Homeಮುಖಪುಟಮಧ್ಯಪ್ರದೇಶಕ್ಕೆ ಭರ್ಜರಿ ಕೊಡುಗೆ ನೀಡಿದ ನಾಗರಿಕ ವಿಮಾನಯಾನ ಸಚಿವ ಸಿಂಧಿಯಾ

ಮಧ್ಯಪ್ರದೇಶಕ್ಕೆ ಭರ್ಜರಿ ಕೊಡುಗೆ ನೀಡಿದ ನಾಗರಿಕ ವಿಮಾನಯಾನ ಸಚಿವ ಸಿಂಧಿಯಾ

- Advertisement -
- Advertisement -

ಮಧ್ಯಪ್ರದೇಶದ ಮಾಜಿ ಕಾಂಗ್ರೆಸ್ ನಾಯಕ, ಪ್ರಸ್ತುತ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದಲ್ಲಿ ನಾಗರಿಕ ವಿಮಾನಯಾನ ಸಚಿವರಾಗಿರುವ ಜ್ಯೋತಿರಾಧಿತ್ಯ ಸಿಂಧಿಯಾ ಅವರು ತಮ್ಮ ರಾಜ್ಯಕ್ಕೆ ಭರ್ಜರಿ ಕೊಡುಗೆಯನ್ನೇ ನೀಡಿದ್ದಾರೆ. ಕಳೆದ 35 ದಿನಗಳಲ್ಲಿ 44 ಹೊಸ ವಿಮಾನಗಳನ್ನು ಮಧ್ಯಪ್ರದೇಶದಿಂದ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್‌ನೊಂದಿಗೆ ಮುನಿಸಿಕೊಂಡು ಬಿಜೆಪಿ ಸೇರಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಅವರು, “ಇಂದು ವಿಮಾನಗಳು ಮಧ್ಯಪ್ರದೇಶದ ಜಬಲ್ಪುರದಿಂದ ಮುಂಬೈ, ಪುಣೆ, ಸೂರತ್, ಹೈದರಾಬಾದ್ ಮತ್ತು ಕೋಲ್ಕತ್ತಾಗೆ ಹೊರಡುತ್ತಿವೆ. ಆಗಸ್ಟ್ 20 ರಿಂದ ಜಬಲ್ಪುರದಿಂದ ದೆಹಲಿ ಮತ್ತು ಇಂದೋರ್‌ಗೆ ವಿಮಾನಗಳು ಆರಂಭವಾಗಲಿವೆ” ಎಂದು ಅವರು ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ‘ಕೈ’ಗೆ ಮತ ನೀಡಿ ಎಂದು ಬಿಜೆಪಿ ರ್‍ಯಾಲಿಯಲ್ಲಿ ಸಿಂಧಿಯಾ ಮತ ಯಾಚನೆ!

ಸುಮಾರು 19 ವರ್ಷಗಳು ಕಾಂಗ್ರೆಸ್‌ನಲ್ಲಿದ್ದ ಸಿಂಧಿಯಾ ಕಳೆದ ವರ್ಷ ಮಾರ್ಚ್‌ನಲ್ಲಿ ಬಿಜೆಪಿ ಸೇರಿದ್ದರು. ಇದರ ನಂತರ ಬಿಜೆಪಿ ಅವರನ್ನು ರಾಜ್ಯಸಭಾ ಸದಸ್ಯರಾಗಿ ಆಯ್ಕೆ ಮಾಡಿತ್ತು. ಇದಾದ ನಂತರ, ಕಳೆದ ತಿಂಗಳಷ್ಟೇ ವಿಸ್ತರಣೆಯಾದ ಮೋದಿಯವರ ಮಂತ್ರಿ ಮಂಡಲದಲ್ಲಿ ನಾಗರಿಕ ವಿಮಾನಯಾನ ಖಾತೆಯನ್ನು ಅವರಿಗೆ ನೀಡಲಾಗಿದೆ.

ಇಂಧೋರ್‌ನಲ್ಲಿ ಮಾತನಾಡಿದ ಸಿಂಧಿಯಾ, “ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ನಾನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ, ನಾನು ಜನರ ಸೇವೆ ಮಾಡಲು ಸಧಾ ಸಿದ್ಧನಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಮೊದಲ ಅಲೆಯಲ್ಲಿ ಜ್ಯೋತಿರಾಧಿತ್ಯ, ಎರಡನೆ ಅಲೆಯಲ್ಲಿ ಜಿತಿನ್‍: ಕಾಂಗ್ರೆಸ್‌ ತೊರೆದ ರಾಹುಲ್‍ ಗಾಂಧಿ ಆಪ್ತರು!

2009 ಮತ್ತು 2012 ರ ನಡುವೆ ಯುಪಿಎ- II ಸರ್ಕಾರದಲ್ಲಿ ಸಿಂಧಿಯಾ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿ ಖಾತೆ ನಿರ್ವಹಿಸಿದ್ದರು. 2012 ಮತ್ತು 2014ರ ನಡುವೆ ಅವರು ವಿದ್ಯುತ್ ಸಚಿವಾಲಯದ ಉಸ್ತುವಾರಿ ವಹಿಸಿದ್ದರು.

2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ನಂತರ ಪ್ರತಿರೋಧ ವ್ಯಕ್ತಪಡಿಸಿದ್ದ ಸಿಂಧ್ಯಾ, ಮಾರ್ಚ್ 2020 ರಲ್ಲಿ ತಮ್ಮ 22 ಬೆಂಬಲಿಗರೊಂದಿಗೆ ಆಪರೇಷನ್‌ ಕಮಲ ಮೂಲಕ ಬಿಜೆಪಿ ಸೇರಿದರು. ಈ ವಲಸೆಯೊಂದಿಗೆ ಮಧ್ಯಪ್ರದೇಶದಲ್ಲಿ ಅಸ್ಥಿತ್ವದಲ್ಲಿದ್ದ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಉರುಳಿಸಿದ್ದರು.

ಇದನ್ನೂ ಓದಿ: ಜ್ಯೋತಿರಾಧಿತ್ಯ ಸಿಂಧಿಯಾರನ್ನು ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದು ಶ್ರೇಯವೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...