Homeಕರ್ನಾಟಕಮಹತ್ವದ ಬೆಳವಣಿಗೆ: 42 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿದ ರಾಜ್ಯ ಸರ್ಕಾರ

ಮಹತ್ವದ ಬೆಳವಣಿಗೆ: 42 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿದ ರಾಜ್ಯ ಸರ್ಕಾರ

2019 ರಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಪಡೆದ ನಂತರ ನಡೆಯುತ್ತಿರುವ ಅತಿ ದೊಡ್ಡ ಐಎಎಸ್ ವರ್ಗಾವಣೆಯಾಗಿದೆ ಇದು.

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಸರ್ಕಾರ ಶನಿವಾರ 42 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿದೆ. 2019 ರಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಪಡೆದ ನಂತರ ನಡೆಯುತ್ತಿರುವ ಅತಿ ದೊಡ್ಡ ಐಎಎಸ್ ವರ್ಗಾವಣೆಯಾಗಿದೆ ಇದು.

ಈ ವರ್ಗಾವಣೆಯ ಮೂಲಕ ಹಿರಿಯ ಐಎಎಸ್ ಅಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಆಯುಷ್ ಸೇವೆಗಳ ಹೊಸ ಆಯುಕ್ತರಾಗಿದ್ದಾರೆ. ಅವರು ಈ ಹಿಂದೆ ಕರ್ನಾಟಕದ ಕೋವಿಡ್ -19 ಕ್ರಿಟಿಕಲ್ ಕೇರ್ ಸಪೋರ್ಟ್ ಕಮಿಟಿಯ ಮುಖ್ಯಸ್ಥರಾಗಿದ್ದರು. ಇದರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತ ಹುದ್ದೆಯನ್ನು ಅಲಂಕರಿಸಿದ್ದ ಪಂಕಜ್ ಪಾಂಡೆ ಅವರನ್ನು ವರ್ಗಾಯಿಸಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ ಕೇವಲ 5 ಸ್ಥಾನ ಗೆದ್ದು ತೋರಿಸಲಿ: HDK ಸವಾಲ್

ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರನ್ನು ನಗರಾಭಿವೃದ್ಧಿ ಪ್ರಧಾನ ಕಾರ್ಯದರ್ಶಿಗೆ ವರ್ಗಾಯಿಸಲಾಗಿದ್ದು, ನಗರಾಭಿವೃದ್ಧಿ ಪ್ರಧಾನ ಕಾರ್ಯದರ್ಶಿಯಾಗಿರುವ ಡಾ.ಜೆ.ರವಿಶಂಕರ್ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ರಶ್ಮಿ ಮಹೇಶ್ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವರ್ಗಾಯಿಸಲಾಗಿದೆ.

ಈ ವರ್ಗಾವಣೆಯಿಂದಾಗಿ ಅನೇಕ ಜಿಲ್ಲಾಧಿಕಾರಿಗಳನ್ನೂ ವರ್ಗಾಯಿಸಲಾಗಿದೆ. ಮಂಡ್ಯ ಜಿಲ್ಲಾಧಿಕಾರಿ ಎಂ.ವಿ.ವೆಂಕಟೇಶ್ ಅವರನ್ನು ಜಲಾನಯನ ಅಭಿವೃದ್ಧಿ ಆಯುಕ್ತರಾಗಿ ವರ್ಗಾಯಿಸಲಾಗಿದೆ. ಚಿಕ್ಕಮಗಲೂರು ಜಿಲ್ಲಾಧಿಕಾರಿ ಬಗಡಿ ಗೌತಮ್ ಅವರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ (ಜಾರಿ) ಹುದ್ದೆಯನ್ನು ನೀಡಲಾಗಿದೆ.

ಇದನ್ನೂ ಓದಿ: ಬಿಜೆಪಿ ನಾಯಕನ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ಬಹುಮಾನ ಘೋಷಿಸಿದ ಕಾಂಗ್ರೆಸ್ ನಾಯಕಿ

ರಾಯಚೂರು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಅವರಿಗೆ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಕಲ್ಬುರ್ಗಿಗೆ ವರ್ಗಾಯಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿವಮೂರ್ತಿ ಅವರನ್ನು ಕಬ್ಬಿನ ಅಭಿವೃದ್ಧಿ ಆಯುಕ್ತರಾಗಿ ಮತ್ತು ಸಕ್ಕರೆ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ತುಮಕೂರು ಜಿಲ್ಲಾಧಿಕಾರಿ ಕೆ. ರಾಕೇಶ್ ಕುಮಾರ್ ಅವರನ್ನು ಪ್ರವಾಸೋದ್ಯಮಕ್ಕೆ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.

ಕೋಲಾರ್ ಜಿಲ್ಲಾಧಿಕಾರಿ ಸಿ. ಸತ್ಯಭಾಮ, ಚಾಮರಾಜನಗರ್ ಜಿಲ್ಲಾಧಿಕಾರಿ ರವಿ ಎಮ್ಆರ್, ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಹರೀಶ್ ಕುಮಾರ್ ಮತ್ತು ಬೆಂಗಳೂರು ಗ್ರಾಮೀಣ ಜಿಲ್ಲಾಧಿಕಾರಿ ಪಿಎಂ ರವೀಂದ್ರ ಅವರನ್ನು ವರ್ಗಾಯಿಸಲಾಗಿದೆ. ಯಾರನ್ನು ಎಲ್ಲಿಗೆ ವರ್ಗಾಯಿಸಲಾಗಿದೆ ಎಂಬ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಗ್ರಾ.ಪಂ: ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅಧ್ಯಕ್ಷ ಸ್ಥಾನ ಕಸಿದುಕೊಂಡ ಸದಸ್ಯ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...