನನಗೆ ಅಸಮಾಧಾನ ತಂದಿತ್ತು ಎಂದು ಅವರು ತಿಳಿಸಿದ್ದಾರೆ.

“ನನ್ನ ವೃತ್ತಿ ಜೀವನದಲ್ಲಿ ನಾನು ಗಳಿಸಿದ್ದು ಇದನ್ನೇ. ನಾನು ಯಾವುದೆ ಹುದ್ದೆಯಲ್ಲಿ ಇಲ್ಲದಿದ್ದರೂ ಶಾಸಕರು ನನ್ನ ಪರವಾಗಿದ್ದಾರೆ” ಎಂದು ಅವರು ಹೇಳಿದ್ದಾರೆ. ಈ ವರ್ಷ ವಿಧಾನಸಭೆ ಚುನಾವಣೆಯಲ್ಲಿ ಸುನೀಲ್ ಜಾಖರ್ ಸ್ಪರ್ಧಿಸಿಲ್ಲ.

ಪಂಜಾಬ್ ವಿಧಾನಸಭೆ ಚುನಾವಣೆ ಫೆಬ್ರವರಿ 20 ರಂದು ಒಂದೇ ಹಂತದಲ್ಲಿ ನಡೆಯಲಿದೆ. ಮಾರ್ಚ್ 10 ರಂದು ಮತಗಳ ಎಣಿಕೆ ನಡೆಯಲಿದೆ.

ಇದನ್ನೂ ಓದಿ:ಪಂಜಾಬ್‌: ಸಿಎಂ ಅಭ್ಯರ್ಥಿ ಆಯ್ಕೆಗಾಗಿ ಫೋನ್‌ ಕರೆ: ತಾನೇ ತೋಡಿದ ಖೆಡ್ಡಾದೊಳಗೆ ಬೀಳುತ್ತಿದೆಯೇ ಎಎಪಿ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....