Homeಮುಖಪುಟಪಂಜಾಬ್‌ ಕಾಂಗ್ರೆಸ್‌ ಭಿನ್ನಮತ ಶಮನದತ್ತ; ರಾಜ್ಯಾಧ್ಯಕ್ಷರಾಗಿ ಸಿಧು ನೇಮಕ

ಪಂಜಾಬ್‌ ಕಾಂಗ್ರೆಸ್‌ ಭಿನ್ನಮತ ಶಮನದತ್ತ; ರಾಜ್ಯಾಧ್ಯಕ್ಷರಾಗಿ ಸಿಧು ನೇಮಕ

- Advertisement -
- Advertisement -

ಪಂಜಾಬ್‌ನ ಕಾಂಗ್ರೆಸ್‌ನಲ್ಲಿ ಪ್ರಾರಂಭವಾಗಿದ್ದ ಆಂತರಿಕ ಕಲಹ ನಿಲುಗಡೆಯಾಗುವ ಹಂತಕ್ಕೆ ತಲುಪಿದೆ. ಪಕ್ಷದ ಮುಖಂಡ ನವಜೋತ್ ಸಿಂಗ್ ಸಿಧು ಕಾಂಗ್ರೆಸ್‌ ರಾಜ್ಯಾಧ್ಯಕ್ಷನಾಗಿ ಭಾನುವಾರ ನೇಮಕಗೊಂಡಿದ್ದಾರೆ. ಈ ಬಗ್ಗೆ ಅವರು ಟ್ವಿಟರ್‌ನಲ್ಲಿ ಪಕ್ಷದ ರಾಷ್ಟ್ರೀಯ ನಾಯಕರುಗಳಾದ ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರಿಗೆ ಧನ್ಯವಾದ ಹೇಳಿದ್ದಾರೆ.

ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಪಂಜಾಬ್‌‌ನಲ್ಲಿ ಕಾಂಗ್ರೆಸ್‌ ಆಡಳಿತ ನಡೆಸುತ್ತಿದೆ. ಆದರೆ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್ ಮತ್ತು ರಾಜ್ಯದ ಮತ್ತೊಬ್ಬ ನಾಯಕ ನವಜೋತ್ ಸಿಂಗ್ ಸಿಧು ನಡುವೆ ವೈಮಸ್ಸು ಏರ್ಪಟ್ಟಿತ್ತು. ಇದು ಕೇಂದ್ರ ನಾಯಕತ್ವಕ್ಕೆ ತಲೆನೋವಾಗಿ ಪರಿಣಮಿಸಿತ್ತು.

ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

ಟ್ವಿಟರ್‌ನಲ್ಲಿ ಸಿಧು, ತಮ್ಮ ಮೇಲೆ ನಂಬಿಕೆ ಇಟ್ಟು ಪ್ರಮುಖ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ಮೂವರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. “ಜನರ ಅಧಿಕಾರವನ್ನು ಜನರಿಗೆ ಮರಳಿ ನೀಡುವ ಧ್ಯೇಯವನ್ನು ಪೂರೈಸಲು ಪಂಜಾಬ್‌ ಕಾಂಗ್ರೆಸ್‌ನ ಪ್ರತಿಯೊಬ್ಬ ಸದಸ್ಯರೊಂದಿಗೆ ಕೆಲಸ ಮಾಡುತ್ತೇನೆ” ಎಂದು ಹೇಳಿದ್ದಾರೆ.

“ನನ್ನ ಪ್ರಯಾಣವು ಇದೀಗ ಪ್ರಾರಂಭವಾಗಿದೆ” ಎಂದು ಅವರು ಹೇಳಿದ್ದಾರೆ.

ಪಂಜಾಬ್ ಕಾಂಗ್ರೆಸ್‌‌ನಲ್ಲಿ ಬಿಕ್ಕಟ್ಟು ತಲೆದೂರಿದಾಗಿನಿಂದ ಕಾಂಗ್ರೆಸ್‌ನ ಕೇಂದ್ರ ನಾಯಕತ್ವವು ಹಲವಾರು ಸಭೆಗಳನ್ನು ಮಾಡಿದ್ದು, ಬಿಕ್ಕಟ್ಟನ್ನು ಪರಿಹರಿಸುವ ಪ್ರಯತ್ನವಾಗಿ ಇದೀಗ ಅವರನ್ನು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾಗಿ ನೇಮಿಸಲಾಗಿದೆ.

ಸಿಧು ಅವರನ್ನು ಹೊರತುಪಡಿಸಿ, ಸಂಗತ್ ಸಿಂಗ್ ಗಿಲ್ಜಿಯಾನ್, ಸುಖ್ವಿಂದರ್ ಸಿಂಗ್ ಡ್ಯಾನಿ, ಪವನ್ ಗೋಯೆಲ್ ಮತ್ತು ಕುಲ್ಜಿತ್ ಸಿಂಗ್ ನಗ್ರಾ ಅವರನ್ನು ಪಂಜಾಬ್ ಕಾಂಗ್ರೆಸ್ ಘಟಕದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಪಕ್ಷದ ಹೈಕಮಾಂಡ್‌ನ ನಿರ್ಧಾರವನ್ನು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. “ಹೈಕಮಾಂಡ್ ನಿರ್ಧಾರ 100% ಸರಿಯಾಗಿದ್ದು, ಇದರ ಬಗ್ಗೆ ಯಾರೂ ಅಸಮಾಧಾನ ಹೊಂದಿಲ್ಲ, ಎಲ್ಲವೂ ಸರಿಯಾಗಲಿದೆ” ಎಂದು ಕಾಂಗ್ರೆಸ್ ಶಾಸಕ ನಿರ್ಮಲ್ ಸಿಂಗ್ ಶೂತ್ರಾನಾ ತಿಳಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಪಂಜಾಬ್‌: ಶಾಸಕನ ವಿರುದ್ಧ ಅತ್ಯಾಚಾರ ಪ್ರಕರಣ-ಬಂಧನಕ್ಕೆ ಆಗ್ರಹಿಸಿ ಅಕಾಲಿ ದಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...