Homeಕರ್ನಾಟಕಭೂ ಕಬಳಿಕೆ ಆರೋಪ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಾಯಕ ಲಕ್ಕಿ ಅಲಿ...

ಭೂ ಕಬಳಿಕೆ ಆರೋಪ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಾಯಕ ಲಕ್ಕಿ ಅಲಿ ದೂರು

- Advertisement -
- Advertisement -

‘ಲಕ್ಕಿ ಅಲಿ’ ಎಂದೇ ಪ್ರಸಿದ್ದಿ ಪಡೆದಿರುವ ಖ್ಯಾತ ಗಾಯಕ ಮಕ್ಸೂದ್ ಮಹಮೂದ್ ಅಲಿ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಪತಿ ಸುಧೀರ್ ರೆಡ್ಡಿ, ಸಹಾಯಕ ಪೊಲೀಸ್ ಕಮಿಷನರ್ ಮಂಜುನಾಥ್ ಯಲಹಂಕ ಮತ್ತಿತರರ ವಿರುದ್ಧ ಭೂಕಬಳಿಕೆ ಆರೋಪದ ಮೇಲೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಅಲಿ ಅವರು ಗುರುವಾರ ತಮ್ಮ ಎಕ್ಸ್ ಖಾತೆಯಲ್ಲಿ ದೂರಿನ ಪ್ರತಿಯನ್ನು ಹಂಚಿಕೊಂಡಿದ್ದಾರೆ.

“ಐಎಎಸ್ ಅಧಿಕಾರಿ, ಅವರ ಪತಿ ಮತ್ತು ಸೋದರ ಮಾವ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಸಾಕಷ್ಟು ಹಣ ವಿನಿಮಯದ ಮೂಲಕ ಭೂ ಕಬಳಿಕೆ ಮಾಡಿದ್ದಾರೆ” ಎಂದು ಅಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ದೂರಿನಲ್ಲಿ ಸಿಂಧೂರಿ ಅವರ ಸೋದರ ಮಾವ ಮಧುಸೂಧನ್ ರೆಡ್ಡಿ ಮತ್ತು ಯಲಹಂಕ ತಾಲೂಕು ಸರ್ವೆ ಅಧಿಕಾರಿ ಮನೋಹರ್ ಅವರ ಹೆಸರೂ ಇದೆ. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯ ಹೆಸರು ಹೇಳಲಿಚ್ಛಿಸದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವಿವಾದ 2022ರಲ್ಲಿ ಮೊದಲು ಪ್ರಾರಂಭಗೊಂಡಿತ್ತು. ಡಿಸೆಂಬರ್ 4,2022 ರಂದು ಲಕ್ಕಿ ಅಲಿ ಎಕ್ಸ್‌ನಲ್ಲಿ ವಿವಾದದ ಕುರಿತು ಪೋಸ್ಟ್ ಮಾಡಿದ್ದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಟ್ಯಾಗ್ ಮಾಡಿದ್ದರು.

“ಕೆಂಚೇನಹಳ್ಳಿ ಯಲಹಂಕದಲ್ಲಿರುವ ಟ್ರಸ್ಟ್ ಆಸ್ತಿಯಾಗಿರುವ ನನ್ನ ಜಮೀನನ್ನು ಬೆಂಗಳೂರು ಭೂ ಮಾಫಿಯಾದ ಸುಧೀರ್ ರೆಡ್ಡಿ, ಅವರ ಪತ್ನಿ ರೋಹಿಣಿ ಸಿಂಧೂರಿ ಎಂಬ ಐಎಎಸ್ ಅಧಿಕಾರಿಯ ಸಹಾಯದಿಂದ ಅತಿಕ್ರಮಿಸುತ್ತಿದ್ದಾರೆ. ಅವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ರಾಜ್ಯದ ಸಂಪನ್ಮೂಲಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಬಲವಂತವಾಗಿ ಮತ್ತು ಕಾನೂನುಬಾಹಿರವಾಗಿ ನನ್ನ ಜಮೀನಿನೊಳಗೆ ಬರುತ್ತಿದ್ದಾರೆ. ಸಂಬಂಧಿತ ದಾಖಲೆಗಳನ್ನು ತೋರಿಸಲು ನಿರಾಕರಿಸುತ್ತಿದ್ದಾರೆ” ಎಂದು ಅಲಿ ಬರೆದುಕೊಂಡಿದ್ದರು.

“ಇದು ಸಂಪೂರ್ಣವಾಗಿ ಕಾನೂನುಬಾಹಿರ ಎಂದು ನನ್ನ ಕಾನೂನು ಸಲಹೆಗಾರರು ತಿಳಿಸಿದ್ದಾರೆ. ನಮ್ಮ ಜಮೀನಿಗೆ ಪ್ರವೇಶಿಸಲು ಅವರು ನ್ಯಾಯಾಲಯದ ಅನುಮತಿ ಹೊಂದಿಲ್ಲ. ಕಳೆದ 50 ವರ್ಷಗಳಿಂದ ಜಮೀನು ನಮ್ಮ ಸ್ವಾಧೀನದಲ್ಲಿದೆ, ನಾವು ಅಲ್ಲಿ ವಾಸಿಸುತ್ತಿದ್ದೇವೆ. ಈ ಕುರಿತು ಎಸಿಪಿಗೆ ದೂರು ನೀಡಿದ್ದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ” ಎಂದಿದ್ದರು.

“ನಮಗೆ ಸ್ಥಳೀಯ ಪೊಲೀಸರಿಂದ ಯಾವುದೇ ಸಹಾಯ ಸಿಗುತ್ತಿಲ್ಲ. ಅವರು ಅತಿಕ್ರಮಣ ಮಾಡಿದವರನ್ನು ಬೆಂಬಲಿಸುತ್ತಿದ್ದಾರೆ. ನಮ್ಮ ಪರಿಸ್ಥಿತಿ ಮತ್ತು ನಮ್ಮ ಭೂಮಿಯ ಕಾನೂನು ಸ್ಥಿತಿಯ ಬಗ್ಗೆ ಅಸಡ್ಡೆ ಹೊಂದಿದ್ದಾರೆ. ಆತ್ಮೀಯ ಸರ್, ಡಿಸೆಂಬರ್ 7 ರಂದು ನ್ಯಾಯಾಲಯದ ಅಂತಿಮ ವಿಚಾರಣೆಗೂ ಮುನ್ನ ಸುಳ್ಳು ಆಸ್ತಿಯನ್ನು ಸಾಬೀತುಪಡಿಸಲು ಪ್ರಯತ್ನಿಸುತ್ತಿರುವ ಅವರ ಈ ಕಾನೂನುಬಾಹಿರ ಚಟುವಟಿಕೆಯನ್ನು ನಿಲ್ಲಿಸಲು ನಾನು ನಿಮ್ಮ ಸಹಾಯವನ್ನು ಕೋರುತ್ತೇನೆ” ಎಂದು ಹೇಳಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, “ಈ ಪ್ರಕರಣದಲ್ಲಿ ನನ್ನದೇನು ಪಾತ್ರವಿಲ್ಲ. ದುರುದ್ದೇಶದಿಂದ ನನ್ನನ್ನು ಇದಕ್ಕೆ ಎಳೆದು ತರಲಾಗಿದೆ. ನನಗೆ ತಿಳಿದಿರುವ ಹಾಗೆ OSNO5592/2016ರಲ್ಲಿ ಲಕ್ಕಿ ಅಲಿ ವಿರುದ್ಧ ತಾತ್ಕಾಲಿಕ ತಡೆಯಾಜ್ಞೆ ಇದೆ ಎಂದು ಗೊತ್ತಾಗಿದೆ” ಎಂದಿದ್ದರು.

“ಅಲಿ ಅವರ ಪ್ರತಿಭೆಯನ್ನು ನಾನು ಗೌರವಿಸುತ್ತೇನೆ. ಈ ಪ್ರಕರಣ ನ್ಯಾಯಾಲಯದಲ್ಲಿರುವಾಗ ಈ ಚರ್ಚೆ ಅನಗತ್ಯ ಎಂದು ತೋರುತ್ತದೆ. ನನಗೆ ಅಪಖ್ಯಾತಿ ತರಲು ಮತ್ತು ಸಾರ್ವಜನಿಕ ಸಹಾನುಭೂತಿ ಗಳಿಸುವ ಉದ್ದೇಶದಿಂದ ಇದನ್ನು ಮಾಡಲಾಗಿದೆ. ನಾನು ಕಾನೂನು ಕ್ರಮದ ಮೊರೆ ಹೋಗಲು ಯೋಚಿಸುತ್ತಿದ್ದೇನೆ” ಎಂದು ಹೇಳಿದ್ದರು.

ಮೂಲತಃ ಬೆಂಗಳೂರಿನವರಾದ ಲಕ್ಕಿ ಅಲಿ ಅವರು ಭಾರತದ ಪ್ರಸಿದ್ಧ ಗಾಯಕರಲ್ಲಿ ಒಬ್ಬರು. ಹಿಂದಿ ಸಿನಿಮಾ ಸೇರಿದಂತೆ ಹಲವು ಭಾಷೆಯ ಸಿನಿಮಾಗಳಲ್ಲಿ ಅವರು ಹಾಡಿದ್ದಾರೆ. ಸಿನಿಮಾಕ್ಕಿಂತ ಹೆಚ್ಚಾಗಿ ಅವರು ತಮ್ಮದೇ ಸಂಗೀತ ಸಂಯೋಜನೆಯ ಪ್ರೈವೇಟ್ ಆಲ್ಬಂಗಳಿಂದ ಹೆಚ್ಚು ಜನಪ್ರಿಯರಾದವರು.

ಇದನ್ನೂ ಓದಿ : ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ: ಸಂತ್ರಸ್ತನ ವಿರುದ್ದವೇ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...