Homeಮುಖಪುಟಸಿಧು ಅಥವಾ ಚನ್ನಿ? ಫೆಬ್ರವರಿ 6 ರಂದು ಪಂಜಾಬ್ ಸಿಎಂ ಅಭ್ಯರ್ಥಿ ಘೋಷಿಸುವ ಕಾಂಗ್ರೆಸ್‌

ಸಿಧು ಅಥವಾ ಚನ್ನಿ? ಫೆಬ್ರವರಿ 6 ರಂದು ಪಂಜಾಬ್ ಸಿಎಂ ಅಭ್ಯರ್ಥಿ ಘೋಷಿಸುವ ಕಾಂಗ್ರೆಸ್‌

- Advertisement -
- Advertisement -

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳ ಮೊದಲು ಫೆಬ್ರವರಿ 6 ರಂದು ಪಂಜಾಬ್‌ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಕಾಂಗ್ರೆಸ್ ಘೋಷಿಸುವ ಸಾಧ್ಯತೆಯಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಈ ಮೂಲಕ ಹಾಲಿ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಅಥವಾ ರಾಜ್ಯದ ಕಾಂಗ್ರೆಸ್‌ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ಅವರು ಕಾಂಗ್ರೆಸ್‌ ಪಕ್ಷದ ಸಿಎಂ ಅಭ್ಯರ್ಥಿಯಾಗಲಿದ್ದಾರೆಯೆ ಎಂಬ ರಾಜಕೀಯ ಪ್ರಶ್ನೆಗೆ ತೆರೆ ಬೀಳಲಿದೆ.

ರಾಹುಲ್ ಗಾಂಧಿ ಅವರು ಭಾನುವಾರದಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಅವರು ಸಿಎಂ ಅಭ್ಯರ್ಥಿ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಪಂಜಾಬ್‌‌: ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಜನಾಭಿಪ್ರಾಯದ ಮೊರೆ ಹೋದ ಕಾಂಗ್ರೆಸ್‌

ಜನವರಿ 27 ರಂದು ರಾಜ್ಯಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ಪಕ್ಷವು ಸಿಎಂ ಅಭ್ಯರ್ಥಿಯ ಘೋಷಣೆ ಮಾಡಿ ಚುನಾವಣೆಯನ್ನು ಎದುರಿಸಲಿದೆ, ಇದನ್ನು ಪಕ್ಷದ ಕಾರ್ಯಕರ್ತರನ್ನು ಸಂಪರ್ಕಿಸಿ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಖಚಿತಪಡಿಸಿದ್ದರು.

ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಯಾರನ್ನು ಆಯ್ಕೆ ಮಾಡಿದರೂ ಒಬ್ಬರು ಇನ್ನೊಬ್ಬರು ಬೆಂಬಲಿಸುತ್ತಾರೆ ಎಂದು ಇಬ್ಬರೂ ನಾಯಕರು ಭರವಸೆ ನೀಡಿದ್ದಾರೆ ಎಂದು ಅವರು ಅಂದು ಹೇಳಿದ್ದರು. ಅಂದಿನ ರ್‍ಯಾಲಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಸಿಧು ಅವರು ಪಕ್ಷವು ಚುನಾವಣೆಗೆ ಸಿಎಂ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ಒತ್ತಾಯಿಸಿದ್ದು, ತಾನು ‘ಶೋಪೀಸ್’ ಆಗಲು ಬಯಸುವುದಿಲ್ಲ ಎಂದು ಹೆಳಿದ್ದರು. ಇದರ ಇದರ ನಂತರ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಈ ಮಧ್ಯೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಈಗಾಗಲೇ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಮಾಲೋಚನೆ ಆರಂಭಿಸಿದ್ದಾರೆ. ಪಕ್ಷವು ತನ್ನ ಶಕ್ತಿ ಆ್ಯಪ್ ಮೂಲಕ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರಿಂದ ಪ್ರತಿಕ್ರಿಯೆಗಳನ್ನು ಪಡೆಯುತ್ತಿದೆ. ಈ ಬಗ್ಗೆ ಸಾಮಾನ್ಯ ಜನರ ಅಭಿಪ್ರಾಯವನ್ನೂ ಪಕ್ಷ ಕೇಳಿದೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ; ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯಲಿರುವ ಸಿಎಂ ಚರಣ್‌ ಜಿತ್ ಚನ್ನಿ

ಕಳೆದ ಹಲವು ವಾರಗಳಲ್ಲಿ ಚನ್ನಿ ಮತ್ತು ಸಿದ್ದು ಇಬ್ಬರೂ ತಮ್ಮನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳಲು ಪರೋಕ್ಷವಾಗಿ ಅಥವಾ ನೇರವಾಗಿ ಪ್ರಯತ್ನಿಸಿದ್ದಾರೆ.

ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಸೇರಿದ ಚಮ್ಕೌರ್ ಸಾಹಿಬ್ ಮತ್ತು ಭದೌರ್ ಎಂಬ ಎರಡು ವಿಧಾನಸಭಾ ಕ್ಷೇತ್ರಗಳಿಂದ ಕಣಕ್ಕಿಳಿದಿರುವ ಚನ್ನಿ ಅವರ ಹಿಂದೆ ಕಾಂಗ್ರೆಸ್ ತನ್ನ ಬಲವನ್ನು ಹಾಕುತ್ತಿದೆ.

ಎಸ್‌ಸಿಗಳು ಮತ್ತು ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು) ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಬ್ಯಾಂಕ್ ಆಗಿದ್ದವು, ಆದರೆ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಇತರ ಕೆಲವು ಸಣ್ಣ ಪಕ್ಷಗಳು ಮುನ್ನಲೆಗೆ ಬಂದ ನಂತರ ಈ ಮತಬ್ಯಾಂಕ್‌ ಕಾಂಗ್ರೆಸ್‌ನಿಂದ ದೂರ ಸರಿದಿತ್ತು.

ಚನ್ನಿಯನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವ ಕಾಂಗ್ರೆಸ್‌ ಪಂಜಾಬ್‌ನ ಮೂರನೇ ಒಂದು ಭಾಗದಷ್ಟು ಜನಸಂಖ್ಯೆಯನ್ನು ಹೊಂದಿರುವ ಎಸ್‌ಸಿ ಸಮುದಾಯದ ಮತ ಬ್ಯಾಂಕ್ ಅನ್ನು ಕ್ರೋಢೀಕರಿಸಲು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ಪಂಜಾಬ್‌: ಸಿಎಂ ಅಭ್ಯರ್ಥಿ ಆಯ್ಕೆಗಾಗಿ ಫೋನ್‌ ಕರೆ: ತಾನೇ ತೋಡಿದ ಖೆಡ್ಡಾದೊಳಗೆ ಬೀಳುತ್ತಿದೆಯೇ ಎಎಪಿ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ...

0
ಗುಜರಾತ್‌ನ ಅದಾನಿ ಬಂದರಿನ ಮೂಲಕ ಟ್ರಕ್‌ಗಳಲ್ಲಿ ಸಾವಿರಾರು ಹಸುಗಳನ್ನು ತುಂಬಿ ವಧೆಗಾಗಿ ಅರಬ್‌ ದೇಶಗಳಿಗೆ ಕಳಿಸಲಾಗುತ್ತಿದೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿನಾಯಕ್ ಕಟ್ಟಿಕ್ಕರ ಕನ್ನಡಿಗ ಎಂಬ ಫೇಸ್‌ಬುಕ್ ಬಳಕೆದಾರ...