Homeಮುಖಪುಟಸಿಖ್‌ ಧರ್ಮ ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದೆ, ಇಸ್ಲಾಂನಂತೆ ಅಲ್ಲ: ಸುಪ್ರಿಂಕೋರ್ಟ್

ಸಿಖ್‌ ಧರ್ಮ ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದೆ, ಇಸ್ಲಾಂನಂತೆ ಅಲ್ಲ: ಸುಪ್ರಿಂಕೋರ್ಟ್

ಸಿಖ್ ಧರ್ಮದ ಆಚರಣೆಗಳನ್ನು ಇಸ್ಲಾಂನ ಆಚರಣೆಗಳೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ಅದು ಹೇಳಿದೆ

- Advertisement -
- Advertisement -

ಹಿಜಾಬ್ ನಿಷೇಧ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಪೀಠವು ಸಿಖ್ ಧರ್ಮದ ಆಚರಣೆಗಳನ್ನು ಇಸ್ಲಾಂನ ಆಚರಣೆಗಳೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ಹೇಳಿದ್ದು, ಸಿಖ್ ಧರ್ಮದ ಆಚರಣೆಗಳು ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದ್ದು, ಅದು ಇಸ್ಲಾಂ ಧರ್ಮದಂತೆ ಅಲ್ಲ ಎಂದು ಹೇಳಿದೆ.

ಹಿಜಾಬ್ ನಿಷೇಧವನ್ನು ವಿರೋಧಿಸಿದ ವಿದ್ಯಾರ್ಥಿಗಳಲ್ಲಿ ಒಬ್ಬರನ್ನು ಪ್ರತಿನಿಧಿಸಿದ ವಕೀಲ ನಿಜಾಮ್ ಪಾಷಾ, ಸಿಖ್ಖರಿಗೆ ಪೇಟವನ್ನು ಧರಿಸುವುದಕ್ಕೆ ನೀಡಿದ ರಕ್ಷಣೆಯನ್ನು ಹಿಜಾಬ್‌‌ಗೆ ಕೂಡಾ ಅತ್ಯುತ್ತಮ ಸಾಂಸ್ಕೃತಿಕ ಅಚರಣೆಯಾಗಿ ನೀಡಬೇಕು ಎಂದು ವಾದಿಸಿದ್ದಾರೆ. ಈ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠ, ಹಿಜಾಬ್‌ಗೆ ಸಿಖ್ ಧರ್ಮದ ಆಚರಣೆಗಳನ್ನು ಹೋಲಿಸುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐದು ‘ಕೆ’ಗಳು ಸಿಖ್‌ ಧರ್ಮದ ಭಾಗವೆಂದು ಈಗಾಗಲೆ ಸ್ಥಾಪಿತವಾಗಿವೆ ಎಂದು ಪೀಠವು ಹೇಳಿದೆ. “ಈ ಆಚರಣೆಗಳನ್ನು ಹಿಜಾಬ್‌ಗೆ ಹೋಲಿಸಬೇಡಿ ಏಕೆಂದರೆ ಅವುಗಳು 100 ವರ್ಷಗಳಿಂದ ಗುರುತಿಸಲ್ಪಟ್ಟಿವೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಹಿಜಾಬ್ ವಿವಾದದ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಸಾಮಾಜಿಕ ಪ್ರತ್ಯೇಕತೆ ಅನುಭವಿಸುತ್ತಿದ್ದಾರೆ: ಪಿಯುಸಿಎಲ್ ವರದಿ

ಕಾರಾ ಮತ್ತು ಪೇಟದ ಬಗ್ಗೆ ವಾದಗಳು ಮುಂದುವರಿದಿರುವುದನ್ನು ಗಮನಿಸಿದ ಪೀಠ, ಸಿಖ್ ಧರ್ಮದಲ್ಲಿನ ಆಚರಣೆಗಳು ದೇಶದ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆ ಎಂದು ಹೇಳಿದೆ. ಕರ್ನಾಟಕ ಹೈಕೋರ್ಟ್ ಪವಿತ್ರ ಕುರಾನ್‌ನ ಕೆಲವು ಶ್ಲೋಕಗಳು ಮತ್ತು ಕೆಲವು ವ್ಯಾಖ್ಯಾನಗಳನ್ನು ಉಲ್ಲೇಖಿಸಿದೆ ಎಂದು ವಾದದ ಸಮಯದಲ್ಲಿ ಪಾಷಾ ಹೇಳಿದ್ದಾರೆ. ಪವಿತ್ರ ಕುರಾನ್ ಎಲ್ಲಾ ಕಾಲಕ್ಕೂ ಪರಿಪೂರ್ಣವಾಗಿದ್ದು, ಅದರ ಶ್ಲೋಕಗಳು ಬಳಕೆಯಲ್ಲಿಲ್ಲ ಎಂದು ಹೇಳುವುದು ‘ದೇವನಿಂದೆ’ಯಾಗಿದೆ ಎಂದು ಅವರು ಹೇಳಿದ್ದಾರೆ.

ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ಹಿರಿಯ ವಕೀಲ ದೇವದತ್ತ್ ಕಾಮತ್, ವಿದ್ಯಾರ್ಥಿಗಳು ತಲೆಗೆ ಸ್ಕಾರ್ಫ್ ಹಾಕಿಕೊಂಡು ಬಂದರೆ ಬೇರೆಯವರಿಗೆ ತೊಂದರೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಹೇಳಿದೆ. ಆದರೆ ಈ ಕಾರಣಕ್ಕೆ ಅದನ್ನು ನಿಷೇಧ ಸಾಧ್ಯವಿಲ್ಲ ಎಂದು ಪೀಠಕ್ಕೆ ತಿಳಿಸಿದರು. “ಆರ್ಟಿಕಲ್ 25 ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯ ಎಂಬ ಮೂರು ನಿರ್ಬಂಧಗಳನ್ನು ಹೊಂದಿದೆ. ತಲೆ ಸ್ಕಾರ್ಫ್ ಧರಿಸುವುದು ಧಾರ್ಮಿಕ ನಂಬಿಕೆಯ ಒಂದು ಭಾಗವಾಗಿದ್ದು ಅದು ಸಂವಿಧಾನದ ಆರ್ಟಿಕಲ್‌ 19 ಮತ್ತು 21 ರ ಭಾಗವಾಗಿದೆ” ಎಂದು ಕಾಮತ್ ಪ್ರತಿಪಾದಿಸಿದರು.

ಪ್ರತಿಯೊಂದು ಧಾರ್ಮಿಕ ಆಚರಣೆಗಳು ಧರ್ಮಕ್ಕೆ ಅತ್ಯಗತ್ಯವಲ್ಲ, ಆದರೆ ಅದು ಅನಿವಾರ್ಯವಲ್ಲ ಎಂಬ ಕಾರಣ ನೀಡಿ ಸರ್ಕಾರ ಅದನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಕಾಮತ್ ವಾದಿಸಿದ್ದಾರೆ. “ನಾನು ಎಲ್ಲಿಯವರೆಗೆ ಸಾರ್ವಜನಿಕ ಸುವ್ಯವಸ್ಥೆಯನ್ನು ಉಲ್ಲಂಘಿಸುವುದಿಲ್ಲವೋ, ಎಲ್ಲಿಯವರೆಗೆ ನಾನು ನೈತಿಕತೆಯ ಎಲ್ಲೆ ಮೀರುವುದಿಲವೊ ಮತ್ತು ಎಲ್ಲಿವರೆಗೆ ಇತರರ ಆರೋಗ್ಯದ ಮೇಲೆ ಪರಿಣಾಮ ಬೀರುವುದಿಲ್ಲವೊ ಅಲ್ಲಿವರೆಗೆ ನಾನು ಧಾರ್ಮಿಕ ಆಚರಣೆ ಮಾಡಲು ಅರ್ಹನಾಗಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿಚಾರಣೆ ಮುಂದೂಡಲು ಒಪ್ಪದ ಸುಪ್ರೀಂ: ರಾಜ್ಯ ಸರ್ಕಾರಕ್ಕೆ ನೋಟಿಸ್

ಹಿರಿಯ ವಕೀಲರೊಬ್ಬರು ಧರಿಸುವ ‘ನಾಮ’ವನ್ನು ಉದಾಹರಣೆ ನೀಡಿದ ಕಾಮತ್, “ಇದು ಹಿಂದೂ ನಂಬಿಕೆಯ ಧರ್ಮದ ಅವಿಭಾಜ್ಯ ಅಂಗವಾಗಿಲ್ಲ. ಆದರೆ ಇದು ನ್ಯಾಯಾಲಯದಲ್ಲಿ ಶಿಸ್ತಿಗೆ ಹೇಗೆ ಹಾನಿ ಮಾಡುತ್ತದೆ? ಇದು ಸಾರ್ವಜನಿಕ ಸುವ್ಯವಸ್ಥೆಗೆ ಹೇಗೆ ಧಕ್ಕೆ ತರುತ್ತದೆಯೇ?” ಎಂದು ಕೇಳಿದರು.

ಈ ವೇಳೆ ನ್ಯಾಯಾಲಯಕ್ಕೆ ಹಾಜರಾಗಲು ವಕೀಲರಿಗೆ ನಿರ್ದಿಷ್ಟ ಸಮವಸ್ತ್ರವಿದೆ ಎಂದು ಪೀಠವು ಹೇಳಿತು. ಹವಾಮಾನ ವೈಪರೀತ್ಯದ ಕಾರಣದಿಂದ ರಾಜಸ್ಥಾನ ಮತ್ತು ಗುಜರಾತಿನ ಜನರು ಪೇಟ(ಪಗ್ಡಿ)ವನ್ನು ವಾಡಿಕೆಯಂತೆ ಧರಿಸುತ್ತಾರೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ಸಾರ್ವಜನಿಕ ಸುವ್ಯವಸ್ಥೆ ಕುರಿತ ವಾದಗಳ ಕುರಿತು ಮಾತನಾಡಿದ ಪೀಠವು, “ರಸ್ತೆಯಲ್ಲಿ ಹಿಜಾಬ್ ಧರಿಸುವುದರಿಂದ ಯಾರಿಗೂ ತೊಂದರೆ ಆಗುವುದಿಲ್ಲ. ಆದರೆ ನೀವು ಶಾಲೆಯ ಕಟ್ಟಡ, ಶಾಲಾ ಆವರಣದ ಬಗ್ಗೆ ಮಾತನಾಡುತ್ತಿದ್ದರೆ, ಶಾಲೆಯು ಅಲ್ಲಿ ಯಾವ ರೀತಿಯ ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಬಯಸುತ್ತದೆ ಎಂಬುದು ಪ್ರಶ್ನೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: ಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

ಸಾರ್ವಜನಿಕ ಸುವ್ಯವಸ್ಥೆ ಸರ್ಕಾರದ ಜವಾಬ್ದಾರಿಯಾಗಿದೆ, ಆದರೆ ಶಾಲೆಗೆ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಾಮತ್ ವಾದಿಸಿದ್ದಾರೆ. “ಕಲಂ 25ರ ಪ್ರಕಾರ ಜನರು ತಮ್ಮ ಹಕ್ಕುಗಳನ್ನು ಚಲಾಯಿಸುವ ವಾತಾವರಣವನ್ನು ಸೃಷ್ಟಿಸುವುದು ಸರ್ಕಾರದ ಕರ್ತವ್ಯ. ನಾನು ತಲೆಗೆ ಸ್ಕಾರ್ಫ್ ಧರಿಸುವುದರಿಂದ ಯಾರದ್ದಾದರೂ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದಂತೆ ಆಗುತ್ತದೆಯೆ?” ಅವರು ಹೇಳಿದ್ದಾರೆ.

ಇದು ಇತರರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಪ್ರಶ್ನೆಯಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. “ನೀವು ಯಾವ ರೀತಿಯ ಮೂಲಭೂತ ಹಕ್ಕನ್ನು ನೀವು ಚಲಾಯಿಸಲು ಬಯಸುತ್ತೀರಿ ಎಂಬ ಪ್ರಶ್ನೆಯಾಗಿದೆ” ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಿಸ್ಸಂಶಯವಾಗಿ ಇದೊಂದು ಪೂರ್ವಾಗ್ರಹ ಪೀಡಿತ ಧೋರಣೆ. ಭಾರತದಲ್ಲಿ ಉದಯಿಸದ ಧರ್ಮಗಳನ್ನು ಭಾರತೀಯರು ಪಾಲಿಸುವ ಹಕ್ಕಿದೆಯೆಂದಾದರೆ ಧಾರ್ಮಿಕ ಆಚರಣೆಗಳೂ ಸರ್ವರ ಧರ್ಮದವರಿಗೂ ಸಮಾನವಾಗಿರಬೇಕು.ಸಿಖ್,ಹಿಂದೂ,ಇಸ್ಲಾಂ ಧರ್ಮದವರಿಗೂ ತಮ್ಮ ಧಾರ್ಮಿಕಾಚರಣೆಯ ಸಮಾನ ಹಕ್ಕುಗಳನ್ನು ಅಮೇರಿಕಾ, ಕೆನಡಾ, ಬ್ರಿಟನ್ ಮೊದಲಾದ ದೇಶಗಳು ಕೊಟ್ಟಿವೆ. ಸಾಂವಿಧಾನಿಕ ಹಕ್ಕುಗಳ ಸರಿಯಾದ ವಿಶ್ಲೇಷಣೆ ಮಾಡಿ ನ್ಯಾಯ ಒದಗಿಸುವುದು ಸುಪ್ರೀಂ ಕೋರ್ಟ್ ಕಟ್ಟಡವಲ್ಲ, ನಮ್ಮ ನಿಮ್ಮಂತಿರುವ ಹುಲು ಮಾನವರು. ಅವರೂ ಪೂರ್ವಾಗ್ರಹತೆಗಳನ್ನು ಹೊಂದಿರುತ್ತಾರೆ,ಭ್ರಷ್ಟರೂ ಆಗಿರುತ್ತಾರೆ ಎಂಬುದನ್ನು ಕಳೆದ ಎರಡು ದಶಕಗಳ ತೀರ್ಪಗಳು ಸಾಬೀತು ಪಡಿಸಿವೆ.

  2. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಸಂಸ್ಕೃತಿ ಯನ್ನು ಮಾತ್ರ ಎತ್ತಿ ಹಿಡಿದರೆ ಕೋರ್ಟ್ ಗೇನು ಬೆಲೆ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...