Homeಕರ್ನಾಟಕಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

ಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

- Advertisement -
- Advertisement -

“ರಾಜ್ಯದ ಯಾವ ಶಾಸಕರೂ ಏಕಪತ್ನಿ ವ್ರತಸ್ಥರಲ್ಲ” ಎಂಬ ಸಚಿವ ಸುಧಾಕರ್‌ ಹೇಳಿಕೆ ಬಿಜೆಪಿ ಶಾಸಕರಿಗೂ ಅನ್ವಯವಾಗುವ ಕಾರಣ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಎಲ್ಲರೂ ತಕ್ಷಣ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ಆ‌ಗ್ರಹಿಸಿದ್ದಾರೆ.

ಸಚಿವ ಸುಧಾಕರ ಅವರು ಬುಧವಾರ ಮಾತನಾಡುತ್ತಾ ಎಲ್ಲಾ ಶಾಸಕರು ಏಕಪತ್ನಿ ವ್ರತಸ್ಥರೇ ಎಂದು ಪ್ರಶ್ನಿಸಿದ್ದರು. ಇದು ಸದನದಲ್ಲಿ ಭಾರಿ ಗದ್ದಲವನ್ನು ಸೃಷ್ಟಿಸಿತ್ತು. ಈ ಬಗ್ಗೆ ಸಿದ್ದರಾಮಯ್ಯ ಗುರುವಾರ ಸರಣಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 224 ಶಾಸಕರು ಶ್ರೀರಾಮಚಂದ್ರರೇ?: ಹೇಳಿಕೆಗೆ ವಿಷಾಧ ವ್ಯಕ್ತಪಡಿಸಿದ ಸಚಿವ ಸುಧಾಕರ್!

“ಸಚಿವ ಸುಧಾಕರ್‌ ಹೇಳಿಕೆಯನ್ನು ಕರ್ನಾಟಕದ ಬಿಜೆಪಿ ಶಾಸಕರು ಶಾಸಕರು ವಿರೋಧಿಸುವುದಾಗಿದ್ದರೆ ನಮ್ಮ ಪಕ್ಷದ ಶಾಸಕರೆಲ್ಲರೂ ಸ್ವ ಇಚ್ಚೆಯಿಂದ ತನಿಖೆಗೆ ಒಳಪಡಲು ನಿರ್ಧರಿಸಿದಂತೆ ಅವರೂ ಕೂಡಾ ಮುಖ್ಯಮಂತ್ರಿಗೆ ತಕ್ಷಣ ಪತ್ರ ಬರೆದು ತಮ್ಮ ಬಗ್ಗೆ ಕೂಡಾ ತನಿಖೆ ನಡೆಯಬೇಕೆಂದು ಮನವಿ ಮಾಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

“ಸಚಿವ ಸುಧಾಕರ್‌ ಹೇಳಿಕೆಯನ್ನು ಬಿಜೆಪಿ ಶಾಸಕರು ಒಪ್ಪಿಕೊಳ್ಳುವುದಾದರೆ, ರಾಜ್ಯ ಸರ್ಕಾರ ತಕ್ಷಣ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 494 ಮತ್ತು 495ರ ಅನ್ವಯ ಕಾನೂನು ಕ್ರಮಕೈಗೊಳ್ಳಬೇಕು. 1955ರ ಹಿಂದೂ ವಿವಾಹ ಕಾಯ್ದೆಯಡಿ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧವಾಗಿದೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯದ 225 ಶಾಸಕರ ಮಾನಹಾನಿ:ಸಿದ್ದರಾಮಯ್ಯ

ಬುಧವಾರ ರಾತ್ರಿ ಕೂಡಾ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, “ಸಚಿವ ಡಾ.ಸುಧಾಕರ್ ನೀಡಿರುವ ಉದ್ದಟತನದ ಹೇಳಿಕೆಯಿಂದ ವಿಧಾನಸಭಾ ಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೂ ಸೇರಿದಂತೆ ರಾಜ್ಯದ 225 ಶಾಸಕರ ಮಾನಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಮೇಶ್ ಜಾರಕಿಹೊಳಿಯವರಿಗೆ ಸಂಬಂಧಿಸಿದ ಸಿಡಿ ಹಗರಣದ ಜೊತೆ ಈ ಆರೋಪದ ಬಗ್ಗೆಯೂ ಹೈಕೋರ್ಟ್ ಹಾಲಿ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡ ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗ ಪಡಿಸಬೇಕು” ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: ’ಗೋಮಾಂಸ ರಾಷ್ಟ್ರೀಯ ಆಹಾರ’ ಎಂದ ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್‌ಐಆರ್ ದಾಖಲು‌

“ಕಾನೂನಿನ ಹೋರಾಟದ ಮೂಲಕ ಈ ಪ್ರಕರಣವನ್ನು ಹೇಗೆ ಎದುರಿಸಬೇಕು ಎಂಬ ಬಗ್ಗೆ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸುತ್ತಿದ್ದೇವೆ. ಇಂತಹ ನಿಂದನಾತ್ಮಕ ಹೇಳಿಕೆ ನೀಡಿರುವ ಸಚಿವ ಡಾ.ಸುಧಾಕರ್ ವಿರುದ್ದ ಪ್ರತ್ಯೇಕವಾಗಿ ಮಾನನಷ್ಟ ಮೊಕದ್ದಮೆ ಹಾಕಬೇಕು ಎಂದು ಕೆಲವು ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳುತ್ತೇವೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯದೆ ನಾವು ಬಿಡುವುದಿಲ್ಲ. ಸುಧಾಕರ್ ಒಬ್ಬ ಸಾಮಾನ್ಯ ವ್ಯಕ್ತಿ ಅಲ್ಲ, ಅವರೊಬ್ಬ ಜನಪ್ರತಿನಿಧಿ ಮತ್ತು ಸಚಿವ. ಇಂತಹವರು ನಾಲಿಗೆ ಸಡಿಲು ಬಿಟ್ಟು ಬೇರೆ ಜನಪ್ರತಿನಿಧಿಗಳನ್ನು ನಿಂದಿಸಿರುವುದು ಸ್ಪಷ್ಟವಾಗಿ ಸದಸ್ಯರ ವಿಶೇಷ ರಕ್ಷಣೆಯ (Privilage) ಉಲ್ಲಂಘಣೆಯಾಗಿದೆ. ಸುಧಾಕರ್ ಸ್ಥಿತಿ ತಾ ಕಳ್ಳ ಇತರರನ್ನು ನಂಬ ಎಂಬಂತಾಗಿದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

“ಪುರುಷಪ್ರಧಾನ ಸಮಾಜದಲ್ಲಿ ಪುರುಷ ಶಾಸಕರು ಇಂತಹ ಆರೋಪಗಳನ್ನು ಸುಲಭವಾಗಿ ಜೀರ್ಣಿಸಿಕೊಳ್ಳಬಲ್ಲರು. ಆದರೆ ಮಹಿಳಾ ಶಾಸಕರಿಗೆ ಇಂತಹ ಸುಳ್ಳು ಆರೋಪಗಳು ಬಹಳ ಹಾನಿ ಉಂಟುಮಾಡುತ್ತದೆ. ಅವರು ಮನೆಯಲ್ಲಿ ಕುಟುಂಬದವರನ್ನು ಹೇಗೆ ಎದುರಿಸಬೇಕು? ಇಂತಹ ಕೀಳು ಮನಸ್ಸಿನ ಪುರುಷ ರಾಜಕಾರಣಿಗಳ ಕಾರಣದಿಂದಾಗಿಯೇ ರಾಜಕೀಯ ಪ್ರವೇಶಕ್ಕೆ ಮಹಿಳೆಯರು ಹಿಂದೇಟು ಹಾಕುತ್ತಿದ್ದಾರೆ” ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ’ಮಮತಾ ಬರ್ಮೋಡಾ ಧರಿಸಲಿ’ ಎಂಬ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿಕೆಗೆ ವ್ಯಾಪಕ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...