Homeಮುಖಪುಟ‘ಒಂದು ರಾಷ್ಟ್ರ, ಒಂದು ಚುನಾವಣೆ‘; ಕೋವಿಂದ್‌ ಸಮಿತಿಗೆ ನಿಲುವನ್ನು ತಿಳಿಸಿದ ಪ್ರತಿಪಕ್ಷಗಳು

‘ಒಂದು ರಾಷ್ಟ್ರ, ಒಂದು ಚುನಾವಣೆ‘; ಕೋವಿಂದ್‌ ಸಮಿತಿಗೆ ನಿಲುವನ್ನು ತಿಳಿಸಿದ ಪ್ರತಿಪಕ್ಷಗಳು

- Advertisement -
- Advertisement -

ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ‘ಒಂದು ರಾಷ್ಟ್ರ ಒಂದು ಚುನಾವಣೆ‘ ಕುರಿತ ಉನ್ನತ ಮಟ್ಟದ ಸಮಿತಿ ಜೊತೆ ಪ್ರತಿಪಕ್ಷಗಳ ನಿಯೋಗ ಮಾತುಕತೆಯನ್ನು ನಡೆಸಿದ್ದು, ಪ್ರಸ್ತಾವನೆಗೆ ತಮ್ಮ ಬಲವಾದ ವಿರೋಧವನ್ನು ವ್ಯಕ್ತಪಡಿಸಿದೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಮತ್ತು ಸಮಾಜವಾದಿ (ಎಸ್‌ಪಿ) ಪಕ್ಷದ ಜೊತೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿದ್ದು, ಏಕಕಾಲಕ್ಕೆ ಚುನಾವಣೆಯನ್ನು ನಡೆಸುವ ಪ್ರಸ್ತಾವಣೆ ಬಗ್ಗೆ ಮಾತುಕತೆಯನ್ನು ನಡೆಸಿದ್ದಾರೆ.

ಇದಲ್ಲದೆ ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್(ಎಫ್‌ಐಸಿಸಿಐ) ನಿಯೋಗವು ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತ ಉನ್ನತ ಮಟ್ಟದ ಸಮಿತಿಯನ್ನು ಭೇಟಿ ಮಾಡಿದ್ದು, ಏಕಕಾಲಕ್ಕೆ ಚುನಾವಣೆಯ ಕುರಿತ ಕಲ್ಪನೆಯನ್ನು ಬೆಂಬಲಿಸಿದೆ.

ಟಿಎಂಸಿಯ ಹಿರಿಯ ನಾಯಕರಾದ ಸುದೀಪ್ ಬಂಡೋಪಾಧ್ಯಾಯ ಮತ್ತು ಕಲ್ಯಾಣ್ ಬ್ಯಾನರ್ಜಿ ಪ್ರಸ್ತಾವಣೆ ಬಗ್ಗೆ ಸಮಿತಿಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಏಕಕಾಲದಲ್ಲಿ ಚುನಾವಣೆ ನಡೆಸುವ ಕಲ್ಪನೆಗೆ ತಮ್ಮ ಪಕ್ಷದ ಆಕ್ಷೇಪವನ್ನು ಪುನರುಚ್ಚರಿಸಿದ್ದಾರೆ, ಈ ಕ್ರಮವು ಭಾರತವನ್ನು ಸರ್ವಾಧಿಕಾರದೆಡೆಗೆ ಪರಿವರ್ತಿಸುವ ಗೌಪ್ಯ ಅಜೆಂಡಾವನ್ನು ಹೊಂದಿದೆ ಎಂದು ಹೇಳಿದ್ದಾರೆ.

ನಾವು ಮಾಜಿ ರಾಷ್ಟ್ರಪತಿಗಳ ನೇತೃತ್ವದ ಸಮಿತಿಯ ಮುಂದೆ ಹಾಜರಾಗಿದ್ದೇವೆ. ನಮ್ಮ ನಾಯಕಿ ಮಮತಾ ಬ್ಯಾನರ್ಜಿ ಬರೆದ ಪತ್ರವನ್ನು ನಾವು ಉಲ್ಲೇಖಿಸಿದ್ದೇವೆ. ನಾವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯನ್ನು ವಿರೋಧಿಸುತ್ತಿದ್ದೇವೆ ಎಂದು ಖಡಕ್‌ ಆಗಿ ಹೇಳಿದ್ದೇವೆ ಎಂದು ಹೇಳಿದ್ದಾರೆ.

ಈ ಕಲ್ಪನೆಯನ್ನು ಕಾರ್ಯಗತಗೊಳಿಸಿದರೆ, ದೇಶದ ಸಂಯುಕ್ತ ರಚನೆಗೆ ಧಕ್ಕೆಯುಂಟುಮಾಡಲಿದೆ. ಉದಾಹರಣೆಗೆ ರಾಜ್ಯ ಸರ್ಕಾರ ಪತನವಾಗಿದೆ ಎಂದು ಭಾವಿಸೋಣ. ಅದು ಈಗ ಎಲ್ಲೆಡೆ ನಡೆಯುತ್ತಿದೆ. ಹಾಗಿದ್ದರೆ ಆ ರಾಜ್ಯ ಸರ್ಕಾರ ಮುಂದುವರಿಯುತ್ತದೆಯೇ ಅಥವಾ ಉಳಿದ ಅವಧಿಗೆ ರಾಷ್ಟ್ರಪತಿ ಆಳ್ವಿಕೆ ಹೇರಲಾಗುತ್ತದೆಯೇ? ಹೀಗಾದರೆ ಜನರ ಆಯ್ಕೆಯ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಲಿದೆ ಎಂದು ಬ್ಯಾನರ್ಜಿ ಹೇಳಿದ್ದಾರೆ.

ಸಿಪಿಐ(ಎಂ) ಪ್ರಧಾನ ಸೀತಾರಾಂ ಯೆಚೂರಿ, ಪಾಲಿಟ್‌ಬ್ಯೂರೋ ಸದಸ್ಯ ನೀಲೋತ್ಪಾಲ್ ಬಸು ಮತ್ತು ಕೇಂದ್ರ ಕಾರ್ಯದರ್ಶಿ ಮುರಳೀಧರನ್ ಅವರನ್ನೊಳಗೊಂಡ ಮೂವರು ಸದಸ್ಯರ ಸಿಪಿಐ(ಎಂ) ನಿಯೋಗವೂ ಸಮಿತಿಯನ್ನು ಭೇಟಿ ಮಾಡಿ ರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಪ್ರಸ್ತಾವನೆಗೆ ಆಕ್ಷೇಪಣೆಯನ್ನು ವ್ಯಕ್ತಪಡಿಸಿದೆ.

ಸಮಿತಿಯನ್ನು ತಾನು ಸಂಪೂರ್ಣವಾಗಿ ಒಪ್ಪುವುದಿಲ್ಲ ಎಂದು ಪ್ರತಿಪಾದಿಸಿದ ಯೆಚೂರಿ, ಒಂದು ರಾಷ್ಟ್ರ, ಒಂದು ಚುನಾವಣೆ ನಮ್ಮ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಮತ್ತು ಸಂಯುಕ್ತ ವ್ಯವಸ್ಥೆಗೆ ವಿರೋಧಿಯಾಗಿದೆ. ಸದನದಲ್ಲಿ ಸರ್ಕಾರವು ತನ್ನ ಬಹುಮತವನ್ನು ಕಳೆದುಕೊಂಡಾಗ, ಅದರ ಮುಂದುವರಿಕೆ ಪ್ರಜಾಪ್ರಭುತ್ವದಲ್ಲಿ ಅವಕಾಶವಿಲ್ಲ. ರಾಜ್ಯ ಶಾಸಕಾಂಗದ ಅವಧಿಯನ್ನು ಮೊಟಕುಗೊಳಿಸುವುದು ಅಥವಾ ದೀರ್ಘಗೊಳಿಸುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾರೆ.

ಕೆಕೆ ಶ್ರೀವಾಸ್ತವ ಮತ್ತು ಹರಿಶ್ಚಂದ್ರ ಸಿಂಗ್ ಯಾದವ್ ಅವರ ಸಮಾಜವಾದಿ ಪಕ್ಷದ ನಿಯೋಗ ಕೂಡ ಕೋವಿಂದ್ ನೇತೃತ್ವದ ಸಮಿತಿಯನ್ನು ಭೇಟಿ ಮಾಡಿ ಈ ವಿಷಯದ ಬಗ್ಗೆ ಪಕ್ಷದ ನಿಲುವನ್ನು ತಿಳಿಸಿದೆ. ಉತ್ತರ ಪ್ರದೇಶದ ಪ್ರಮುಖ ವಿರೋಧ ಪಕ್ಷವಾಗಿರುವ ಎಸ್‌ಪಿ ಈಗಾಗಲೇ ಸಮಿತಿಗೆ ಲಿಖಿತವಾಗಿ ತನ್ನ ಅಭಿಪ್ರಾಯವನ್ನು ಸಲ್ಲಿಸಿದೆ, ಈ ಕಲ್ಪನೆಯನ್ನು ಸಂವಿಧಾನ ವಿರೋಧಿ ಮತ್ತು ರಾಜಪ್ರಭುತ್ವವನ್ನು ಸ್ಥಾಪಿಸುವ ದುರುದ್ದೇಶಪೂರಿತ ಪ್ರಯತ್ನ ಎಂದು ಕರೆದಿದೆ.

ಈ ಮಧ್ಯೆ  FICCIಯ ನಿಯೋಗವು ಸಮಿತಿಯನ್ನು ಭೇಟಿ ಮಾಡಿದೆ ಮತ್ತು ಏಕಕಾಲಕ್ಕೆ ಮತದಾನದ ಕುರಿತ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಏಕಕಾಲಕ್ಕೆ ಚುನಾವಣೆಯಿಂದ ಖರ್ಚಿನ ಉಳಿತಾಯವಾಗಲಿದೆ, ಆರ್ಥಿಕ ಬೆಳವಣಿಗೆ ಈ ಹಣವನ್ನು ಬಳಸಿಕೊಳ್ಳಬಹುದು ಎಂದು ಹೇಳಿದೆ.

‘ಒಂದು ರಾಷ್ಟ್ರ ಒಂದು ಚುನಾವಣೆ‘: ಸಮಿತಿ ರಚಿಸಿದ್ದ ಕೇಂದ್ರ

ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಸಂವಿಧಾನದ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಕುರಿತು ಪರಿಶೀಲಿಸಿ ಶಿಫಾರಸ್ಸುಗಳನ್ನು ಮಾಡಲು ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿತ್ತು.

ಸಂವಿಧಾನ, ಜನಪ್ರತಿನಿಧಿ ಕಾಯಿದೆ-1950 ಮತ್ತು ಅದರ ಅಡಿಯಲ್ಲಿ ರಚಿಸಲಾದ ನಿಯಮಗಳು ಮತ್ತು ಇತರ ಕಾನೂನುಗಳಿಗೆ ನಿರ್ದಿಷ್ಟ ತಿದ್ದುಪಡಿಗಳನ್ನು ಪರಿಶೀಲಿಸಲು ಮತ್ತು ತಿದ್ದುಪಡಿ ಕುರಿತ ಶಿಫಾರಸ್ಸಿಗೆ ಸಮಿತಿ ರಚಿಸಲಾಗಿದೆ.

ಸೆ.1ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು  ಮಾಜಿ ರಾಷ್ಟ್ರಪತಿ ಕೋವಿಂದ್ ಅವರ ಜೊತೆ ನಡೆಸಿದ ಸಭೆಯ ಬಳಿಕ ಏಕಕಾಲದಲ್ಲಿ ಸಂಸತ್ತಿಗೆ ಮತ್ತು ವಿಧಾನಸಭೆ ಚುನಾವಣೆಗಳನ್ನು ನಡೆಸುವ ಬಗ್ಗೆ ಪರಿಶೀಲಿಸಲು ಕೋವಿಂದ್ ಅವರ ನೇತೃತ್ವದ ಸಮಿತಿ ರಚಿಸಿದ್ದರು.

ಸರ್ಕಾರದ ಸೆ.1ರ ಅಧಿಸೂಚನೆಯಲ್ಲಿ ಕೋವಿಂದ್ ಅವರನ್ನು ಹೊರತುಪಡಿಸಿ, ಸಮಿತಿಯಲ್ಲಿ ಅಮಿತ್‌ ಶಾ, ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್.ಕೆ. ಸಿಂಗ್, ಹಿರಿಯ ವಕೀಲ ಹರೀಶ್ ಸಾಳ್ವೆ, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಇತರ ಸದಸ್ಯರಾಗಿದ್ದರು. ಅಧೀರ್ ರಂಜನ್ ಚೌದರಿ ಸಮಿತಿಯ ಭಾಗವಾಗಲು ನಿರಾಕರಿಸಿದ್ದರು.

ಇದನ್ನು ಓದಿ: ಎಸ್ಸಿ-ಎಸ್ಟಿ ಉಪ ವರ್ಗೀಕರಣ: ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...