Homeಮುಖಪುಟಕೀಟನಾಶಕ ರಾಸಾಯನಿಕ ಬಳಕೆ ಆರೋಪ: 'ಎವರೆಸ್ಟ್ ಫಿಶ್ ಕರಿ ಮಸಾಲಾ'ವನ್ನು ನಿಷೇಧಿಸಿದ ಸಿಂಗಾಪುರ

ಕೀಟನಾಶಕ ರಾಸಾಯನಿಕ ಬಳಕೆ ಆರೋಪ: ‘ಎವರೆಸ್ಟ್ ಫಿಶ್ ಕರಿ ಮಸಾಲಾ’ವನ್ನು ನಿಷೇಧಿಸಿದ ಸಿಂಗಾಪುರ

- Advertisement -
- Advertisement -

ಭಾರತದಿಂದ ಆಮದು ಆಗುತ್ತಿದ್ದ ‘ಎವರೆಸ್ಟ್ ಫಿಶ್ ಕರಿ ಮಸಾಲಾ’ವನ್ನು ಸಿಂಗಾಪುರ ಹಿಂಪಡೆದಿದ್ದು, ಕೀಟನಾಶಕವಾಗಿ ಕೃಷಿಗಳಿಗೆ ಬಳಸುವ ಎಥಿಲೀನ್ ಆಕ್ಸೈಡ್ ಪ್ರಮಾಣ ‘ಎವರೆಸ್ಟ್ ಫಿಶ್ ಕರಿ ಮಸಾಲಾ’ದಲ್ಲಿ ನಿಗದಿತ ದರಕ್ಕಿಂತ ಹೆಚ್ಚಿದೆ ಎಂದು ಆರೋಪಿಸಿದೆ.

ಎಥಿಲೀನ್ ಆಕ್ಸೈಡ್ ಮಾನವ ಬಳಕೆಗೆ ಸೂಕ್ತವಲ್ಲ.  ಈ ರಾಸಾಯನಿಕವು ‘ಎವರೆಸ್ಟ್ ಫಿಶ್ ಕರಿ ಮಸಾಲಾ’ದಲ್ಲಿ ಹೆಚ್ಚಾಗಿ ಕಂಡು ಬಂದಿದೆ. ‘ಎವರೆಸ್ಟ್ ಫಿಶ್ ಕರಿ ಮಸಾಲಾ’ ಉತ್ಪನ್ನವನ್ನು ಭಾರತದಿಂದ ಆಮದು ಮಾಡಿಕೊಳ್ಳಲಾಗುತ್ತದೆ. ಹಾಂಗ್ ಕಾಂಗ್‌ನ ಆಹಾರ ಸುರಕ್ಷತಾ ಕೇಂದ್ರವು ಹೊರಡಿಸಿದ ಅಧಿಸೂಚನೆ ಬಳಿಕ ಸಿಂಗಾಪುರ ಈ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥಿಲೀನ್ ಆಕ್ಸೈಡ್ ಇರುವಿಕೆಯನ್ನು ಪತ್ತೆ ಹಚ್ಚಿದ ಬಳಿಕ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಸಿಂಗಾಪುರ್ ಫುಡ್ ಏಜೆನ್ಸಿ ಈ ಕುರಿತು ಹೇಳಿಕೆಯನ್ನು ಹೊರಡಿಸಿದ್ದು, ಅನುಮತಿಸಿದ ಮಿತಿಗಳನ್ನು ಮೀರಿದ ಮಟ್ಟದಲ್ಲಿ ಇಥಿಲೀನ್ ಆಕ್ಸೈಡ್ ಇರುವ ಕಾರಣದಿಂದ ಹಾಂಗ್ ಕಾಂಗ್‌ನ ಆಹಾರ ಸುರಕ್ಷತೆ ಕೇಂದ್ರವು ಭಾರತದಿಂದ ಎವರೆಸ್ಟ್ ಫಿಶ್ ಕರಿ ಮಸಾಲಾವನ್ನು ಹಿಂಪಡೆಯುವ ಕುರಿತು ಅಧಿಸೂಚನೆಯನ್ನು ಹೊರಡಿಸಿದೆ ಎಂದು ಹೇಳಿದೆ.

ಇದಲ್ಲದೆ ಸಿಂಗಾಪುರ್ ಫುಡ್ ಏಜೆನ್ಸಿ, ಆಮದುದಾರರಾದ ಎಸ್ಪಿ ಮುತ್ತಯ್ಯ ಮತ್ತು ಸನ್ಸ್ ಪಿಟಿಇ Ltd.ಗೆ  ‘ಎವರೆಸ್ಟ್ ಫಿಶ್ ಕರಿ ಮಸಾಲಾ’ವನ್ನು ಅಮದು ಮಾಡಿಕೊಳ್ಳದಂತೆ ನಿರ್ದೇಶಿಸಿದೆ. ಎಥಿಲೀನ್ ಆಕ್ಸೈಡ್‌ನ್ನು   ಸಾಮಾನ್ಯವಾಗಿ ಸೂಕ್ಷ್ಮಜೀವಿಗಳನ್ನು ತಡೆಗಟ್ಟಲು ಕೃಷಿ ಉತ್ಪನ್ನಗಳಲ್ಲಿ ಬಳಸಲಾಗುತ್ತದೆ.

ಸಿಂಗಾಪುರದ ನಿಯಮಗಳ ಪ್ರಕಾರ, ಮಸಾಲೆಗಳಲ್ಲಿ ರಾಸಾಯನಿಕವನ್ನು ಅಲ್ಪ ಪ್ರಮಾಣದಲ್ಲಿ ಮಾತ್ರ ಅನುಮತಿಸಲಾಗಿದೆ ಆದರೆ ಎವರೆಸ್ಟ್ ಫಿಶ್ ಕರಿ ಮಸಾಲಾದಲ್ಲಿನ ರಾಸಾಯನಿಕದ ಮಟ್ಟವು ಗ್ರಾಹಕರಿಗೆ ಸಂಭಾವ್ಯ ಆರೋಗ್ಯ ಅಪಾಯವನ್ನುಂಟುಮಾಡುತ್ತದೆ. ಈ ಉತ್ಪನ್ನವನ್ನು ಖರೀದಿಸಿದವರು ವೈದ್ಯರ ಸಲಹೆಯನ್ನು ಪಡೆಯಬೇಕು. ಗ್ರಾಹಕರು ಈ ಕುರಿತು ವಿಚಾರಣೆಗಾಗಿ ತಮ್ಮ ಖರೀದಿ ಕೇಂದ್ರವನ್ನು ಸಂಪರ್ಕಿಸಬೇಕು ಎಂದು ಸಿಂಗಾಪುರ ಫುಡ್ ಏಜೆನ್ಸಿ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಎಕ್ಸಿಟ್ ಪೋಲ್ ಪ್ರಸಾರ ಮಾಡದಂತೆ ನಿಷೇಧ ವಿಧಿಸಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...