Homeಮುಖಪುಟನವಜೋತ್‌ ಸಿಧುಗೆ ಹೊಸ ಜವಾಬ್ಧಾರಿ ನೀಡಲು ಮುಂದಾದ ಹೈಕಮಾಂಡ್ : 48 ಗಂಟೆಗಳಲ್ಲಿ ತೀರ್ಮಾನ

ನವಜೋತ್‌ ಸಿಧುಗೆ ಹೊಸ ಜವಾಬ್ಧಾರಿ ನೀಡಲು ಮುಂದಾದ ಹೈಕಮಾಂಡ್ : 48 ಗಂಟೆಗಳಲ್ಲಿ ತೀರ್ಮಾನ

- Advertisement -
- Advertisement -

ಪಂಜಾಬ್‌ ಕಾಂಗ್ರೆಸ್‌ನಲ್ಲಿ ತಲೆದೋರಿದ್ದ ಆಂತರಿಕ ಬಿಕ್ಕಟ್ಟು ಸದ್ಯದ ಮಟ್ಟಿಗೆ ಬಗೆ ಹರಿದಂತೆ ತೋರುತ್ತಿದೆ. ಪಂಜಾಬ್ ಕಾಂಗ್ರೆಸ್‌ ಮುಖಂಡ ನವಜೋತ್ ಸಿಂಗ್ ಸಿಧು ಮತ್ತು AICC ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಡುವೆ ಇಂದು ನಡೆದ ಮಾತುಕತೆ ಯಶಸ್ವಿಯಾಗಿದೆ ಎಂದು ಕಾಂಗ್ರೆಸ್‌ನ ಮೂಲಗಳಿಂದ ತಿಳಿದು ಬಂದಿದೆ.

ಈ ವಾರದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮತ್ತು ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಸಿಧು ಅವರು ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ: ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾದ ನವಜೋತ್ ಸಿಂಗ್ ಸಿಧು

ಪ್ರಿಯಾಂಕಾ ಗಾಂಧಿ ಮತ್ತು ನವಜೋತ್ ಸಿಂಗ್ ನಡುವಿನ ಮಾತುಕತೆ ಫಲಪ್ರಧವಾಗಿದ್ದು ಪ್ರಿಯಾಂಕಾ ಗಾಂಧಿ ಹೊಸ ರಾಜಕೀಯ ಫಾರ್ಮುಲಾ ಒಂದನ್ನು ಸಿಧು ಮುಂದಿಟ್ಟಿದ್ದಾರೆ ಎಂದು ಪ್ರಿಯಾಂಕಾ ಗಾಂಧಿಯವರಿಗೆ ನಿಖಟವಾಗಿರುವ ಕಾಂಗ್ರೆಸ್‌ ನಾಯಕರು ಹೆಳಿದ್ದಾರೆ.

ಮುಂದಿನ 48 ಗಂಟೆಯಲ್ಲಿ ನವಜೋತ್ ಸಿಂಗ್ ಸಿಧು ಅವರಿಗೆ ಕಾಂಗ್ರೆಸ್‌ ಪಕ್ಷ ಹೊಸ ಜವಾಬ್ದಾರಿಯೊಂದನ್ನು ನೀಡಲಿದೆ. ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ಒಟ್ಟಾಗಿ ಕಾಂಗ್ರೆಸ್‌ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಶ್ರಮಿಸಲಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ: ಮಠಾಧೀಶರನ್ನು ಖರೀದಿಸಿ ಅಧಿಕಾರ ಹಿಡಿದವರು ಹೆಚ್ಚು ದಿನ ಇರಲ್ಲ: ಬಿಎಸ್‌ವೈ ವಿರುದ್ಧ ಯತ್ನಾಳ್ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ: ಇಂದು ಮೊದಲ ಹಂತದ ಮತದಾನ

0
ಬಹು ನಿರೀಕ್ಷಿತ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು (ಏ.19) ನಡೆಯಲಿದೆ. ದೇಶದ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳ 16.63 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ದೇಶದ 107...