Homeಕರ್ನಾಟಕಮಹಿಳೆ, ವಿದ್ಯಾರ್ಥಿ ಮತ್ತು ಟ್ರಾನ್ಸ್‌ಜೆಂಡರ್‌ಗಳಿಗೆ BMTC ಬಸ್ ಪ್ರಯಾಣ ಉಚಿತಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ

ಮಹಿಳೆ, ವಿದ್ಯಾರ್ಥಿ ಮತ್ತು ಟ್ರಾನ್ಸ್‌ಜೆಂಡರ್‌ಗಳಿಗೆ BMTC ಬಸ್ ಪ್ರಯಾಣ ಉಚಿತಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ

ದೇಶದ ಹಲವು ನಗರಗಳು ಉಚಿತ ಪ್ರಯಾಣವನ್ನು ಘೋಷಿಸಿದ್ದು, ಬೃಹತ್ ಶ್ರೀಮಂತಿಕೆ ಇರುವಂತಹ ಬೆಂಗಳೂರು ನಗರದಲ್ಲಿ ಕೂಡಾ ಪ್ರಯಾಣವು ಉಚಿತ ಮಾಡಬೇಕು ಎಂದು ಅರ್ಜಿ ಒತ್ತಾಯಿಸಿದೆ

- Advertisement -
- Advertisement -

ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ, ಲೈಂಗಿಕ ಅಲ್ಪಸಂಖ್ಯಾತರಿಗೆ ಮತ್ತು ಹಿರಿಯ ನಾಗರಿಕರಿಗೆ ಬಿಎಂಟಿಸಿ ಬಸ್‌ಗಳ ಪ್ರಯಾಣ ಉಚಿತಗೊಳಿಸುವುದರೊಂದಿಗೆ, ಉಳಿದ ನಾಗರಿಕರಿಗೆ ಬಸ್ ದರಗಳನ್ನು ಕಡಿಮೆಗೊಳಿಸಲು ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ವಾರ್ಷಿಕವಾಗಿ ​1000 ಕೋಟಿ ರೂ​. ಹಂಚಿಕೆ ಮಾಡುವಂತೆ ಒತ್ತಾಯಿಸಿ ‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯು ಸಹಿ ಸಂಗ್ರಹ ಮಾಡುತ್ತಿದೆ. (ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ)

‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯ ಅರ್ಜಿ ಚೇಂಜ್‌.ಆರ್ಗ್‌ನಲ್ಲಿ ಇದ್ದು, “ಬಸ್ ಟಿಕೆಟ್ ದರಗಳನ್ನು ಮಹತ್ತರವಾದ ಪ್ರಮಾಣದಲ್ಲಿ ಇಳಿಕೆ ಮಾಡಿದರೆ ಸಾಮಾನ್ಯ ಜನರಿಗೆ ಬಹಳ ಅನುಕೂಲವಾಗುತ್ತದೆ. ಆರ್ಥಿಕ ಅವಕಾಶಗಳನ್ನು ಪಡೆದುಕೊಳ್ಳಲು ನೆರವಾಗಿ ಜೀವನ ಸುಧಾರಿಸುತ್ತದೆ. ಮಹಿಳೆಯರಿಗೆ, ಟ್ರಾನ್ಸ್ ಜೆಂಡರ್ ಸಮುದಾಯದವರಿಗೆ, ಹಿರಿಯ ನಾಗರಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣವನ್ನು ಉಚಿತಗೊಳಿಸುವುದರಿಂದ ಹೆಚ್ಚಿನ ಓಡಾಡುವ ಶಕ್ತಿ ಲಭಿಸುತ್ತದೆ” ಎಂದು ಅರ್ಜಿ ಹೇಳಿದೆ.

ಇದನ್ನೂ ಓದಿ: ವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌‌: ದೂರು, ಪ್ರತಿದೂರು ದಾಖಲು 

“ಕರ್ನಾಟಕ ಸರ್ಕಾರ 2022-23ರ ಆಯವ್ಯಯದಲ್ಲಿ ಬಿಎಂಟಿಸಿಗೆ, ಬಸ್ ಟಿಕೆಟ್ ದರಗಳನ್ನು ಕಡಿಮೆಗೊಳಿಸಲು ಹಾಗೂ ಮಹಿಳೆಯರಿಗೆ ಬಸ್ ಪ್ರಯಾಣವನ್ನು ಉಚಿತವಾಗಿ ಲಭ್ಯಗೊಳಿಸಲು ಹಣವನ್ನು ಹಂಚಿಕೆ ಮಾಡಬೇಕು” ಎಂದು ಅರ್ಜಿ ಒತ್ತಾಯಿಸಿದೆ.

ದೇಶದ ಇತರ ನಗರಗಳಲ್ಲೂ ಬಸ್‌ಗಳ ದರಗಳು ಕಡಿಮೆಯಿದ್ದು, ಮಹಿಳೆಯರಿಗೆ ಅಲ್ಲಿನ ಸರ್ಕಾರ ಉಚಿತ ಪ್ರಯಾಣ ಘೋಷಿಸಿದೆ ಎಂದು ಅರ್ಜಿ ಉಲ್ಲೇಖಿಸಿದ್ದು, ಬೃಹತ್ ಶ್ರೀಮಂತಿಕೆ ಇರುವಂತಹ ಬೆಂಗಳೂರು ನಗರದಲ್ಲಿ ಕೂಡಾ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಮಾಡಕೊಡಬೇಕು ಎಂದು ಒತ್ತಾಯಿಸಿದೆ.

ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಬಿಎಂಟಿಸಿ ಬಸ್ಸುಗಳು ಬೆಂಗಳೂರು ನಗರದ ಜೀವನಾಡಿಯಾಗಿದೆ. ಆದರೆ ಬಿಎಂಟಿಸಿ ಬಸ್ ಟಿಕೆಟ್ ದರಗಳು ಭಾರತದ ಇತರೆ ಯಾವುದೇ ನಗರಗಳಲ್ಲಿರುವ ಬಸ್ ಟಿಕೆಟ್ ದರಗಳಿಂತಲೂ ಅತ್ಯಂತ ದುಬಾರಿಯಾಗಿದೆ ಎಂದು ಹೇಳಿರುವ ಅರ್ಜಿ ಹೇಳಿದೆ.

ಇದನ್ನೂ ಓದಿ:ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ 

“ಬಿಎಂಟಿಸಿ ಬಸ್ಸುಗಳು ಈ ಅತ್ಯಂತ ದುಬಾರಿ ಟಿಕೆಟ್ ದರಗಳು ಈಗಾಗಲೇ ಕಡಿಮೆಯಾಗಿರುವ ನಗರಬಡವರ ಆದಾಯಕ್ಕೆ ಕೊಳ್ಳಿ ಇಟ್ಟಿದೆ. ಅನೇಕ ಜನರು ಸಾರಿಗೆವೆಚ್ಚಗಳನ್ನು ಉಳಿಸುವುದಕ್ಕಾಗಿ ದೂರದವರೆಗೂ ನಡೆದುಕೊಂಡೇ ಹೋಗುವಂತಾಗಿದೆ. ಇಡೀ ಕುಟುಂಬದ ಸದಸ್ಯರು ಸಾರಿಗೆ ವೆಚ್ಚಗಳನ್ನುಭರಿಸುವುದು ಸಾಧ್ಯವಾಗದೇ ಇರುವ ಕಾರಣದಿಂದಾಗಿ ಆರೋಗ್ಯ ಅಥವಾ ತಮ್ಮ ಮಕ್ಕಳ ಪೌಷ್ಠಿಕತೆ ಹಾಗೂ ಶಿಕ್ಷಣದಂತಹ ಇತರೆ ವೆಚ್ಚಗಳನ್ನು ಅನಿವಾರ್ಯವಾಗಿ ಕಡಿತಗೊಳಿಸಬೇಕಾಗುತ್ತಿದೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅರ್ಜಿಯು, “ಬಿಎಂಟಿಸಿ ಬಸ್ ಟಿಕೆಟ್ ದರಗಳನ್ನು ಸಾಮಾನ್ಯ ಜನರಿಗೆ ಅರ್ಧದಷ್ಟು ಕಡಿಮೆಗೊಳಿಸಬೇಕು.
ಮಹಿಳೆಯರು, ಮಂಗಳಮುಖಿಯರು ಹಾಗೂ ಹಿರಿಯ ನಾಗರಿಕರಿಗೆ ಬಿಎಂಟಿಸಿ ಪ್ರಯಾಣವನ್ನು ಉಚಿತಗೊಳಿಸಬೇಕು. ವಿದ್ಯಾರ್ಥಿ ಬಸ್ ಪಾಸುಗಳನ್ನು ಉಚಿತಗೊಳಿಸಿ; ವಿದ್ಯಾರ್ಥಿಗಳು ಪಾಸ್ ಬಳಸಿ ನಗರದಯಾವುದೇ ಭಾಗಕ್ಕೆ ಬೇಕಾದರೂ ಓಡಾಡುವಂತೆ ಮಾಡಬೇಕು. ಪ್ರಸ್ತುತ ಬಸ್ ಸೇವೆ ಸಮರ್ಪಕವಾಗಿ ಇಲ್ಲದಿರುವಂತಹ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯ ಬಸ್‌ಗಳನ್ನು ಬಿಡುವುದು ಹಾಗೂ ಟ್ರಿಪ್‌ಗಳನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯ ಸಂಚಾಲಕರಾದ ಅಮೃತರಾಜ್, “ನಮ್ಮ ಸಹಿ ಸಂಗ್ರಹಕ್ಕೆ ಉತ್ತಮವಾದ ಬೆಂಬಲ ಸಿಗುತ್ತಿದೆ. ಸುಮಾರು 20 ಸಾವಿರ ಸಹಿ ಸಂಗ್ರಹ ಮಾಡುವ ಉದ್ದೇಶವಿದೆ. ಜನರ ಸಹಿಯನ್ನು ಸಂಗ್ರಹಿಸಿ ಇನ್ನು ಎರಡು ದಿನಗಳ ನಂತರ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ” ಎಂದು ಹೇಳಿದ್ದಾರೆ.

ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...