Homeಮುಖಪುಟಗಾಯಕ ಸಿಧು ಮೂಸೆವಾಲಾ ಹತ್ಯೆ: ಪುಣೆಯಲ್ಲಿ ಶೂಟರ್‌ ಸಂತೋಷ್ ಜಾಧವ್ ಬಂಧನ

ಗಾಯಕ ಸಿಧು ಮೂಸೆವಾಲಾ ಹತ್ಯೆ: ಪುಣೆಯಲ್ಲಿ ಶೂಟರ್‌ ಸಂತೋಷ್ ಜಾಧವ್ ಬಂಧನ

- Advertisement -
- Advertisement -

ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಶೂಟರ್ ಸಂತೋಷ್ ಜಾಧವ್ ಮತ್ತು ಪ್ರಕರಣದ ಶಂಕಿತ ಆರೋಪಿ ಜಾಧವ್ ಅವರ ಸಹಾಯಕ ನವನಾಥ್ ಸೂರ್ಯವಂಶಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಆರೋಪಿ ಸಂತೋಷ್ ಜಾಧವ್ ತನ್ನ ಗುರುತನ್ನು ಮರೆಮಾಚಲು ತಲೆ ಬೋಳಿಸಿಕೊಂಡಿದ್ದರು. ಆತನನ್ನು ಗುಜರಾತ್‌ನ ಕಚ್ ಜಿಲ್ಲೆಯ ಮಾಂಡವಿಯಿಂದ ಪುಣೆ ಪೊಲೀಸರು ಬಂಧಸಿ, ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಪುಣೆ ಗ್ರಾಮಾಂತರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಮಂಚಾರ್ ಪೊಲೀಸ್ ಠಾಣೆಯಲ್ಲಿ 2021 ರಲ್ಲಿ ದಾಖಲಾದ ಕೊಲೆ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯನಾಗಿರುವ ಸಂತೋಷ್ ಜಾಧವ್ ಮತ್ತು ಸಹಾಯಕ ಸೂರ್ಯವಂಶಿಯನ್ನು ಪೊಲೀಸರ ತಂಡ ಬಂಧಿಸಿದೆ ಎಂದು ಅಧಿಕಾರಿ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: ಯುಪಿ: ಪ್ರತಿಭಟನಾಕಾರರ ಮನೆ ಮೇಲೆ 2ನೇ ದಿನವೂ ಮುಂದುವರೆದ ಬುಲ್ಡೋಜರ್‌ ದಾಳಿ

ಬಂಧಿತ ಜಾದವ್‌ ಮತ್ತು ಸೂರ್ಯವಂಶಿ ಅವರನ್ನು ಭಾನುವಾರ ಮಧ್ಯರಾತ್ರಿ ಪುಣೆಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಮತ್ತು ಜೂನ್ 20 ರವರೆಗೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಕಳೆದ ವಾರ, ಮೂಸೆವಾಲಾ ಕೊಲೆ ಪ್ರಕರಣದಲ್ಲಿ ಸಂತೋಷ್ ಜಾಧವ್ (23) ಮತ್ತು ಪುಣೆ ನಿವಾಸಿ ಸಿದ್ಧೇಶ್ ಕಾಂಬ್ಳೆ ಅಲಿಯಾಸ್ ಸೌರವ್ ಅಲಿಯಾಸ್ ಮಹಾಕಾಲ್ ಹೆಸರುಗಳು ಕೇಳಿಬಂದಿದ್ದವು.

“ನಮ್ಮ ಪ್ರಾಥಮಿಕ ತನಿಖೆಯ ಪ್ರಕಾರ ಈ ಎಲ್ಲಾ ಶಂಕಿತ ಆರೋಪಿಗಳಾದ ಕಾಂಬ್ಳೆ, ಜಾಧವ್ ಮತ್ತು ಸೂರ್ಯವಂಶಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ಜೊತೆಗೆ ಸಂಪರ್ಕ ಹೊಂದಿದ್ದಾರೆ. ಮೂಸೆವಾಲಾ ಪ್ರಕರಣದಲ್ಲಿ ಅವರ ಪಾತ್ರವಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಕುಲವಂತ್ ಕುಮಾರ್ ಸಾರಂಗಲ್ ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ಮತ್ತು ಗಾಯಕ ಶುಭದೀಪ್ ಸಿಂಗ್ ಸಿಧು ಅಲಿಯಾಸ್ ಸಿಧು ಮೂಸೆವಾಲಾ ಅವರನ್ನು ಮೇ 29 ರಂದು ಮಾನ್ಸಾ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪಂಜಾಬ್ ಸರ್ಕಾರ ಅವರ ಭದ್ರತೆಯನ್ನು ಹಿಂತೆಗೆದುಕೊಂಡ ಒಂದು ದಿನದ ನಂತರ ಈ ಘಟನೆ ನಡೆದಿತ್ತು.


ಇದನ್ನೂ ಓದಿ: ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಮತ್ತೊಬ್ಬ ಶಂಕಿತ ಆರೋಪಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...