Homeಚಳವಳಿಕೃಷಿ ಕಾನೂನು ವಿರೋಧಿಸಿ ರಾಜ ಭವನಕ್ಕೆ ಮುತ್ತಿಗೆ: ಬಿಹಾರದ ರೈತರ ಮೇಲೆ ಲಾಠಿ ಚಾರ್ಜ್!

ಕೃಷಿ ಕಾನೂನು ವಿರೋಧಿಸಿ ರಾಜ ಭವನಕ್ಕೆ ಮುತ್ತಿಗೆ: ಬಿಹಾರದ ರೈತರ ಮೇಲೆ ಲಾಠಿ ಚಾರ್ಜ್!

ಕಾರ್ಪೋರೇಟ್ ಪರವಿರುವ ಕಾನೂನನ್ನು ರದ್ದುಮಾಡಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದು, ಕೇಂದ್ರ ಸರ್ಕಾರ ಮಾತ್ರ ಇದುವರೆಗೂ ಈ ಕಾನೂನುಗಳನ್ನು ಸಮರ್ಥನೆ ಮಾಡುತ್ತಲೇ ಇದೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನನ್ನು ರದ್ದುಪಡಿಸಬೇಕು ಎಂದು ಸಾವಿರಾರು ಪ್ರತಿಭಟನಾಕಾರರು ಬಿಹಾರ ರಾಜಧಾನಿ ಪಾಟ್ನಾದ ರಾಜ ಭವನಕ್ಕೆ ಮಂಗಳವಾರ ಮುತ್ತಿಗೆ ಹಾಕಿದ್ದಾರೆ. ಅಲ್ಲದೆ ಕಾನೂನಿನ ವಿರುದ್ದ ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳಿಗೆ ಬೃಹತ್‌ ಪ್ರಮಾಣದಲ್ಲಿ ಬೆಂಬಲಿಸುವಂತೆ ಕರೆ ನೀಡಿದ್ದಾರೆ.

ಪಾಟ್ನಾದ ಪ್ರಸಿದ್ದ ಗಾಂಧಿ ಮೈದಾನದಿಂದ ಪ್ರಾರಂಭವಾದ ಪ್ರತಿಭಟನಾ ಜಾಥಾವನ್ನು ಪೊಲೀಸರು ಬ್ಯಾರಿಕೇಡ್‌ಗಳನ್ನು ಬಳಸಿ ಡಾಕ್‌ ಬಂಗಲೆ ಚೌಕ್‌ನಲ್ಲಿ ತಡೆದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆಗೆ ಇಳಿದಿದ್ದು ಲಾಠಿ ಚಾರ್ಜ್‌ಗೆ ಕಾರಣವಾಯಿತು.

ಈ ಬೃಹತ್‌ ಪ್ರತಿಭಟನೆಯನ್ನು ರೈತ ಸಂಘಟನೆಗಳು ಹಾಗೂ ಎಡಪಕ್ಷಗಳು ಮುನ್ನಡೆಸಿದ್ದವು.

ಇದನ್ನೂ ಓದಿ: ಪಂಜಾಬ್: 1500 ಕ್ಕೂ ಹೆಚ್ಚು ಜಿಯೋ ಟವರ್‌ಗಳಿಗೆ ಹಾನಿ ಮಾಡಿದ ರೈತ ಹೋರಾಟಗಾರರು

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾನೂನನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 33 ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನಾ ನಿರತರೊಂದಿಗೆ ಕೇಂದ್ರ ಸರ್ಕಾರ ಇದುವರೆಗೂ ಆರು ಭಾರಿ ಮಾತುಕತೆ ನಡೆಸಿದ್ದರೂ ಅವುಗಳೆಲ್ಲವೂ ಮುರಿದು ಬಿದ್ದಿದೆ. ಕೇಂದ್ರವು ಪದೇ ಪದೇ ಒಂದೇ ರೀತಿಯ ಪ್ರಸ್ತಾಪವನ್ನು ಇಡುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

ಕಾರ್ಪೋರೇಟ್ ಪರವಿರುವ ಕಾನೂನನ್ನು ರದ್ದುಮಾಡಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದು, ಕೇಂದ್ರ ಸರ್ಕಾರ ಮಾತ್ರ ಇದುವರೆಗೂ ಈ ಕಾನೂನುಗಳನ್ನು ಸಮರ್ಥನೆ ಮಾಡುತ್ತಲೇ ಇದೆ. ಪ್ರಧಾನಿ ಮೋದಿ ಕೂಡಾ ಇತ್ತಿಚೆಗೆ ಕಾನೂನನ್ನು ಸಮರ್ಥಿಸಿಕೊಂಡಿದ್ದಾರೆ. ಈ ನಡುವೆ ಕೇಂದ್ರ ಕೃಷಿ ಇಲಾಖೆ, ಹೋರಾಟ ನಿರತ ರೈತರನ್ನು ಏಳನೇ ಸುತ್ತಿನ ಮಾತುಕತೆಗೆ ಡಿಸೆಂಬರ್‌ 30 ರಂದು ಬರುವಂತೆ ಕರೆದಿದೆ.

ಇದನ್ನೂ ಓದಿ: ರೈತ ಹೋರಾಟ: ಡಿಸೆಂಬರ್ ‌30 ರಂದು ಮತ್ತೊಂದು ಸುತ್ತಿನ ಮಾತುಕತೆಗೆ ಕರೆದ ಕೇಂದ್ರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಭಾಷಣ: ಮೋದಿಗೆ ಕಳುಹಿಸುವ ಬದಲು ‘ಜೆ.ಪಿ.ನಡ್ಡಾ’ಗೆ ನೊಟೀಸ್‌ ನೀಡಿದ ಚುನಾವಣಾ ಆಯೋಗ!

0
ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ದೂರುಗಳ ಆಧಾರದ ಮೇಲೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ನೋಟಿಸ್ ನೀಡಿದೆ. ಆದರೆ, ಈ ನೊಟೀಸ್‌ನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಕಳುಹಿಸಲಾಗಿದ್ದು,...