Homeಕರ್ನಾಟಕಸಿಂದಗಿ, ಹಾನಗಲ್ ಉಪಚುನಾವಣೆ: ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್

ಸಿಂದಗಿ, ಹಾನಗಲ್ ಉಪಚುನಾವಣೆ: ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್

- Advertisement -
- Advertisement -

ರಾಜ್ಯದಲ್ಲಿ ಅಕ್ಟೋಬರ್ 30 ರಂದು ನಡೆಯಲಿರುವ ಉಪಚುನಾವಣೆಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ಸಿಂದಗಿ ಕ್ಷೇತ್ರಕ್ಕೆ ಜೆಡಿಎಸ್‌‌ನ ದಿವಂಗತ ಶಾಸಕ ಎಂ.ಸಿ. ಮನಗೂಳಿ ಅವರ ಪುತ್ರ ಅಶೋಕ್ ಮನಗೋಳಿ ಅವರನ್ನು ಹೆಸರಿಸಿದ್ದರೆ, ಹಾನಗಲ್ ಕ್ಷೇತ್ರಕ್ಕೆ ಮಾಜಿ ಎಂಎಲ್‌ಸಿ ಶ್ರೀನಿವಾಸ್ ವಿ ಮಾನೆ ಅವರನ್ನು ಹೆಸರಿಸಿದೆ.

ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಉಪಚುನಾವಣೆ ನಡೆಯಲಿದ್ದು, ನವೆಂಬರ್ 2 ರಂದು ಮತ ಎಣಿಕೆ ನಡೆಯಲಿದೆ. ಸಿಂದಗಿಯಲ್ಲಿ ಜೆಡಿ(ಎಸ್) ಶಾಸಕರಾದ ಎಂ.ಸಿ. ಮನಗೂಳಿ ಮತ್ತು ಹಾನಗಲ್‌ನಲ್ಲಿ ಬಿಜೆಪಿಯ ಸಿ.ಎಂ. ಉದಾಸಿ ಅವರ ಮರಣದಿಂದಾಗಿ ಉಪಚುನಾವಣೆಗಳು ನಡೆಯುತ್ತಿವೆ.

ಇದನ್ನೂ ಓದಿ: ಉಪಚುನಾವಣಾ ಉಸ್ತುವಾರಿ ಪಟ್ಟಿ: ಪಕ್ಷದ ಉಪಾಧ್ಯಕ್ಷ ವಿಜಯೇಂದ್ರ ಹೆಸರು ಕೈಬಿಟ್ಟಿದ್ದ ಬಿಜೆಪಿ

ಜೆಡಿ(ಎಸ್) ಈಗಾಗಲೇ ನಾಜಿಯಾ ಶಕೀಲಾ ಅಂಗಡಿ ಅವರನ್ನು ಸಿಂದಗಿ ಮತ್ತು ನಿಯಾಜ್ ಶೇಖ್ ಅವರನ್ನು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನಾಗಿ ಹೆಸರಿಸಿದೆ.

ಕೆ.ಆರ್. ಪೇಟೆ ಮತ್ತು ಸಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ವಿಜಯೇಂದ್ರ ಅವರೇ ಹಾನಗಲ್ ಅಭ್ಯರ್ಥಿ ಎಂದು ಊಹಿಸಲಾಗಿತ್ತು. ಆದರೆ ಬಿಜೆಪಿ ಇನ್ನೂ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ.

ಹಾನಗಲ್‌‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿ, ದಿವಂಗತ ಮಾಜಿ ಶಾಸಕ ಸಿ.ಎಂ. ಉದಾಸಿಯವರ ಸೊಸೆ, ಹಾವೇರಿ-ಗದಗ ಸಂಸದ ಶಿವಕುಮಾರ ಉದಾಸಿ ಅವರ ಪತ್ನಿ ರೇವತಿ ಉದಾಸಿ, ಕಲ್ಯಾಣ್ ಕುಮಾರ್ ಶೆಟ್ಟರ್ ಮತ್ತು ಶಿವರಾಜ್ ಸಜ್ಜನರ್‌ ಇದ್ದಾರೆ.

ಇನ್ನು, ಸಿಂದಗಿಯಲ್ಲಿ, 2018 ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ರಮೇಶ್ ಭೂಸನೂರ್, ಅಶೋಕ್ ಅಲ್ಲಾಪುರ, ಶಂಬುಲಿಂಗ ಕಕ್ಕಲಮೇಲಿ, ಸಿದ್ದು ಬಿರಾದಾರ್ ಮತ್ತು ಸಂಗನಗೌಡ ಪಾಟೀಲ್ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಇದನ್ನೂ ಓದಿ: ಹಾನಗಲ್, ಸಿಂದಗಿ ಉಪಚುನಾವಣೆಗೆ ದಿನಾಂಕ ಘೋಷಣೆ: ಕಸರತ್ತು ಆರಂಭಿಸಿದ ಪಕ್ಷಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...