Homeಕರ್ನಾಟಕಶಿವಮೊಗ್ಗ: ಗಾಂಧಿ ಪ್ರತಿಮೆ ಧ್ವಂಸ; ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ ಸಿಎಂ

ಶಿವಮೊಗ್ಗ: ಗಾಂಧಿ ಪ್ರತಿಮೆ ಧ್ವಂಸ; ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ ಸಿಎಂ

- Advertisement -
- Advertisement -

ಶಿವಮೊಗ್ಗದ ಹೊಳೆಹೊನ್ನೂರಿನ ಗಾಂಧಿ ಸರ್ಕಲ್‌ನಲ್ಲಿರುವ ಗಾಂಧಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ರವಿವಾರ ತಡರಾತ್ರಿ ನಡೆದಿದೆ.

ವಿಚಾರ ತಿಳಿಯುತ್ತಿದ್ದಂತೆ  ಸ್ಥಳೀಯ ಜನರು ಹೊಳೆಹೊನ್ನೂರಿನ ಗಾಂಧಿ ಸರ್ಕಲ್‌ ರಸ್ತೆ ಬಳಿ ರಸ್ತೆ ತಡೆದು  ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಹೊಳೆಹೊನ್ನೂರಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು ಸ್ಥಳದಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್‌ನಲ್ಲಿ(x) ಪ್ರತಿಕ್ರಿಯಿಸಿದ್ದು,  ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ ಎಂದು ಹೇಳಿದ್ದಾರೆ.

ಇದಲ್ಲದೆ ಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳಬಾರದು, ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.

 

ಇದನ್ನು ಓದಿ: ರಾಜೀವ್ ಗಾಂಧಿಯ ರಾಜಕೀಯ ಜೀವನ ಕ್ರೂರ ರೀತಿಯಲ್ಲಿ ಕೊನೆಗೊಂಡಿದೆ: ಸೋನಿಯಾ ಗಾಂಧಿ

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...