ವಿವಾದಿತ ಗಾಯಕ ಸೋನು ನಿಗಮ್ ಅವರು ಬೆಂಗಳೂರಿನ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿರುವ ಘಟನೆ ಗುರುವಾರ ನಡೆದಿದೆ. ಕನ್ನಡದಲ್ಲಿ ಹಾಡು ಹೇಳಿ ಎಂದು ಕೇಳಿದ್ದಕ್ಕೆ ಸೋನು ನಿಗಮ್ ʻʻಇದಕ್ಕೇನೇ, ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿ ನಡೆದಿದ್ದುʼʼ ಎಂದು ಹೇಳಿದ್ದಾರೆ. ಈ ಬಗ್ಗೆ ರಾಜ್ಯದಾದ್ಯಂತ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ಕನ್ನಡಿಗರನ್ನು ಭಯೋತ್ಪಾದಕರಿಗೆ
ಘಟನೆ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ. ನಾರಾಯಣ ಗೌಡ ಅವರು ಪ್ರತಿಕ್ರಿಯಿಸಿದ್ದು, ಕರ್ನಾಟಕ ಪೊಲೀಸರು ಈ ಕೂಡಲೇ ಇವನ ಮೇಲೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯಿಸಿರುವ ಅವರು, “ಕನ್ನಡದಲ್ಲಿ ಹಾಡು ಹೇಳಿ ಎಂದು ಕೇಳಿದ್ದಕ್ಕೆ ಗಾಯಕ ಸೋನು ನಿಗಮ್ ʻಇದಕ್ಕೇನೇ, ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿ ನಡೆದಿದ್ದುʼ ಎಂದು ಹೇಳಿದ್ದಾನೆ. ಕರ್ನಾಟಕ ಪೊಲೀಸರು ಈ ಕೂಡಲೇ ಇವನ ಮೇಲೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಬಂಧಿಸಬೇಕು. ಕನ್ನಡದಲ್ಲಿ ಹಾಡು ಹೇಳಿ ಎಂದು ಕೇಳಿದರೆ ಅದು ಹೇಗೆ ಭಯೋತ್ಪಾದಕ ದಾಳಿಗೆ ಕಾರಣವಾಗಲು ಸಾಧ್ಯ?” ಎಂದು ಅವರು ಕೇಳಿದ್ದಾರೆ.
ಕನ್ನಡದ ಅನ್ನ ತಿಂದು ಕೊಬ್ಬಿರುವ ಈತ ಅದು ಹೇಗೆ ಕರ್ನಾಟಕದಲ್ಲಿ ಇನ್ನು ಮೇಲೆ ಶೋಗಳನ್ನು ನಡೆಸುತ್ತಾನೆ ನೋಡೋಣ ಎಂದು ನಾರಾಯಣ ಗೌಡ ಅವರು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದ ಯಾವ ನಿರ್ಮಾಪಕರೂ ಈತನಿಂದ ಹಾಡು ಹಾಡಿಸಬಾರದು ಎಂದು ಒತ್ತಾಯಿಸಿರುವ ಅವರು, ಯಾವುದೇ ಸಂಸ್ಥೆಗಳು ಇವನ ಶೋ ನಡೆಸಲು ಮುಂದಾಗಬಾರದು. ಒಂದು ವೇಳೆ ಯಾರಾದರೂ ಈ ದುಸ್ಸಾಹಸ ಮಾಡಿದರೆ ಅವರೇ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
“ಸೋನು ನಿಗಮ್ ನೀಡಿರುವ ಹೇಳಿಕೆ ಕನ್ನಡಿಗರನ್ನು ಕೀಳಾಗಿ ಕಂಡಿರುವುದು ಮಾತ್ರವಲ್ಲ, ಕನ್ನಡಿಗರನ್ನು ದೇಶದ್ರೋಹಿಗಳೆಂದು ಬಿಂಬಿಸಿ ಅವರನ್ನು ಖಳನಾಯಕರನ್ನಾಗಿ ಮಾಡುವ ಹುನ್ನಾರ ಹೊಂದಿದೆ. ಹೀಗಾಗಿ ಅವನ ಮೇಲೆ ಈ ಕೂಡಲೇ ದೂರು ದಾಖಲಾಗಬೇಕು.” ಎಂದು ಆಗ್ರಹಿಸಿದ್ದಾರೆ.
ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟಕ್ಕೆ ಕೈ ಹಾಕಬೇಕಾಗುತ್ತದೆ ಎಂದು ಎಚ್ಚರಿಸುತ್ತೇನೆ ಎಂದು ಹೇಳಿರುವ ಅವರು, ಇಂಥ ಕೃತಘ್ನರನ್ನು ಕರ್ನಾಟಕದ ನೆಲದಲ್ಲಿ ಅನ್ನ ಹಾಕಿ ಸಾಕುವುದನ್ನು ಇನ್ನು ಮುಂದಾದರೂ ನಾವು ಕೈಬಿಡಬೇಕು ಎಂದು ಹೇಳಿದ್ದಾರೆ. ಕನ್ನಡಿಗರನ್ನು ಭಯೋತ್ಪಾದಕರಿಗೆ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: Karnataka SSLC Result 2025 | ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ
Karnataka SSLC Result 2025 | ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ

