HomeಅಂಕಣಗಳುKarnataka against SIRSIR ವಿವಾದ ಮತ್ತು ಆಂತರಿಕ ಬಿಕ್ಕಟ್ಟು: ಮೀರತ್, ವಾರಾಣಸಿ ಪ್ರವಾಸ ದಿಢೀರ್ ರದ್ದುಗೊಳಿಸಿದ ಗ್ಯಾನೇಶ್‌ ಕುಮಾರ್!...

SIR ವಿವಾದ ಮತ್ತು ಆಂತರಿಕ ಬಿಕ್ಕಟ್ಟು: ಮೀರತ್, ವಾರಾಣಸಿ ಪ್ರವಾಸ ದಿಢೀರ್ ರದ್ದುಗೊಳಿಸಿದ ಗ್ಯಾನೇಶ್‌ ಕುಮಾರ್! Gen-Z ಆಕ್ರೋಶಕ್ಕೆ ಬೆದರಿತೇ ಆಯೋಗ?

- Advertisement -
- Advertisement -

ದೇಶಾದ್ಯಂತ ವ್ಯಾಪಕ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿರುವ ‘ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ’ (SIR) ವಿವಾದ, ಸ್ಥಗಿತಗೊಂಡಿರುವ ವಾರ್ಷಿಕ ಮತದಾರರ ಪಟ್ಟಿ ಪರಿಷ್ಕರಣೆ (SSR) ಹಾಗೂ ಚುನಾವಣಾ ಆಯೋಗದ ಉನ್ನತ ಹಂತದ ಶೀತಲ ಸಮರ ತೀವ್ರಗೊಳ್ಳುತ್ತಿದ್ದಂತೆಯೇ, ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು ತಮ್ಮ ಉತ್ತರ ಪ್ರದೇಶ ಪ್ರವಾಸವನ್ನು ಕೊನೆಯ ಘಳಿಗೆಯಲ್ಲಿ ದಿಢೀರನೇ ರದ್ದುಗೊಳಿಸಿದ್ದಾರೆ. ಸೆಪ್ಟೆಂಬರ್ 25 ರಂದು ಮೀರತ್‌ನಲ್ಲಿ ಮತ್ತು ಸೆಪ್ಟೆಂಬರ್ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಾಣಸಿಯಲ್ಲಿ ‘Gen-Z’ ಯುವ ಮತದಾರರೊಂದಿಗೆ ಸಂವಾದ ನಡೆಸಲು ಉದ್ದೇಶಿಸಿದ್ದ ಈ ಕಾರ್ಯಕ್ರಮಗಳ ರದ್ದು, ದೇಶದ ರಾಜಕೀಯ ಅಂಗಳದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಹೊಸ ತಲೆಮಾರಿನ ಮತದಾನದ ಹಕ್ಕುಗಳ ಕುರಿತು ಯುವಜನರನ್ನು ತಲುಪುವ ಉದ್ದೇಶದಿಂದ ಈ ಸಂವಾದ ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು. ಆದರೆ, ಆಯೋಗದ ಇತ್ತೀಚಿನ ನಡೆಯಿಂದ ಆಕ್ರೋಶಗೊಂಡಿದ್ದ ಯುವಜನತೆ ಮತ್ತು ವಿದ್ಯಾರ್ಥಿ ಸಂಘಟನೆಗಳು ಸಿಇಸಿಗೆ ಕಪ್ಪು ಬಾವುಟ ಪ್ರದರ್ಶಿಸಿ, SIR ಹಾಗೂ ಮತದಾರರ ಪಟ್ಟಿ ಗೊಂದಲಗಳ ಕುರಿತು ನೇರ ಪ್ರಶ್ನೆ ಕೇಳಲು ಸಜ್ಜಾಗಿದ್ದವು ಎಂದು ವರದಿಯಾಗದೆ. ಪ್ರತಿಭಟನೆಯ ಈ ಬಿಸಿಯನ್ನು ಗ್ರಹಿಸಿ ಪ್ರವಾಸ ರದ್ದುಗೊಳಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆಯಾದರೂ, ಸ್ಥಳದ ಲಭ್ಯತೆ ಕೊರತೆ ಹಾಗೂ ಸಂಘಟನಾತ್ಮಕ ಕಾರಣಗಳಿಂದಾಗಿ ಪ್ರವಾಸವನ್ನು ಮುಂದೂಡಲಾಗಿದೆ ಎಂದು ಚುನಾವಣಾ ಆಯೋಗವು ಅಧಿಕೃತವಾಗಿ ಸಮರ್ಥಿಸಿಕೊಂಡಿದೆ. ಆದರೆ, ಸಾಂವಿಧಾನಿಕ ಸಂಸ್ಥೆಯೊಂದು ಪ್ರಮುಖ ಸಾರ್ವಜನಿಕ ಕಾರ್ಯಕ್ರಮಕ್ಕೆ ಸ್ಥಳ ಸಿಗಲಿಲ್ಲ ಎಂದು ಸಮಜಾಯಿಷಿ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಹಾಸ್ಯಾಸ್ಪದವಾಗಿ ಮಾರ್ಪಟ್ಟಿದೆ.

ಮತ್ತೊಂದೆಡೆ, ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಹಾಗೂ ‘ದಿ ಎಕನಾಮಿಕ್ ಟೈಮ್ಸ್’ ಪ್ರಕಟಿಸಿರುವ ತನಿಖಾ ವರದಿಗಳ ಪ್ರಕಾರ, ಸಿಇಸಿ ಗ್ಯಾನೇಶ್ ಕುಮಾರ್ ಅವರ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕನಿಷ್ಠ 14 ಬಾರಿ ಅಧಿಕೃತ ಲಿಖಿತ ಆಕ್ಷೇಪಣೆಗಳನ್ನು ದಾಖಲಿಸಿದ್ದಾರೆ. ನೂತನವಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗುವ ಯುವಕರು ನಮೂನೆ-6ರಲ್ಲಿ ತಮ್ಮ ಪೋಷಕರ ಅಥವಾ ಅಜ್ಜ-ಅಜ್ಜಿಯಂದಿರ ಹಳೆಯ ಮತದಾರರ ದಾಖಲೆ ನೀಡಬೇಕು ಎಂಬ ಷರತ್ತಿಗೆ ಆಯುಕ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, 1958 ರಿಂದ ನಿಯಮಿತವಾಗಿ ನಡೆಯುತ್ತಿದ್ದ ವಾರ್ಷಿಕ ಮತದಾರರ ಪಟ್ಟಿ ಪರಿಷ್ಕರಣೆ (SSR) ಸ್ಥಗಿತಗೊಂಡಿರುವುದರಿಂದ, 18 ವರ್ಷ ತುಂಬುತ್ತಿರುವ ಸಾವಿರಾರು Gen-Z ಯುವಕರು ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಸಾಧ್ಯವಾಗದೇ ಹಕ್ಕು ವಂಚಿತರಾಗುವ ಭೀತಿ ಎದುರಾಗಿದೆ.

ಚುನಾವಣಾ ಆಯೋಗದ ಈ ಆಂತರಿಕ ರಾದ್ಧಾಂತ ಹಾಗೂ ಸಿಇಸಿ ಪ್ರವಾಸ ರದ್ದತಿಯನ್ನು ಪ್ರತಿಪಕ್ಷಗಳು ಮತ್ತು ಯುವ ಸಂಘಟನೆಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿವೆ. ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಗ್ಯಾನೇಶ್ ಕುಮಾರ್ ಅವರನ್ನು ಆಯ್ಕೆ ಮಾಡಿದ್ದು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಎಂದು ವಾಗ್ದಾಳಿ ನಡೆಸಿದ್ದು, ಈಗ ಅವರ ಸಹದ್ಯೋಗಿ ಆಯುಕ್ತರೇ ವ್ಯವಸ್ಥೆಯ ಹಾನಿಗೆ ಅವರೇ ಕಾರಣ ಎನ್ನುತ್ತಿರುವುದರಿಂದ ಗ್ಯಾನೇಶ್ ಕುಮಾರ್ ಅವರು ‘ಅಪ್ರೂವರ್’ ಆಗುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಅಭಿಜಿತ್ ದೀಪ್ಕೆ ಅವರ ನೇತೃತ್ವದ ಹಾಗೂ ಸ್ಥಾಪನೆಯ ಯುವಜನರ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಘಟನೆಯು ಸಿಇಸಿ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ 48 ಗಂಟೆಗಳ ಅಂತಿಮ ಗಡುವು ನೀಡಿದ್ದು, ರಾಜೀನಾಮೆ ನೀಡದಿದ್ದರೆ ದೇಶವ್ಯಾಪಿ ಉಗ್ರ ಹೋರಾಟ ರೂಪಿಸುವುದಾಗಿ ಎಚ್ಚರಿಸಿದೆ. ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಆಯೋಗವನ್ನು “ಪ್ರಜಾಪ್ರಭುತ್ವದ ಕಸಾಯಿಖಾನೆ” ಎಂದು ಕರೆದಿದ್ದರೆ, ಸಮಾಜವಾದಿ ಪಾರ್ಟಿ ಅಧ್ಯಕ್ಷ ಅಖಿಲೇಶ್ ಯಾದವ್ ಯಾವುದೇ ಪ್ರಜಾಪ್ರಭುತ್ವದಲ್ಲೂ ಇಷ್ಟೊಂದು ಕಳಪೆ ಕೆಲಸ ನಡೆದಿರಲಿಕ್ಕಿಲ್ಲ ಎಂದು ಕಿಡಿಕಾರಿದ್ದಾರೆ.

ಆಯೋಗದ ಏಕಪಕ್ಷೀಯ ನಿರ್ಧಾರಗಳನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ ಸಲ್ಲಿಸಿರುವ ಅರ್ಜಿ ಹಾಗೂ ಆಯೋಗದ ಮಧ್ಯಂತರ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಪೀಠದಲ್ಲಿ ನಡೆಯುತ್ತಿರುವ ವಿಚಾರಣೆಯು ಸೆಪ್ಟೆಂಬರ್ 28 ಕ್ಕೆ ಮುಂದೂಡಲ್ಪಟ್ಟಿದೆ. ಆಯೋಗಕ್ಕೆ ನಿರ್ದಿಷ್ಟ ಸಮಯಾವಕಾಶದ ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ, ಸಿಇಸಿ ಗ್ಯಾನೇಶ್ ಕುಮಾರ್ ಅವರ ಪ್ರವಾಸ ರದ್ದು ಹಾಗೂ ಆಂತರಿಕ ಬಿಕ್ಕಟ್ಟು ಇನ್ನಷ್ಟು ರಾಜಕೀಯ ಕಾವು ಪಡೆದುಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝಿ ಮತದಾರರ ನೋಂದಣಿ ಸ್ಥಗಿತದ ಹಿಂದೆ ಮೋದಿ-ಸಿಇಸಿ ಸಂಚು: ಕಾಂಗ್ರೆಸ್ ಆರೋಪ

18 ವರ್ಷ ತುಂಬಿದ ಯುವಜನರನ್ನು (Gen Z) ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ 'ವಿಶೇಷ ಸಂಕ್ಷಿಪ್ತ ಪರಿಷ್ಕರಣೆ' (SSR) ಪ್ರಕ್ರಿಯೆಯು 2024 ರಿಂದ ತಡೆಹಿಡಿಯಲ್ಪಟ್ಟಿರುವುದು ಹಾಗೂ ಈ ವಿಷಯವಾಗಿ ಕೇಂದ್ರ ಚುನಾವಣಾ ಆಯೋಗದಲ್ಲಿ (ECI)...

ತುಮಕೂರಿನ ಎನ್.ಆರ್. ಕಾಲೋನಿ ಕೋತಿ ತೋಪಿನಲ್ಲಿ ಎಸ್ಐಆರ್ ಪರಿಶೋಧನೆ: ಸಂತ್ರಸ್ತರ ಅಹವಾಲು ಆಲಿಸಿದ ಪ್ರಕಾಶ್ ರಾಜ್: ಸೆ.26ಕ್ಕೆ ಬೆಂಗಳೂರಿನಲ್ಲಿ ಪ್ರತಿಭಟನೆ

ತುಮಕೂರು: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಎದುರಾಗಿರುವ ಸಮಸ್ಯೆಗಳನ್ನು ನೇರವಾಗಿ ಪರಿಶೀಲಿಸುವ ಉದ್ದೇಶದಿಂದ ನಟ ಹಾಗೂ ಹೋರಾಟಗಾರ ಪ್ರಕಾಶ್ ರಾಜ್ ಅವರು ತುಮಕೂರು ನಗರದ ಎನ್‌ಆರ್‌ ಕಾಲೊನಿ...

ವಿಜಯವಾಡ ಕಸ್ಟಡಿಯಲ್ಲಿ ಸಾಯಿ ಕೃಷ್ಣ ಸಾವು: ಶವ ದಹನ, ಸಾಕ್ಷ್ಯ ನಾಶ ಖಚಿತ ಪಡಿಸಿದ ಎಸ್ಐಟಿ; ಸುಪ್ರೀಂ ಕೋರ್ಟ್ ನೇರ ಮೇಲ್ವಿಚಾರಣೆ 

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದಲ್ಲಿ 25 ವರ್ಷದ ಗದೆ ಸಾಯಿ ಕೃಷ್ಣ ಅವರ ನಾಪತ್ತೆ ಹಾಗೂ ಶಂಕಿತ ಕಸ್ಟಡಿ ಸಾವಿನ ಪ್ರಕರಣ ಇದೀಗ ಸುಪ್ರೀಂ ಕೋರ್ಟ್‌ನ ನೇರ ಮೇಲ್ವಿಚಾರಣೆಗೆ ಒಳಪಟ್ಟಿದೆ. ಕೃಷ್ಣಲಂಕಾ ಪೊಲೀಸರು ವಶಕ್ಕೆ...

ಜ್ಞಾನೇಶ್ ಕುಮಾರ್‌ನನ್ನು ವಜಾಗೊಳಿಸಿ-SIR ರದ್ದುಗೊಳಿಸುವಂತೆ ಒತ್ತಾಯಿಸಿ ಸೆ.26 ಪ್ರತಿಭಟನೆಗೆ ಎಡ ಪಕ್ಷಗಳು ಹಾಗೂ SIR ವಿರೋಧಿ ಒಕ್ಕೂಟ ಕರೆ

ಕೇಂದ್ರ ಚುನಾವಣಾ ಆಯೋಗವು ಎಸಗಿರುವ ಅಕ್ರಮಗಳ ಪಾಪದ ಕೊಡ ತುಂಬಿದ್ದು, ಆಯೋಗದ ಆಂತರಿಕ ಭಿನ್ನಾಭಿಪ್ರಾಯಗಳು ಜಗಜ್ಜಾಹೀರಾಗಿವೆ ಎಂದು ‘SIR ವಿರೋಧಿ ಜನಪರ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟ’ ಆಕ್ರೋಶ ವ್ಯಕ್ತಪಡಿಸಿದೆ. ಮುಖ್ಯ...

SIR ಜಾರಿಯಿಂದ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಮೇಲೆ ಸಂಶಯ ಮೂಡಿದೆ: ಅಶೋಕ್ ಲವಾಸ ಕಳವಳ

ಚುನಾವಣಾ ಪ್ರಕ್ರಿಯೆಯ ಶುದ್ಧೀಕರಣದ ನೆಪದಲ್ಲಿ ನೈಜ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಅಥವಾ ಬೇಟೆಯಾಡುವ ಪ್ರವೃತ್ತಿಯನ್ನು ತಕ್ಷಣವೇ ಕೈಬಿಡಬೇಕು, SIR ಪ್ರಕ್ರಿಯೆಯಿಂದ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಮತ್ತು ವರ್ಚಸ್ಸಿಗೆ ಭಾರೀ ಧಕ್ಕೆಯಾಗುತ್ತಿದೆ ಎಂದಿರುವ ಮಾಜಿ...

“ಟರ್ನ್ ಅಪ್ರೂವರ್ ಆಗಿ”: ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯ; ಮತ ಕಳ್ಳತನ ಆರೋಪದಲ್ಲಿ ಮೋದಿ, ಶಾ ತನಿಖೆ ನಡೆಯಬೇಕಿದೆ: ರಾಹುಲ್ ಗಾಂಧಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಚುನಾವಣಾ ವ್ಯವಸ್ಥೆಯಲ್ಲಿ ನಡೆದಿರುವುದಾಗಿ ಆರೋಪಿಸಲಾಗುತ್ತಿರುವ ಅಕ್ರಮಗಳ ಕುರಿತು “ಅನುಮೋದಕರಾಗಿ” (ಅಪ್ರೂವರ್) ಬದಲಾಗಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ...

SIR : ಭಾಲ್ಕಿ, ಬೆಳಗಾವಿ ಉತ್ತರ-ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಸಾವಿರಾರು ಅರ್ಹ ಮತಗಳ ಡಿಲೀಟ್‌ಗೆ ಯತ್ನ; ಅನ್ಯರು ಫಾರಂ-7 ಸಲ್ಲಿಸಿರುವುದು ಬಯಲು!

ಭಾರತೀಯ ಚುನಾವಣಾ ಆಯೋಗದಲ್ಲಿ (ಇಸಿಐ) ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಸರ್ವಾಧಿಕಾರಿ ಧೋರಣೆ ಬಟಾಬಯಲಾಗಿ ದೇಶದಾದ್ಯಂತ ಭಾರೀ ಚರ್ಚೆಯಾಗುತ್ತಿರುವ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌)...

‘ದಿಮಾಗಿ ನಕ್ಸಲರು ಚುನಾವಣಾ ಆಯುಕ್ತರನ್ನು ಗುರಿಯಾಗಿಸಿಕೊಂಡಿದ್ದಾರೆ..’; ಗ್ಯಾನೇಶ್‌ ಕುಮಾರ್ ಬೆಂಬಲಕ್ಕೆ ನಿಂತ ಅಸ್ಸಾಂ ಸಿಎಂ

ಮುಖ್ಯ ಚುನಾವಣಾ ಆಯುಕ್ತರು ಇತರ ಚುನಾವಣಾ ಆಯುಕ್ತರನ್ನು ಸಂಪರ್ಕಿಸದೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಮುಖ್ಯ ಚುನಾವಣಾ ಆಯುಕ್ತರನ್ನು (ಸಿಇಸಿ) ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ದಾಳಿಯು ಇದು ರಾಜಕೀಯ ಪ್ರಚಾರ ಹಾಗೂ ವಿರೋಧ ಪಕ್ಷಗಳ...

ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: ಸಂಕಷ್ಟದಲ್ಲಿ ಲಕ್ಷಾಂತರ ‘Gen Z’ ಯುವಕರ ಮತದಾನದ ಹಕ್ಕು!

ಭಾರತೀಯ ಚುನಾವಣಾ ಆಯೋಗದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇತರ ಇಬ್ಬರು ಆಯುಕ್ತರ ನಡುವೆ ಉಂಟಾಗಿದೆ ಎನ್ನಲಾದ ಆಂತರಿಕ ಭಿನ್ನಾಭಿಪ್ರಾಯದಿಂದಾಗಿ, ದೇಶದ ನೂತನ ಯುವ ಮತದಾರರ ಸೇರ್ಪಡೆ ಪ್ರಕ್ರಿಯೆ ಮಂದಗತಿಯಲ್ಲಿದೆ ಎಂಬ ವರದಿ...

‘ಅನ್ಯಾಯಯುತ’ ಚುನಾವಣೆಗಳಿಗೆ ಅವಕಾಶ ನೀಡಿದ್ದಕ್ಕಾಗಿ ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು: ಪ್ರಿಯಾಂಕಾ ಗಾಂಧಿ

ವಯನಾಡ್: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಕೋಟ್ಯಂತರ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿದಿರುವ ವಿಚಾರದ ನಡುವೆಯೇ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ನ ವಾಗ್ದಾಳಿ ಮತ್ತಷ್ಟು ತೀವ್ರಗೊಂಡಿದೆ. ಮತದಾರರ...