Homeಚಳವಳಿಶಾಲೆ ಆರಂಭಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಮೌನ ಪ್ರತಿಭಟನೆ

ಶಾಲೆ ಆರಂಭಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಮೌನ ಪ್ರತಿಭಟನೆ

ನಮಗೆ ಜ್ಞಾನದೇಗುಲದ ಅವಶ್ಯಕತೆ ಇದೆ. ನಮ್ಮನ್ನು ಬಂಧಿ ಮಾಡಬೇಡಿ, ಶಿಕ್ಷಣ ನಮ್ಮ ಮೂಲಭೂತ ಹಕ್ಕು ಕಸಿಯಬೇಡಿ, ಶಾಲೆ ತೆರೆದು ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲಿಸಿ ಎಂಬ ಪ್ಲೆಕಾರ್ಡುಗಳನ್ನು ಹಿಡಿದು ಪ್ರತಿಭಟಿಸಲಾಯಿತು.

- Advertisement -
- Advertisement -

ಕೊರೊನಾ ಕಾರಣಕ್ಕೆ ಸ್ಥಗಿತಗೊಂಡಿರುವ ಶಾಲೆಗಳನ್ನು ಕೂಡಲೇ ಆರಂಭಿಸುವಂತೆ ಒತ್ತಾಯಿಸಿ ‘ವಿದ್ಯಾರ್ಥಿಗಳ ನಡೆ-ಶಾಲೆಯ ಕಡೆ’ ಅಭಿಯಾನದ ವತಿಯಿಂದ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಮೌನ ಪ್ರತಿಭಟನೆ ನಡೆಸಲಾಯಿತು.

ನಮಗೆ ಜ್ಞಾನದೇಗುಲದ ಅವಶ್ಯಕತೆ ಇದೆ. ನಮ್ಮನ್ನು ಬಂಧಿ ಮಾಡಬೇಡಿ, ಶಿಕ್ಷಣ ನಮ್ಮ ಮೂಲಭೂತ ಹಕ್ಕು ಕಸಿಯಬೇಡಿ, ಶಾಲೆ ತೆರೆದು ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲಿಸಿ ಎಂಬ ಪ್ಲೆಕಾರ್ಡುಗಳನ್ನು ಹಿಡಿದು ಪ್ರತಿಭಟಿಸಲಾಯಿತು.

ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಮಕ್ಕಳ ಪರವಾಗಿ ನಾವು ಪ್ರತಿಭಟಿಸೋಣ, ಆನ್‌ಲೈನ್‌ ಶಿಕ್ಷಣ ಬೇಡವೇ ಬೇಡ ಎಂಬ ಹಕ್ಕೊತ್ತಾಯಗಳು ಕೇಳಿಬಂದವು.

ವಿದ್ಯಾರ್ಥಿಗಳ ನಡೆ-ಶಾಲೆಯ ಕಡೆ ಅಭಿಯಾನದ ಪರವಾಗಿ ಪ್ರತಿಭಟನೆಯಲ್ಲಿ ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯ, ಸಮಾನ ಶಿಕ್ಷಣಕ್ಕಾಗಿ ಜನಾಂದೋಲದ ಬಿ.ಶ್ರೀಪಾದ್ ಭಟ್, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್ ಬೆಂಕೀಕೆರೆ, ಮನೋಜ್, ಎಐಎಸ್‌ಎಫ್‌ನ ಜ್ಯೋತಿ ಕೆ, ವಿಚಾರವಾದಿ ವೇದಿಕೆಯ ನಾಗೇಶ್ ಅರಳಕುಪ್ಪೆ ಮುಂತಾದವರು ಭಾಗವಹಿಸಿದ್ದರು.

ರಾಜ್ಯದಲ್ಲಿ ಸೆಪ್ಟೆಂಬರ್ ಬಳಿಕ ಕೊರೊನಾ ಸೋಂಕಿನ ಹರಡುವಿಕೆಯು ಗಣನೀಯವಾಗಿ ಇಳಿದಿದ್ದರೂ, ಮಾರ್ಚ್ ತಿಂಗಳಿನಿಂದಲೇ ಮುಚ್ಚಿದ ಶಾಲೆ-ಕಾಲೇಜುಗಳನ್ನು ಪುನರಾರಂಭಿಸದಿರುವ ರಾಜ್ಯ ಸರ್ಕಾರದ ನಿರ್ಧರವನ್ನು ಖಂಡಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿ ಕಳೆದ ವಾರ ಶಿಕ್ಷಣ ಸಚಿವರಿಗೆ ಪತ್ರ ಬರೆದಿತ್ತು.

ಕಳೆದ 3-4 ತಿಂಗಳಲ್ಲಿ ಸಾರ್ವಜನಿಕ ಚಟುವಟಿಕೆಗಳಿಗೆಲ್ಲ ಅನುವು ಮಾಡಲಾಗಿದೆ. ಪ್ರಯಾಣ, ಹೋಟೆಲ್, ಬಾರುಗಳು, ಮಾರುಕಟ್ಟೆಗಳು, ದೊಡ್ಡ ದೊಡ್ಡ ಮಾಲ್‌ಗಳು, ಸಭೆ-ಸಮಾರಂಭಗಳು, ಸಾರ್ವಜನಿಕ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು, ಚುನಾವಣಾ ಪ್ರಚಾರ ಮುಂತಾದ ಎಲ್ಲಾ ಚಟುವಟಿಕೆಗಳಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ. ಕೊರೋನ ಸೋಂಕು ವ್ಯಾಪಕವಾಗಿಯೂ, ಕ್ಷಿಪ್ರವಾಗಿಯೂ ಹರಡುತ್ತಿದ್ದ ಮೇ-ಜುಲೈ ಅವಧಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳನ್ನೂ, ಸಿಇಟಿ, ನೀಟ್ ಇತ್ಯಾದಿ ಪರೀಕ್ಷೆಗಳನ್ನೂ ಯಶಸ್ವಿಯಾಗಿ ನಡೆಸಲಾಗಿದ್ದು, ಅದರಿಂದ ವಿದ್ಯಾರ್ಥಿಗಳಿಗಾಗಲೀ, ಶಿಕ್ಷಕರಿಗಾಗಲೀ ಯಾವುದೇ ಸಮಸ್ಯೆಗಳಾಗಿಲ್ಲ ಎಂದು ಸರ್ಕಾರ ತಿಳಿಸಿದೆ. ಹಾಗಾದರೆ ಶಾಲೆ ಆರಂಭಕ್ಕೆ ಏಕೆ ತಡೆ ಎಂದು ಸಮಿತಿ ಕಿಡಿಕಾರಿದೆ.


ಇದನ್ನೂ ಓದಿ: ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳದಲ್ಲಿ ತೀವ್ರಗೊಳ್ಳಲಿರುವ ಮಳೆ; ಆರೇಂಜ್-ಯೆಲ್ಲೋ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

0
ಮುಂದಿನ ಕೆಲವು ದಿನಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆಯಿರುವುದರಿಂದ ಭಾರತೀಯ ಹವಾಮಾನ ಇಲಾಖೆ ಗುರುವಾರ ಕೇರಳದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮೇ 18 ರಂದು ಪಾಲಕ್ಕಾಡ್ ಮತ್ತು ಮಲಪ್ಪುರಂ, ಮೇ 19 ರಂದು...