HomeಅಂಕಣಗಳುKarnataka against SIRSIR ಅವಾಂತರ : ಆ.20ರಂದು ಮತ ಕಾವಲು ಸಮಿತಿಯಿಂದ 'ಸಾಂಸ್ಕೃತಿಕ ಪ್ರತಿರೋಧ'

SIR ಅವಾಂತರ : ಆ.20ರಂದು ಮತ ಕಾವಲು ಸಮಿತಿಯಿಂದ ‘ಸಾಂಸ್ಕೃತಿಕ ಪ್ರತಿರೋಧ’

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರಗಳ ವಿರುದ್ಧ ಗುರುವಾರ (ಆ.20) ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಾಂಸ್ಕೃತಿಕ ಪ್ರತಿರೋಧ’ ಹಮ್ಮಿಕೊಳ್ಳಲಾಗಿದೆ.

ನಾಗರಿಕ ಮತ ಕಾವಲು ಸಮಿತಿ ಆಯೋಜಿಸಿರುವ ಕಾರ್ಯಕ್ರಮವನ್ನು ನಟ ಕಿಶೋರ್ ಉದ್ಘಾಟಿಸಿ ಮಾತನಾಡಲಿದ್ದು, ನಾಡಿನ ಅನೇಕ ಸಾಂಸ್ಕೃತಿಕ ಗಣ್ಯರು ಜತೆಯಾಗಲಿದ್ದಾರೆ. ಸಂಜೆ 4.30ಕ್ಕೆ ಕಾರ್ಯಕ್ರಮ ಆರಂಭಗೊಳ್ಳಲಿದೆ.

ತಮಟೆ, ಜಂಬೆ, ನಗಾರಿ ತಂಡಗಳು, ಹಾಡುಗಾರರು, ಕಿರುತೆರೆಯ ಕಲಾವಿದರು, ಜನಪದ ಕಲಾವಿದರು, ನೃತ್ಯ ಕಲಾವಿದರು, ಚಿತ್ರ ಕಲಾವಿದರು, ಕವಿ, ಬರಹಗಾರರು, ಚಿಂತಕರು, ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಹಲವಾರು ಸಾಂಸ್ಕೃತಿಕ ತಂಡಗಳು ಈ ಪ್ರತಿರೋಧ ಕಾರ್ಯಕ್ರಮಕ್ಕೆ ಬೆಂಬಲ ಸೂಚಿಸಿವೆ.

ಭಾರತದ ಸಂವಿಧಾನವನ್ನು ಒಪ್ಪದವರು ಯಾವಾಗಲು ದೇಶ ಒಡೆಯುವ ಕುತಂತ್ರವನ್ನು ಹೆಣೆಯುತ್ತಾರೆ. ಅಂತಹ ಅನೇಕ ಪ್ರಯತ್ನಗಳನ್ನು, ಸಂವಿಧಾನ ವಿರೋಧಿ ನಡೆಗಳನ್ನು ಪ್ರಶ್ನಿಸಿಕೊಂಡು ಬಂದ ಈ ದೇಶದ ಬಹುಸಂಖ್ಯಾತ ಶೋಷಿತ ಸಮುದಾಯಗಳನ್ನು ಗುರಿಯಾಗಿಸಿ ಎಸ್‌ಐಆರ್ ನೆಪದಲ್ಲಿ ಮತದಾರರ ಪಟ್ಟಿಯಿಂದ ಹೊರದಬ್ಬುವ ಎಲ್ಲಾ ವ್ಯವಸ್ಥಿತ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಮತ ಕಾವಲು ಸಮಿತಿ ಹೇಳಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿರುವ ಎಸ್‌ಐಆರ್ ಸಂವಿಧಾನದ ಆಶಯಕ್ಕೆ ವಿರುದ್ದವಾಗಿದೆ. ಕೋಟಿ ಕೋಟಿ ಅರ್ಹ ಜನರ ವೋಟಿನ ಹಕ್ಕನ್ನು ಕಸಿಯಲಾಗುತ್ತಿದೆ. ಇದನ್ನು ತಡೆಯಲು ಕರ್ನಾಟಕದ ಜೀವಪರ ಕಲಾವಿದರು ದನಿಮಾಡುತ್ತಿದ್ದಾರೆ ಎಂದು ಕಾರ್ಯಕ್ರಮದ ಕುರಿತು ಸಮಿತಿ ವಿವರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು...

ಶಿವಮೊಗ್ಗ| ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆಯ ನೇಮಕ; ಗ್ರಾಮಸ್ಥರ ವಿರೋಧ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವ ಸುದ್ದಿ ಬೆಳಕಿಗೆ ಬಂದಿದ್ದು,...

ಉಮರ್ ಖಾಲಿದ್- ಶಾರ್ಜೀಲ್ ದೀರ್ಘಕಾಲದ ಬಂಧನದ ಬಗ್ಗೆ ಕಳವಳ; 100 ಕ್ಕೂ ಹೆಚ್ಚು ಪ್ರಮುಖರಿಂದ ಸಿಜೆಐಗೆ ಬಹಿರಂಗ ಪತ್ರ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ದೀರ್ಘಕಾಲದ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ 100 ಕ್ಕೂ ಹೆಚ್ಚು ಬರಹಗಾರರು, ನಟರು,...

ಗೋಡ್ಸೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದ ಎಂದು ಸಾವರ್ಕರ್ ಅವರ ಸೋದರಳಿಯ ಕೋರ್ಟ್‌ನಲ್ಲಿ ಹೇಳಿಕೆ: ಸಂಘದಿಂದ ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಮುಂಬೈ: ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು ಎಂದು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ನ್ಯಾಯಾಲಯದ ವಿಚಾರಣೆ ವೇಳೆ ನೀಡಿರುವ ಹೇಳಿಕೆ ಈಗ ದೇಶಾದ್ಯಂತ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಮತದಾರರಲ್ಲಿ ಬಹಿಷ್ಕಾರ ಬೆದರಿಕೆ ಎದುರಿಸುತ್ತಿರುವವರಲ್ಲಿ ಶೇ. 59 ರಷ್ಟು ಜನ ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರಗಳವರು: ವರದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಶುದ್ಧೀಕರಣದ ಹೆಸರಿನಲ್ಲಿ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗವು ಪ್ರಕಟಿಸಿರುವ ಅಧಿಕೃತ ದತ್ತಾಂಶಗಳನ್ನು ಆಧರಿಸಿ...

ವಿದ್ಯಾರ್ಥಿ ಪ್ರತಿಭಟನೆ ತಡೆಯುವ ಆದೇಶ ವಾಪಸ್: ತೀವ್ರ ವಿರೋಧದ ಹಿನ್ನೆಲೆ ಹಿಂದೆ ಸರಿದ ತಮಿಳುನಾಡು ಸರ್ಕಾರ

ಎಡಪಕ್ಷಗಳು ಹಾಗೂ ತಮಿಳುನಾಡು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಿಸಿದ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ತಡೆಯುವ ವಿವಾದಾತ್ಮಕ ಆದೇಶವನ್ನು ತೀವ್ರ ವಿರೋಧದ ಬೆನ್ನಲ್ಲೇ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಹಿಂಪಡೆದಿದೆ. ಶಾಲಾ ಶಿಕ್ಷಣ...

“ದಲಿತ ಎಂಬ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ..’ ಬಿಜೆಪಿಯ ರಾಜೀನಾಮೆ ಬೇಡಿಕೆಗೆ ಸಚಿವ ಬಿ. ನಾಗೇಂದ್ರ ತಿರುಗೇಟು

"ನಾನು ದಲಿತ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರಿದವನು ಎಂಬ ಕಾರಣಕ್ಕಾಗಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ" ಎಂದು ಸಚಿವ ಬಿ. ನಾಗೇಂದ್ರ ಅವರು ತಮ್ಮ ರಾಜೀನಾಮೆ ಪಟ್ಟು ಹಿಡಿದಿರುವ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. "ಕೇಂದ್ರ ಸಚಿವರು...

ಉತ್ತರ ಪ್ರದೇಶ : ಮಾಜಿ ಸಚಿವ ಆಝಂ ಖಾನ್, ಮೊಹಮ್ಮದ್ ಅಲಿ ಜೌಹರ್ ವಿವಿಗೆ ಸೇರಿದ 10 ಸ್ಥಳಗಳಲ್ಲಿ ಇಡಿ ಶೋಧ

ಸಮಾಜವಾದಿ ಪಕ್ಷದ ನಾಯಕ ಆಝಂ ಖಾನ್ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ (ಆ.19) ಉತ್ತರ ಪ್ರದೇಶದ ರಾಂಪುರ, ಸಹಾರನ್‌ಪುರ ಮತ್ತು ದೆಹಲಿಯಲ್ಲಿ ಶೋಧ ನಡೆಸಿದೆ. ವರದಿಗಳ ಪ್ರಕಾರ, ಹಣ ಅಕ್ರಮ...

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ರದ್ದು: ಹೈಕೋರ್ಟ್‌ನಿಂದ ಮರುನೇಮಕಕ್ಕೆ ಆದೇಶ

ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಆರೋಪದಡಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಅಮಾನತು ಆದೇಶವನ್ನು ಪ್ರಶ್ನಿಸಿ ಶಿವಶಂಕರಪ್ಪ...

ಗೋಡ್ಸೆ ಹೊಗಳಿಕೆ, ದಲಿತದ್ವೇಷ, ಸ್ತ್ರೀದ್ವೇಷ ಮತ್ತು ಮುಸ್ಲಿಂ ದ್ವೇಷ: ತೀವ್ರ ಪರಿಶೀಲನೆಯಲ್ಲಿರುವ ಬಿಜೆಪಿಯ ಹೊಸ ಸಾಮಾಜಿಕ ಮಾಧ್ಯಮ ತಂಡದ ವಿರುದ್ಧ ಜನಾಕ್ರೋಶ

ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆಯನ್ನು ಹೊಗಳಿದ ಹಳೆಯ ಪೋಸ್ಟ್‌ಗಳು, ಇಸ್ಲಾಮೋಫೋಬಿಕ್ ಹಾಗೂ ಜನಾಂಗೀಯ ಹತ್ಯೆಯ ಹೇಳಿಕೆಗಳು, ದಲಿತ ಹಾಗೂ ಮೀಸಲಾತಿ ವಿರೋಧಿ ಮಾತುಗಳು ಮತ್ತು ಮಹಿಳೆಯರ ವಿರುದ್ಧ ಬಳಸಿರುವ ಸ್ತ್ರೀದ್ವೇಷದ ಭಾಷೆಯ ಕಾರಣಕ್ಕಾಗಿ...