ಕೇಂದ್ರ ಸರ್ಕಾರದ ಕೃಷಿ ಕಾನೂನಗಳನ್ನು ಹಿಂಪಡೆಯುವಂತೆ ದೇಶದ ರೈತರು ಪ್ರತಿಭಟನೆ ಮಾಡುತ್ತಿದ್ದು, ಇಲ್ಲಿ ಅಘಾತಕಾರಿಯಾದ ಘಟನೆಯೊಂದು ನಡೆದಿದೆ. ರೈತರ ಹೋರಾಟಕ್ಕೆ ಬೆಂಬಲ ನೀಡಲು ತಮ್ಮ ಪ್ರಾಣವನ್ನು ಕಳೆದುಕೊಂಡ ಸಿಖ್ ಧರ್ಮಗುರುವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ನಡೆದಿದೆ. ಅವರು ಆತ್ಮಹತ್ಯಾ ಟಿಪ್ಪಣಿಯನ್ನೂ ಬರೆದಿದ್ದಾರೆ.
ಅತ್ಮಹತ್ಯಾ ಟಿಪ್ಪಣಿಯಲ್ಲಿ, “ಸರ್ಕಾರದ ವಿರುದ್ಧ ಕೋಪ ಮತ್ತು ನೋವನ್ನು ವ್ಯಕ್ತಪಡಿಸಲು ತಮ್ಮ ಪ್ರಾಣವನ್ನು ತ್ಯಾಗ ಮಾಡುತ್ತಿದ್ದೇನೆ” ಎಂದು ಬರೆಯಲಾಗಿದೆ.
ಇದನ್ನೂ ಓದಿ: ಸಮಯ ವ್ಯರ್ಥ ಎಂದು ರಕ್ಷಣಾ ಸಂಸದೀಯ ಸಮಿತಿ ಸಭೆಯಿಂದ ಹೊರನಡೆದ ರಾಹುಲ್
ಈ ಕುರಿತು ಟ್ವೀಟ್ ಮಾಡಿರುವ ಶಿರೋಮಣಿ ಅಕಾಲಿ ದಳದ ಮುಖಂಡ ಸುಖ್‌ಬೀರ್ ಸಿಂಗ್ “ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿನ ರೈತರ ಸಂಕಟವನ್ನು ನೋಡುತ್ತಿದ್ದ ಸಂತ ಬಾಬಾ ರಾಮ್ ಸಿಂಗ್ ಜಿ ನಾನಕ್ಸರ್ ಸಿಂಗ್ರಾ ವಾಲೆ, ಸ್ವತಃ ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಸಂತ ಜಿ ಅವರ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಪರಿಸ್ಥಿತಿ ಹದಗೆಡುವ ಮುನ್ನ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ…
Anguished to hear that Sant Baba Ram Singh ji Nanaksar Singhra wale shot himself at Singhu border in Kisan Dharna, looking at farmers' suffering. Sant ji's sacrifice won't be allowed to go in vain. I urge GOI not to let situation deteriorate any further & repeal the 3 agri laws. pic.twitter.com/2ct4prkcoJ
— Sukhbir Singh Badal (@officeofssbadal) December 16, 2020
ಇದನ್ನೂ ಓದಿ: ’ಒಂದು’ ಎಂಬ ಕಲ್ಪನೆ ಯಾವಾಗಲೂ ಸರ್ವಾಧಿಕಾರ ಮತ್ತು ದಬ್ಬಾಳಿಕೆಗೆ ಕಾರಣ- ಕಮಲ್ ಹಾಸನ್
ಆತ್ಮಹತ್ಯಾ ಟಿಪ್ಪಣಿಯಲ್ಲಿ “ರೈತರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಡುತ್ತಿದ್ದಾರೆ. ಆ ನೋವನ್ನು ನಾನೂ ಅನುಭವಿಸುತ್ತಿದ್ದೇನೆ… ಸರ್ಕಾರವು ಅವರಿಗೆ ನ್ಯಾಯ ಒದಗಿಸದ ಕಾರಣ ನಾನೂ ಅವರ ನೋವನ್ನು ಹಂಚಿಕೊಳ್ಳುತ್ತೇನೆ. ಅನ್ಯಾಯವನ್ನು ಮಾಡುವುದು ಪಾಪ, ಆದರೆ ಅನ್ಯಾಯವನ್ನು ಸಹಿಸುವುದು ಕೂಡಾ ಪಾಪವಾಗಿದೆ. ರೈತರನ್ನು ಬೆಂಬಲಿಸಲು, ಕೆಲವರು ತಮ್ಮ ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣವನ್ನು ತ್ಯಾಗ ಮಾಡಲು ನಿರ್ಧರಿಸಿದ್ದೇನೆ” ಎಂದು ಬರೆದಿದ್ದಾರೆ.
ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:
ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ
ಕರ್ನಾಟಕ ಆರೋಗ್ಯ ಸಹಾಯವಾಣಿ: 104
ಇದನ್ನೂ ಓದಿ: ಕೇರಳದ ಜನರು ಮೋದಿಯ ಕಲ್ಯಾಣ ಕ್ರಮಗಳನ್ನು ಒಪ್ಪಿಕೊಂಡಿದ್ದಾರೆ: ರಾಜ್ಯ ಬಿಜೆಪಿ ಮುಖಂಡ


