HomeಅಂಕಣಗಳುKarnataka against SIRSIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

- Advertisement -
- Advertisement -

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ನವದೀಪ್ ಸೂರಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಎಸ್‌ಐಆರ್ ಪ್ರಕ್ರಿಯೆಯ ತಮ್ಮ ಅನುಭವವನ್ನು ವಿವರವಾಗಿ ಹಂಚಿಕೊಂಡಿದ್ದಾರೆ. ಒಬ್ಬ ಮಾಜಿ ರಾಯಭಾರಿಗೇ ಈ ಪ್ರಕ್ರಿಯೆಯು ಕಷ್ಟಕರವೆನಿಸಿದರೆ, ಇನ್ನು ಸಾಮಾನ್ಯ ನಾಗರಿಕರ ಕಥೆಯೇನು ಎಂದು ಅವರು ಪ್ರಶ್ನಿಸಿದ್ದಾರೆ. 2003ರ ಮತದಾರರ ಪಟ್ಟಿಯಲ್ಲಿದ್ದ ತಮ್ಮ ವಿವರಗಳಲ್ಲಿ ವ್ಯತ್ಯಾಸಗಳು ಕಂಡುಬಂದ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗವು ತಮಗೆ ನೋಟಿಸ್ ಜಾರಿ ಮಾಡಿ ಅಗತ್ಯ ದಾಖಲೆಗಳನ್ನು ಒದಗಿಸುವಂತೆ ಕೇಳಿತ್ತು ಎಂದು ಅವರು ಬರೆದುಕೊಂಡಿದ್ದಾರೆ.

“ನನ್ನ ಹತ್ತಿರ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಹೊರತುಪಡಿಸಿ ಇತರ ದಾಖಲೆಗಳಿವೆ. ಆದರೆ, ಈ ಪ್ರಶ್ನೆಯನ್ನು ಕೇಳದಿರಲು ಸಾಧ್ಯವಿಲ್ಲ: ಮೂರು ದೇಶಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ನಂತರವೂ ನನ್ನ ಪೌರತ್ವವನ್ನು ಸಾಬೀತುಪಡಿಸಲು ನನಗೆ ತೊಂದರೆಯಾಗುತ್ತಿದ್ದರೆ, ಇನ್ನು ಸಾಮಾನ್ಯ ನಾಗರಿಕನ ಗತಿಯೇನು? ಇದೇ ಇರಬೇಕು ‘ಸುಲಭ ಜೀವನ ಮಟ್ಟ’ ಎಂದರೆ” ಎಂದು ಸೂರಿ ಹೇಳಿದ್ದಾರೆ.

ತಮ್ಮ ಸ್ಥಳೀಯ ಚುನಾವಣಾಧಿಕಾರಿಗಳೊಂದಿಗಿನ ಸಂಭಾಷಣೆಯ ವಿವರಗಳನ್ನು ಮುಂದುವರಿಸುತ್ತಾ ಸೂರಿ, “ನಾನು ಬಿಎಲ್‌ಒ ಜೊತೆ ಮಾತನಾಡಿದೆ. ಅವರು ನನಗೆ ಬಂದು ನೋಟಿಸ್ ಪಡೆದುಕೊಳ್ಳಲು ಹೇಳಿದರು. ನಂತರ ನಾನು ಭಾರತೀಯ ನಾಗರಿಕನೆಂದು ತೋರಿಸುವ, ನಿರ್ದಿಷ್ಟಪಡಿಸದ ಕೆಲ ದಾಖಲೆಗಳೊಂದಿಗೆ ಮತ್ತೆ ಬರಬೇಕೆಂದು ತಿಳಿಸಿದರು. ನಾನು 2003ರಲ್ಲಿ ಭಾರತದಲ್ಲಿ ಇರಲಿಲ್ಲ ಎಂದು ಉತ್ತರಿಸಿದೆ, ಹಾಗಾಗಿ ಅವರು ಸಾಕ್ಷಿಯಾಗಿ ಪಾಸ್‌ಪೋರ್ಟ್ ನೀಡುವಂತೆ ಕೇಳಿದ್ದಾರೆ. 2026ರಲ್ಲಿ ಅಪ್‌ಲೋಡ್ ಮಾಡಿದ ದಾಖಲೆಗಳು 2003ರ ನನ್ನ ವಿವರಗಳಿಗೆ ತಾಳೆಯಾಗುತ್ತಿಲ್ಲ. ಇದು ಅತ್ಯಂತ ವಿಚಿತ್ರವಾಗಿದೆ, ಏಕೆಂದರೆ 2003ರಲ್ಲಿ ನಾನು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಲ್ಲಿದ್ದೆ ಮತ್ತು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಿರಲಿಲ್ಲ” ಎಂದು ತಿಳಿಸಿದ್ದಾರೆ.

ಸೂರಿ ಅವರು ಕೈರೋ, ಡಮಾಸ್ಕಸ್, ವಾಷಿಂಗ್ಟನ್, ದಾರ್ ಎ ಸಲಾಮ್ ಮತ್ತು ಲಂಡನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಜೋಹಾನ್ಸ್‌ಬರ್ಗ್‌ನಲ್ಲಿ ಭಾರತದ ಕಾನ್ಸುಲ್ ಜನರಲ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಆಸ್ಟ್ರೇಲಿಯಾಕ್ಕೆ ಭಾರತದ ಹೈಕಮಿಷನರ್ ಆಗಿ ಹಾಗೂ ಈಜಿಪ್ಟ್ ಮತ್ತು ಯುಎಇ ದೇಶಗಳಿಗೆ ಭಾರತದ ರಾಯಭಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರ ಈ ಅತ್ಯುತ್ತಮ ಸೇವೆಯನ್ನು ಗುರುತಿಸಿ, ಯುಎಇ ಅಧ್ಯಕ್ಷರು ಆ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಆರ್ಡರ್ ಆಫ್ ಝಾಯೆದ್ II’ ಗೌರವವನ್ನು ನೀಡಿ ಗೌರವಿಸಿದ್ದಾರೆ.

ಪಂಜಾಬ್ ಮುಖ್ಯ ಚುನಾವಣಾಧಿಕಾರಿ (ಸಿಇಒ) ಅನಿಂಧಿತಾ ಮಿತ್ರಾ ಅವರನ್ನು ಸಂಪರ್ಕಿಸಿದಾಗ, ನವದೀಪ್ ಸೂರಿ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ಎಂದಿಗೂ ತೆಗೆದುಹಾಕಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರ ಹೆಸರು ಆಗಸ್ಟ್ 13ರಂದು ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯ ಭಾಗವಾಗಿದೆ. ಅದನ್ನು ಎಂದಿಗೂ ತೆಗೆದುಹಾಕಿಲ್ಲ. ಅವರ ಮತವು ಅಮೃತಸರದಲ್ಲಿ ನೋಂದಣಿಯಾಗಿತ್ತು ಮತ್ತು ಅಲ್ಲೇ ಮುಂದುವರಿದಿದೆ. 2003ರ ಎಸ್‌ಐಆರ್ ಪಟ್ಟಿಯಲ್ಲಿ ಅವರ ವಿವರಗಳು ಹೊಂದಾಣಿಕೆಯಾಗದ ಹಿನ್ನೆಲೆಯಲ್ಲಿ ಅವರಿಗೆ ನೋಟಿಸ್ ನೀಡಲಾಗಿತ್ತು ಮತ್ತು ದಾಖಲೆಗಳನ್ನು ಸಲ್ಲಿಸಲು ಕೋರಲಾಗಿತ್ತು. ದಾಖಲೆಗಳನ್ನು ಪಡೆದ ನಂತರ, ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಪ್ರಕಟಿಸಲಾಗಿದೆ” ಎಂದು ಮಿತ್ರಾ ತಿಳಿಸಿದ್ದಾರೆ ಎಂಬುವುದಾಗಿ indianexpress.com ವರದಿ ಮಾಡಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...