HomeಮುಖಪುಟSilence for Gaza| ಇಸ್ರೇಲ್ ನರಮೇಧದ ವಿರುದ್ಧ 'ಡಿಜಿಟಲ್ ಸತ್ಯಾಗ್ರಹ'ಕ್ಕೆ ಕರೆ ಕೊಟ್ಟ ಸಿಪಿಐ(ಎಂ)

Silence for Gaza| ಇಸ್ರೇಲ್ ನರಮೇಧದ ವಿರುದ್ಧ ‘ಡಿಜಿಟಲ್ ಸತ್ಯಾಗ್ರಹ’ಕ್ಕೆ ಕರೆ ಕೊಟ್ಟ ಸಿಪಿಐ(ಎಂ)

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧವನ್ನು ಖಂಡಿಸಿ ಜಾಗತಿಕವಾಗಿ ನಡೆಯುತ್ತಿರುವ ಸೈಲೆನ್ಸ್ ಫಾರ್ ಗಾಝಾ (Silence for Gaza)’ಡಿಜಿಟಲ್ ಸತ್ಯಾಗ್ರಹ’ವನ್ನು ಬೆಂಬಲಿಸುವಂತೆ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಕರೆಕೊಟ್ಟಿದೆ.

ಪ್ರತಿದಿನ 30 ನಿಮಿಷಗಳ ಕಾಲ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡುವುದು. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವುದು, ಲೈಕ್ ಒತ್ತುವುದು, ಕಾಮೆಂಟ್, ಶೇರ್ ಮಾಡುವುದರಿಂದ ದೂರ ಉಳಿಯುವುದೇ ಈ ಡಿಜಿಟಲ್ ಸತ್ಯಾಗ್ರಹ.

ಜಗತ್ತಿನ ವಿವಿದೆಡೆ ಈ ಪ್ರಯೋಗಗಳು ನಡೆದಿದೆ ಎಂದು ವರದಿಗಳು ಹೇಳಿವೆ. ಭಾರತದಲ್ಲಿ ಮೊದಲ ಬಾರಿಗೆ ಸಿಪಿಐ(ಎಂ) ಈ ಸತ್ಯಾಗ್ರಹಕ್ಕೆ ಕರೆಕೊಟ್ಟಿದೆ. ಈ ಮೂಲಕ ಜಾಗತಿಕ ಪ್ರತಿಭಟನೆಯನ್ನು ಬೆಂಬಲಿಸಿದೆ.

ಪ್ರತಿದಿನ ರಾತ್ರಿ 9.00 ಗಂಟೆಯಿಂದ 9.30ರವರೆಗೆ ಮೊಬೈಲ್ ಫೋನ್‌ಗಳನ್ನು ಸ್ವಿಚ್‌ ಅಫ್ ಮಾಡಿ ‘ಸೈಲೆನ್ಸ್ ಫಾರ್ ಗಾಝಾ’ ಡಿಜಿಟಲ್ ಸತ್ಯಾಗ್ರಹವನ್ನು ಬೆಂಬಲಿಸುವಂತೆ ಸಿಪಿಐ(ಎಂ) ಪಾಲಿಟ್ ಬ್ಯೂರೋ ಜುಲೈ 5ರಂದು ಕರೆ ಕೊಟ್ಟಿದೆ.

ಇತ್ತೀಚೆಗೆ ಬಿಡುಗಡೆಯಾದ ವಿಶ್ವಸಂಸ್ಥೆಯ ವರದಿ “ಆಕ್ಯುಪೇಶನ್ ಆರ್ಥಿಕತೆಯಿಂದ ಜನಾಂಗೀಯ ಹತ್ಯೆಯ ಆರ್ಥಿಕತೆಗೆ”, ಗಾಜಾದ ಮೇಲಿನ ಇಸ್ರೇಲ್ ದಾಳಿಯಲ್ಲಿ ವಿವಿಧ ಬಹುರಾಷ್ಟ್ರೀಯ ಸಂಸ್ಥೆಗಳು ಹೇಗೆ ಭಾಗಿಯಾಗಿವೆ ಎಂಬುದನ್ನು ವಿವರಿಸುತ್ತದೆ ಎಂದು ಸಿಪಿಐ(ಎಂ) ಹೇಳಿದೆ.

ಇತ್ತೀಚೆಗೆ ಬಿಡುಗಡೆಯಾದ ‘From Economy of Occupation to Economy of Genocide’ಗಾಝಾದ ಮೇಲಿನ ಇಸ್ರೇಲ್ ದಾಳಿಯಲ್ಲಿ ವಿವಿಧ ಬಹುರಾಷ್ಟ್ರೀಯ ಸಂಸ್ಥೆಗಳು ಹೇಗೆ ಭಾಗಿಯಾಗಿವೆ ಎಂಬುದನ್ನು ವಿವರಿಸುತ್ತದೆ. ಹಾಗಾಗಿ, ಈ ಸಂಸ್ಥೆಗಳ ದುಷ್ಟ ಪಾತ್ರವನ್ನು ಬಹಿರಂಗಪಡಿಸಬೇಕು. ಅವುಗಳನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂದು ಸಿಪಿಐ(ಎಂ) ಹೇಳಿಕೆಯಲ್ಲಿ ತಿಳಿಸಿದೆ.

ಈ ಸಂಸ್ಥೆಗಳು ನರಮೇಧಕ್ಕೆ ಕಾರಣವಾದರೂ ಕೂಡ, ನಮ್ಮ ಡಿಜಿಟಲ್ ಹೆಜ್ಜೆಗುರುತುಗಳನ್ನು ಪೋಷಿಸುತ್ತವೆ. ನಿಗದಿತ ಸಮಯದಲ್ಲಿ ಪ್ರತಿದಿನ ಅರ್ಧ ಗಂಟೆ ನಮ್ಮ ಮೊಬೈಲ್ ಫೋನ್‌ಗಳನ್ನು ಸ್ಥಗಿತಗೊಳಿಸುವುದು ಸಣ್ಣ ವಿಷಯ. ಆದರೆ, ಡಿಜಿಟಲ್ ಅಡ್ಡಿಪಡಿಸುವಿಕೆಯ ಶಕ್ತಿಯುತವಾದ ಕ್ರಿಯೆಯಾಗಿದೆ. ಇಸ್ರೇಲ್‌ನ ನರಮೇಧ ಮತ್ತು ವರ್ಣಭೇದ ನೀತಿಯನ್ನು ಬೆಂಬಲಿಸುವ ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧದ ಮುಷ್ಕರ ಎಂದಿದೆ.

ಸಿಪಿಐ(ಎಂ) ದೇಶಾದ್ಯಂತ ಜನರು ಈ ಡಿಜಿಟಲ್ ಪ್ರತಿರೋಧದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡಿದೆ. ಪ್ರತಿಭಟನೆಯ ಅವಧಿಯಲ್ಲಿ ನಿಮ್ಮ ಮೊಬೈಲ್ ಫೋನ್‌ಗಳನ್ನು ಆಫ್ ಮಾಡಿ ಮತ್ತು ಯಾವುದೇ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡುವುದು, ಲೈಕ್ ಮಾಡುವುದು ಅಥವಾ ಕಾಮೆಂಟ್ ಮಾಡುವುದನ್ನು ತಪ್ಪಿಸಿ ಎಂದು ಕೋರಿದೆ.

‘ಸೈಲೆನ್ಸ್ ಫಾರ್ ಗಾಝ’ ಎಂಬ ಜಾಗತಿಕ ಪ್ರತಿರೋಧದಲ್ಲಿ ಭಾಗವಹಿಸುವ ಮೂಲಕ, ಸಿಪಿಐ(ಎಂ) ಪ್ಯಾಲೆಸ್ತೀನ್ ಜನರೊಂದಿಗೆ ಮತ್ತು ಇಸ್ರೇಲ್ ನಡೆಸಿದ ಕ್ರೂರ, ನರಮೇಧದ ವಿರುದ್ಧ ನಿಲ್ಲುತ್ತದೆ. ಈ ಸಾಮೂಹಿಕ ಮೌನವು ನರಮೇಧದ ವಿರುದ್ದದ ಧಿಕ್ಕಾರದ ಕೂಗಾಗಲಿ. ಯುದ್ಧ ಅಪರಾಧಗಳ ವಿರುದ್ಧದ ಧ್ವನಿಯನ್ನು ಅಡಗಿಸಲಾಗುವುದಿಲ್ಲ ಎಂಬ ಪ್ರಬಲ ಪ್ರತಿಪಾದನೆಯಾಗಿರಲಿ ಎಂದು ಸಿಪಿಐ(ಎಂ) ಹೇಳಿದೆ.

ಟ್ರಂಪ್ ವಿರುದ್ಧ ತಿರುಗಿ ಬಿದ್ದ ಅತ್ಯಾಪ್ತ ಎಲಾನ್ ಮಸ್ಕ್: ಹೊಸ ರಾಜಕೀಯ ಪಕ್ಷ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...