Homeಅಂತರಾಷ್ಟ್ರೀಯಸಿಖ್ ಪ್ರತ್ಯೇಕತಾವಾದಿ ಪನ್ನುನ್ ಕೇಸ್: ಅಜಿತ್ ದೋವಲ್, ಸಾಮಂತ್ ಗೋಯೆಲ್‌ಗೆ ಸಮನ್ಸ್ ನೀಡಲು ಅಮೆರಿಕ ಕೋರ್ಟ್...

ಸಿಖ್ ಪ್ರತ್ಯೇಕತಾವಾದಿ ಪನ್ನುನ್ ಕೇಸ್: ಅಜಿತ್ ದೋವಲ್, ಸಾಮಂತ್ ಗೋಯೆಲ್‌ಗೆ ಸಮನ್ಸ್ ನೀಡಲು ಅಮೆರಿಕ ಕೋರ್ಟ್ ಅನುಮತಿ

- Advertisement -
- Advertisement -

ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ಗುರ್ಪತ್‌ವಂತ್ ಸಿಂಗ್ ಪನ್ನುನ್ ಹೂಡಿರುವ ಖಾಸಗಿ ಸಿವಿಲ್ ಮೊಕದ್ದಮೆಗೆ ಸಂಬಂಧಿಸಿದಂತೆ ಅಮೆರಿಕದ ಫೆಡರಲ್ ನ್ಯಾಯಾಲಯವು ಪ್ರಮುಖ ಆದೇಶ ನೀಡಿದೆ. ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ಮಾಜಿ ಮುಖ್ಯಸ್ಥ ಸಾಮಂತ್ ಗೋಯೆಲ್ ಅವರಿಗೆ ಭಾರತದ ನ್ಯಾಯಾಲಯಗಳ ಮೂಲಕ ಕಾನೂನಾತ್ಮಕವಾಗಿ ಸಮನ್ಸ್ ತಲುಪಿಸಲು ಫೆಡರಲ್ ನ್ಯಾಯಾಧೀಶೆ ಕ್ಯಾಥರೀನ್ ಪೋಲ್ ಫೈಲ್ಲಾ (Katherine Polk Failla) ಅನುಮತಿ ನೀಡಿದ್ದಾರೆ. ಭಾರತ ಸರ್ಕಾರವು 2019 ರಲ್ಲಿ ‘ಸಿಖ್ಸ್ ಫಾರ್ ಜಸ್ಟಿಸ್’ (SFJ) ಸಂಸ್ಥೆಯನ್ನು ನಿಷೇಧಿಸಿದ್ದು, 2020 ರಲ್ಲಿ ಗುರ್ಪತ್‌ವಂತ್ ಸಿಂಗ್ ಪನ್ನುನ್‌ನನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಭಯೋತ್ಪಾದಕ ಎಂದು ಘೋಷಿಸಿದೆ.

ಈ ತೀರ್ಪಿನ ಪ್ರಕಾರ, ಅಜಿತ್ ದೋವಲ್ ಮತ್ತು ಸಾಮಂತ್ ಗೋಯೆಲ್‌ಗೆ ದೆಹಲಿ ನ್ಯಾಯಾಲಯಗಳ ಮೂಲಕ ಸಮನ್ಸ್ ಜಾರಿ ಮಾಡಲು ಅಮೆರಿಕ ಕೋರ್ಟ್ ಅನುಮತಿ ನೀಡಿದೆ. ಇದಕ್ಕೆ ಅಗತ್ಯವಿರುವ ದಾಖಲೆಗಳನ್ನು ಪನ್ನುನ್ ನವೆಂಬರ್ 30, 2026ರೊಳಗೆ ಸಲ್ಲಿಸಬೇಕಿದೆ. ಈ ದಾಖಲೆಗಳನ್ನು ಅಮೆರಿಕದ ನ್ಯಾಯಾಲಯವು ಸಂಪೂರ್ಣವಾಗಿ ಪರಿಶೀಲಿಸಿದ ನಂತರವಷ್ಟೇ ಭಾರತೀಯ ನ್ಯಾಯಾಲಯಗಳಿಗೆ ಪ್ರಕ್ರಿಯೆಗಾಗಿ ರವಾನಿಸಲಾಗುತ್ತದೆ. ಈ ಮೊದಲು ಅಮೆರಿಕದಲ್ಲಿ ಭಾರತೀಯ ಅಧಿಕಾರಿಗಳಿಗೆ ನೇರವಾಗಿ ಸಮನ್ಸ್ ನೀಡಲು ಪನ್ನುನ್ ಕಡೆಯವರು ನಡೆಸಿದ್ದ ಯತ್ನಗಳನ್ನು ನ್ಯಾಯಾಲಯವು ರದ್ದುಗೊಳಿಸಿತ್ತು.

ಮತ್ತೊಂದೆಡೆ, ಭಾರತ ಸರ್ಕಾರಕ್ಕೆ ಸಂಬಂಧಿಸಿದಂತೆ ಅಮೆರಿಕದ ವಿದೇಶಾಂಗ ಇಲಾಖೆಯು ಅಕ್ಟೋಬರ್ 9, 2026ರಂದೇ ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ರಾಜತಾಂತ್ರಿಕ ನೋಟ್ ಮೂಲಕ ಅಧಿಕೃತ ಸಮನ್ಸ್ ತಲುಪಿಸಿದೆ. ಭಾರತ ಸರ್ಕಾರವು ಇದಕ್ಕೆ ಉತ್ತರಿಸಲು 60 ದಿನಗಳ ಕಾಲಾವಕಾಶ ನೀಡಲಾಗಿದ್ದು, ಡಿಸೆಂಬರ್ 8, 2026ರೊಳಗೆ ಅಮೆರಿಕ ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಬೇಕಿದೆ. ಆದರೆ ದೋವಲ್ ಮತ್ತು ಗೋಯೆಲ್ ಅವರಿಗೆ ವೈಯಕ್ತಿಕವಾಗಿ ನೀಡಬೇಕಾದ ಸಮನ್ಸ್ ಪ್ರಕ್ರಿಯೆ ಇನ್ನೂ ಭಾರತೀಯ ನ್ಯಾಯಾಲಯಗಳ ಮೂಲಕ ಆರಂಭವಾಗಬೇಕಿದೆ.

2023 ರಲ್ಲಿ ಕೆನಡಾದಲ್ಲಿ ನಡೆದ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಹಾಗೂ ಅಮೆರಿಕದಲ್ಲಿ ತನ್ನ ವಿರುದ್ಧ ನಡೆಯಿತು ಎನ್ನಲಾದ ಹತ್ಯೆ ಸಂಚಿನ ಹಿನ್ನೆಲೆಯಲ್ಲಿ ನಷ್ಟಪರಿಹಾರ ಕೋರಿ ಪನ್ನುನ್ ಈ ಖಾಸಗಿ ಸಿವಿಲ್ ಅರ್ಜಿಯನ್ನು ಸಲ್ಲಿಸಿದ್ದಾನೆ. ಪ್ರಕರಣವು ಪ್ರಸ್ತುತ ಆರಂಭಿಕ ಹಂತದಲ್ಲಿದ್ದು, ಸಾರ್ವಭೌಮ ರಾಷ್ಟ್ರದ ಉನ್ನತಾಧಿಕಾರಿಗಳಿಗೆ ಲಭ್ಯವಿರುವ ‘ರಾಜತಾಂತ್ರಿಕ ವಿನಾಯಿತಿ’ ಆಧಾರದ ಮೇಲೆ ಪ್ರಕರಣವನ್ನು ವಜಾಗೊಳಿಸುವಂತೆ ಅರ್ಜಿ ಸಲ್ಲಿಸಲು ಅಮೆರಿಕದ ಕಾನೂನು ಪ್ರಕ್ರಿಯೆಯಲ್ಲಿ ಅವಕಾಶವಿದೆ ಎಂದು ವರದಿಗಳು ತಿಳಿಸಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಜಾಲತಾಣದಲ್ಲಿ ದಲಿತ ವಿರೋಧಿ ಪೋಸ್ಟ್: ಐಐಟಿ ಪಾಟ್ನಾ ರಿಜಿಸ್ಟ್ರಾರ್ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಎಫ್‌ಐಆರ್

ದಲಿತ ಸಮುದಾಯದ ಕುರಿತು ಅವಹೇಳನಕಾರಿ ಸಾಮಾಜಿಕ ಜಾಲತಾಣ ಪೋಸ್ಟ್ ಹಂಚಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಐಐಟಿ ಪಟ್ನಾದ ರಿಜಿಸ್ಟ್ರಾರ್ ಅವಲೇಂದರ್ ಕುಮಾರ್ ಠಾಕೂರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಸಂಬಂಧ ಕೆಲವು ವಾರಗಳ...

ಗೌರಿ, ಕಲ್ಬುರ್ಗಿ ಹತ್ಯೆ ಪ್ರಕರಣ | ತೇಜಸ್ವಿ ಸೂರ್ಯ ಸವಾಲಿಗೆ ಪ್ರಿಯಾಂಕ್ ಖರ್ಗೆ ಪ್ರತಿಸವಾಲು : ‘RSS ನೋಂದಾಯಿಸಿ ಫೀಸ್ ನಾನೇ ಕೊಡ್ತೇನೆ’ ಎಂದ ಗೃಹ ಸಚಿವರು

ಪತ್ರಕರ್ತೆ ಗೌರಿ ಲಂಕೇಶ್ ಮತ್ತು ವಿಚಾರವಾದಿ ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣಗಳ ವಿಚಾರಣೆಯನ್ನು ಮುಂಬರುವ ಆರು ತಿಂಗಳೊಳಗೆ ಪೂರ್ಣಗೊಳಿಸಿ, ಅಪರಾಧಿಗಳನ್ನು ಜೈಲಿಗೆ ಕಳುಹಿಸುವುದಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದರು. ಕೇರಳದ ಕೊಚ್ಚಿಯ...

ಮನಮೋಹನ್ ಸಿಂಗ್ ಅವರನ್ನು ಪ್ರಧಾನಿಯಾಗಿ ಆಯ್ಕೆ ಮಾಡಲು ಅವರ ಪ್ರಶ್ನಾತೀತ ಪ್ರಾಮಾಣಿಕತೆಯೇ ಕಾರಣ: ಸೋನಿಯಾ ಗಾಂಧಿ

2004ರಲ್ಲಿ ದೇಶದ ಪ್ರಧಾನಿಯಾಗಿ ಮನಮೋಹನ್ ಸಿಂಗ್ ಅವರನ್ನು ಆಯ್ಕೆ ಮಾಡಲು ಅವರ ‘ಪ್ರಶ್ನಾತೀತ ಪ್ರಾಮಾಣಿಕತೆ’ ಮತ್ತು ಆಡಳಿತದ ಕುರಿತಾದ ಆಳವಾದ ತಿಳುವಳಿಕೆಯೇ ಪ್ರಮುಖ ಕಾರಣವಾಗಿತ್ತು ಎಂದು ಅಂದಿನ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ...

ಕರ್ನಾಟಕದ ಎಥನಾಲ್ ವಿವಾದದ ಬೆನ್ನಲ್ಲೇ ಎಚ್ಚೆತ್ತ ಕೇರಳ: 4 ಜಿಲ್ಲೆಗಳ 9 ಬಂಕ್‌ಗಳಿಂದ ಸ್ಯಾಂಪಲ್ ಸಂಗ್ರಹ, ಲ್ಯಾಬ್‌ಗೆ ರವಾನೆ!

ಕರ್ನಾಟಕದ ಪೆಟ್ರೋಲ್ ಬಂಕ್‌ಗಳಲ್ಲಿ ನಿಗದಿತ ಶೇ. 20ರ ಮಿತಿಗಿಂತಲೂ ಅಧಿಕ (ಶೇ. 31.2 ರಷ್ಟು) ಎಥನಾಲ್ ಬೆರೆಸಲಾಗುತ್ತಿದೆ ಎನ್ನುವ ಸಚಿವ ರಿಜ್ವಾನ್ ಆರ್ಷದ್ ಅವರ ಆರೋಪಗಳ ಬೆನ್ನಲ್ಲೇ, ನೆರೆಯ ಕೇರಳ ಸರ್ಕಾರವೂ ಪೆಟ್ರೋಲ್...

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ವಿಡಿಯೋ ವಿವಾದ: ಸಿಸಿಬಿ ವಿಚಾರಣೆಗೆ ಹಾಜರಾದ ಉಚ್ಚಾಟಿತ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದೆ ಎನ್ನಲಾದ ಸ್ಟಿಂಗ್ ವಿಡಿಯೋ ವಿವಾದದ ತನಿಖೆ ಚುರುಕುಗೊಂಡಿದ್ದು, ಕಾಂಗ್ರೆಸ್‌ನಿಂದ ಉಚ್ಚಾಟನೆಗೊಂಡಿರುವ ನಾಯಕಿ ಕೃಪಾ ಆಳ್ವ ಅವರನ್ನು ಸೋಮವಾರ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಸೈಬರ್ ಅಪರಾಧ...

ಮೂರನೇ ಪತ್ನಿಗೂ ವಿಚ್ಛೇದನ: ರಷ್ಯಾದ ಅನ್ನಾ ಲೆಜ್ನೆವಾ ಜೊತೆಗಿನ 12 ವರ್ಷಗಳ ದಾಂಪತ್ಯ ಅಂತ್ಯಗೊಳಿಸಿದ ಪವನ್ ಕಲ್ಯಾಣ್

ಹೈದರಾಬಾದ್: ತೆಲುಗು ಚಿತ್ರರಂಗದ ನಟ ಹಾಗೂ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ಮೂರನೇ ದಾಂಪತ್ಯವೂ ಮುರಿದುಬಿದ್ದಿದೆ. ರಷ್ಯಾದ ಮಾಡೆಲ್ ಮತ್ತು ನಟಿ ಅನ್ನಾ ಲೆಜ್ನೆವಾ ಅವರೊಂದಿಗಿನ 12...

ಬ್ರಿಟಿಷ್ ಲೇಖಕ ಎಂ. ಜಾನ್ ಹ್ಯಾರಿಸನ್‌ಗೆ 2026ರ ಬೂಕರ್ ಪ್ರಶಸ್ತಿ : ‘ದಿ ಎಂಡ್ ಆಫ್ ಎವೆರಿಥಿಂಗ್’ ವೈಜ್ಞಾನಿಕ ಕಾದಂಬರಿಗೆ ಜಾಗತಿಕ ಮನ್ನಣೆ

ಬ್ರಿಟಿಷ್ ಮೂಲದ ಪ್ರಸಿದ್ಧ ಲೇಖಕ ಎಂ. ಜಾನ್ ಹ್ಯಾರಿಸನ್ ಅವರು ತಮ್ಮ ವೈಜ್ಞಾನಿಕ ಹಾಗೂ ಡಿಸ್ಟೋಪಿಯನ್ ವಿಡಂಬನಾತ್ಮಕ ಕಾದಂಬರಿ 'ದಿ ಎಂಡ್ ಆಫ್ ಎವೆರಿಥಿಂಗ್' ಕೃತಿಗೆ 2026ರ ಪ್ರತಿಷ್ಠಿತ ಬೂಕರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.  ಲಂಡನ್‌ನ...

ಅತ್ಯಾಚಾರದ ಬೆದರಿಕೆ, ಆಹಾರ ನಿರಾಕರಣೆ: ಇಸ್ರೇಲ್ ಬಂಧನದಲ್ಲಿರುವ 380 ಮಕ್ಕಳು ಸೇರಿದಂತೆ 9,200 ಪ್ಯಾಲೆಸ್ಟೀನಿಯನ್ನರ ಜೀವಕ್ಕೆ ಅಪಾಯ: ವರದಿ

ಗಾಜಾ ಮೇಲಿನ ಇಸ್ರೇಲ್‌ನ ನರಮೇಧದ ದಾಳಿ ಮುಂದುವರಿದಿರುವ ಬೆನ್ನಲ್ಲೇ, ಪ್ಯಾಲೆಸ್ಟೀನಿಯನ್ನರ ಮೇಲಿನ ದೌರ್ಜನ್ಯಗಳು ಜೈಲುಗಳ ಒಳಗೂ ಭೀಕರ ಸ್ವರೂಪ ಪಡೆದುಕೊಂಡಿವೆ. ಚಿತ್ರಹಿಂಸೆ, ಲೈಂಗಿಕ ದೌರ್ಜನ್ಯದ ಬೆದರಿಕೆ, ಆಹಾರದ ಕೊರತೆ, ವೈದ್ಯಕೀಯ ಚಿಕಿತ್ಸೆಯ ನಿರಾಕರಣೆ,...

ದಾಖಲೆಯ 89 ದಿನಗಳು ಕಳೆದರೂ ಅಧಿಕೃತವಾಗಿ ಮುಕ್ತಾಯಗೊಳ್ಳದ ಸಂಸತ್ತಿನ ಮುಂಗಾರು ಅಧಿವೇಶನ!

ಸಂಸತ್ತಿನ ಮುಂಗಾರು ಅಧಿವೇಶನವು ಇತಿಹಾಸದಲ್ಲೇ ಅತ್ಯಂತ ಸುದೀರ್ಘವಾದ 'ಸೈನ್ ಡೈ' (ನಿರ್ದಿಷ್ಟ ದಿನಾಂಕ ನಿಗದಿಪಡಿಸದೆ ಮುಂದೂಡುವುದು) ಮುಂದೂಡಿಕೆಯನ್ನು ದಾಖಲಿಸಿದೆ. ಬರೋಬ್ಬರಿ 89 ದಿನಗಳು ಕಳೆದರೂ ಅಧಿವೇಶನವನ್ನು ಔಪಚಾರಿಕವಾಗಿ ಮುಕ್ತಾಯಗೊಳಿಸುವ 'ಪ್ರೊರೋಗ್' (ಅಧಿವೇಶನದ ಮುಕ್ತಾಯ...

ಗೋಹತ್ಯೆ ಶಂಕೆಯ ಮೇಲಷ್ಟೇ ವಾಹನ ಜಪ್ತಿ ಮಾಡುವಂತಿಲ್ಲ: ಸಂತ್ರಸ್ತನಿಗೆ 15 ಲಕ್ಷ ರೂ. ಪರಿಹಾರ ನೀಡಲು ಅಲಹಾಬಾದ್ ಹೈಕೋರ್ಟ್ ಆದೇಶ

ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಕೇವಲ ಗೋಹತ್ಯೆಯ ಶಂಕೆಯ ಆಧಾರದ ಮೇಲೆ ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಸಂಪೂರ್ಣ ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಿಯಮಬಾಹಿರವಾಗಿ ವಾಹನ ಜಪ್ತಿ ಮಾಡಿ ಸಂತ್ರಸ್ತನಿಗೆ ನಷ್ಟ...