Homeಕರ್ನಾಟಕಸಿಂಧನೂರು: ಒಕ್ಕೂಟ ಸರ್ಕಾರದ ವಿರುದ್ದ ‘ರೈತಪರ ಹೋರಾಟ ಸಮಿತಿ’ಯಿಂದ ಪ್ರತಿಭಟನೆ

ಸಿಂಧನೂರು: ಒಕ್ಕೂಟ ಸರ್ಕಾರದ ವಿರುದ್ದ ‘ರೈತಪರ ಹೋರಾಟ ಸಮಿತಿ’ಯಿಂದ ಪ್ರತಿಭಟನೆ

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಶನಿವಾರ ದೇಶದಾದ್ಯಂತ “ಕೃಷಿ ಉಳಿಸಿ, ಪ್ರಜಾಪ್ರಭುತ್ವ ರಕ್ಷಿಸಿ” ಆಂದೋಲನಕ್ಕೆ ಕರೆ ನೀಡಿತ್ತು. ಈ ಕರೆಯನ್ನು ಬೆಂಬಲಿಸಿ “ರೈತ ವಿರೋಧಿ ಕೃಷಿ ಕಾನೂನು ರದ್ದತಿ ಹೋರಾಟ ಸಮಿತಿ, ಸಿಂಧನೂರು” ವತಿಯಿಂದ ಸಿಂಧನೂರು ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಇಂದಿಗೆ 7 ತಿಂಗಳು ಪೂರೈಸಿದೆ. ದೆಹಲಿಯ ಗಡಿಯ ಸುತ್ತಲು ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ರೈತರ ಹೋರಾಟ ಎಂಟನೆ ತಿಂಗಳಿಗೆ ಕಾಲಿಡುತ್ತಿದ್ದರೂ ಒಕ್ಕೂಟ ಸರ್ಕಾರ ವಿವಾದಾತ್ಮಕ ಕಾಯ್ದೆಯ ಕುರಿತು ಯಾವುದೆ ಸಮರ್ಪಕವಾದ ನಿರ್ಧಾರವನ್ನು ಪ್ರಕಟಿಸಿಲ್ಲ. ಇದನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಇಂದು ದೇಶದಾದ್ಯಂತ “ಕೃಷಿ ಉಳಿಸಿ, ಪ್ರಜಾಪ್ರಭುತ್ವ ರಕ್ಷಿಸಿ” ಆಂದೋಲನಕ್ಕೆ ಕರೆ ನೀಡಿತ್ತು.

ಇದನ್ನೂ ಓದಿ: 8ನೇ ತಿಂಗಳಿಗೆ ಕಾಲಿಟ್ಟ ರೈತ ಹೋರಾಟ: ಪ್ರತಿಭಟನೆ ಕೈಬಿಡುವಂತೆ ಕೇಂದ್ರ ಕೃಷಿ ಮಂತ್ರಿ ಮನವಿ

ಕಿಸಾನ್ ಮೋರ್ಚಾದ ಕರೆಯನ್ನು ಬೆಂಬಲಿಸಿರುವ ಸಿಂಧನೂರು ಹೋರಾಟ ಸಮಿತಿಯು ಒಕ್ಕೂಟ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ನಡೆಸಿ ಸಿಂಧನೂರು ತಹಸೀಲಲ್ದಾರ್‌ ಮೂಲಕ, ಕೃಷಿ ಕಾನೂನಿನ ಕುರಿತು ರೈತರ ಆಕ್ರೋಶ ಮತ್ತು ಅಸಮಾಧಾನ ಬಗ್ಗೆ ಮನವಿ ನೀಡಲಾಯಿತು.

ಸಮಿತಿಯು ರಾಷ್ಟ್ರಪತ್ರಿಗೆ ಸಲ್ಲಿಸಿದ ಹಕ್ಕೊತ್ತಾಯಗಳು:

  • ಕೇಂದ್ರ ಸರಕಾರ ಜಾರಿಗೆ ತಂದಿರುವ, ರೈತರಿಗೆ ಮರಣಶಾಸನವಾಗಿರುವ ಮೂರು ಕೃಷಿ ಕಾನೂನುಗಳು ಹಾಗೂ ವಿದ್ಯುತ್ ತಿದ್ದುಪಡಿ ಮಸೂದೆ-2020 ವಾಪಸ್ ಪಡೆಯಬೇಕು.
  • ರೈತ ಹೋರಾಟಗಾರರ ಮೇಲೆ ಹಾಕಿರುವ ಕೇಸ್‌ಗಳನ್ನು ಹಿಂಪಡೆಯಬೇಕು.
  • ಜೋಳಕ್ಕೆ ಬೆಂಬಲ ಬೆಲೆ ಘೋಷಿಸಬೇಕು.
  • ಕಳೆದ ವರ್ಷ ಜಿಲ್ಲೆಯ ಖರೀದಿ ಕೇಂದ್ರಗಳಲ್ಲಿ ಜೋಳ ಮಾರಾಟ ಮಾಡಿರುವ ರೈತರ ಖಾತೆಗಳಿಗೆ ಶೀಘ್ರವಾಗಿ ಹಣ ಜಮಾ ಮಾಡಬೇಕು.

ಪ್ರತಿಭಟನೆಯಲ್ಲಿ ಹೋರಾಟಗಾರರಾದ ಎಸ್. ದೇವೇಂದ್ರ ಗೌಡ, ಡಿಎಸ್‌‌ಎಸ್‌‌ ರಮೇಶ್ ಪಾಟೀಲ್, ‘ಸಮುದಾಯ’ ಕಾರ್ಯದರ್ಶಿ ಡಿಎಚ್ ಕಂಬಳಿ, ಮನುಜಮತ ಬಳಗದ ಬಸವರಾಜ ಬಾದರ್ಲಿ, ಚಿಂತಕರಾದ ಚಂದ್ರಶೇಖರ ಗೊರೆಬಾಳ,‌ ರೈತ ಸಂಘಟನೆಯ ರಾಮಯ್ಯ ಜವಳಗೇರಾ, ಆರ್‌‌ವೈಎಫ್‌‌‌‌ನ ನಾಗರಾಜ್ ಪೂಜಾರ್‌, ಸಿಪಿಐ ಪಕ್ಷದ ಬಾಷುಮೀಯಾ, ಸಿಪಿಐಎಂನ ಶೇಖ್‌‌ಷಾ ಖಾದ್ರಿ, ಶಂಕರ್ ವಾಲೇಕಾರ್, ಹುಲಿಗೇಶ್ ಬಾದರ್ಲಿ, ಉಪನ್ಯಾಸಕರಾದ ನಾರಾಯಣ ಬೆಳಗರ್ಕಿ, ಚಾಂದ್ ಪಾಷ ಜಾಗಿರದಾರ್, ಚಿಟ್ಟಿಬಾಬು, ಚಾಂದ್ ಕೆಜೆಎಸ್‌‌ ಭಾಗವಹಿಸಿದ್ದರು.

ಇದನ್ನೂ ಓದಿ: ‘ಯುದ್ಧವಿಲ್ಲದೆ ವಿಜಯವಿಲ್ಲ!’ – 8 ನೇ ತಿಂಗಳಿಗೆ ಕಾಲಿಟ್ಟ ರೈತ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...