Homeಮುಖಪುಟಎಸ್‌ಐಆರ್ : 12 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಗಡುವು ವಿಸ್ತರಿಸಿದ ಚು. ಆಯೋಗ

ಎಸ್‌ಐಆರ್ : 12 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಗಡುವು ವಿಸ್ತರಿಸಿದ ಚು. ಆಯೋಗ

- Advertisement -
- Advertisement -

ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌)ಯಲ್ಲಿ ಮತದಾರರು ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವನ್ನು ಡಿಸೆಂಬರ್ 4 ರಿಂದ 11ಕ್ಕೆ ಚುನಾವಣಾ ಆಯೋಗ ಭಾನುವಾರ ವಿಸ್ತರಿಸಿದೆ.

ಇದರಿಂದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಛತ್ತೀಸ್‌ಗಢ, ಗೋವಾ, ಗುಜರಾತ್, ಕೇರಳ, ಲಕ್ಷದ್ವೀಪ, ಮಧ್ಯಪ್ರದೇಶ, ಪುದುಚೇರಿ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದ ನೋಂದಾಯಿತ ಮತದಾರರು ತಮ್ಮ ಎಣಿಕೆ ನಮೂನೆಗಳನ್ನು ಪೂರ್ಣಗೊಳಿಸಲು ಮತ್ತು ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಹಸ್ತಾಂತರಿಸಲು ಹೆಚ್ಚುವರಿ ಒಂದು ವಾರದ ಸಮಯವನ್ನು ಪಡೆಯಲಿದ್ದಾರೆ.

ನಂತರ ಅವುಗಳನ್ನು ಬಿಎಲ್‌ಒಗಳು ಚುನಾವಣಾ ಆಯೋಗದ ECINetಪೋರ್ಟಲ್‌ಗೆ ಅಪ್‌ಲೋಡ್ ಮಾಡುತ್ತಾರೆ. ಡಿಸೆಂಬರ್ 9ರಂದು ಈ ಹಿಂದೆ ನಿಗದಿಪಡಿಸಲಾಗಿದ್ದ ದಿನಾಂಕಕ್ಕೆ ಬದಲಾಗಿ ಡಿಸೆಂಬರ್ 16ರಂದು ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗುವುದು. ಡಿಸೆಂಬರ್ 11 ರವರೆಗೆ ಫಾರ್ಮ್‌ಗಳನ್ನು ಸಲ್ಲಿಸುವ ಎಲ್ಲರನ್ನು ಕರಡು ಪಟ್ಟಿಯಲ್ಲಿ ಸೇರಿಸಲಾಗುವುದು. ಅಂತಿಮ ಪಟ್ಟಿಯನ್ನು ಫೆಬ್ರವರಿ 7ರ ಹಿಂದಿನ ದಿನಾಂಕಕ್ಕೆ ಬದಲಾಗಿ ಫೆಬ್ರವರಿ 14, 2026ರಂದು ಪ್ರಕಟಿಸಲಾಗುವುದು ಎಂದು ಚುನವಣಾ ಆಯೋಗ ಹೇಳಿದೆ.

12 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಪತ್ರ ಬರೆದಿರುವ ಭಾರತೀಯ ಚುನಾವಣಾ ಆಯೋಗ, ಹೊಸ ವೇಳಾಪಟ್ಟಿಯು ಅಕ್ಟೋಬರ್ 27ರಂದು ಅವರಿಗೆ ನೀಡಲಾದ ಸೂಚನೆಗಳನ್ನು ರದ್ದುಗೊಳಿಸುತ್ತದೆ ಎಂದು ತಿಳಿಸಿದೆ. ಬದಲಾವಣೆಗೆ ಕಾರಣವನ್ನು ಚುನಾವಣಾ ಆಯೋಗ ಉಲ್ಲೇಖಿಸಿಲ್ಲ. ಶನಿವಾರದ ವೇಳೆಗೆ, ಚುನಾವಣಾ ಆಯೋಗವು ಪತ್ರಿಕಾ ಹೇಳಿಕೆಯಲ್ಲಿ, 51 ಕೋಟಿ ಮತದಾರರಿಗೆ 99.53% ಎಣಿಕೆ ನಮೂನೆಗಳನ್ನು ವಿತರಿಸಲಾಗಿದೆ ಮತ್ತು ಅವುಗಳಲ್ಲಿ 78.97% ಡಿಜಿಟಲೀಕರಣಗೊಳಿಸಲಾಗಿದೆ ಎಂದು ತಿಳಿಸಿದೆ.

ಜೂನ್ 24ರಂದು ಚುನಾವಣಾ ಆಯೋಗವು ದೇಶದ ಮತದಾರರ ಪಟ್ಟಿಯ ಎಸ್‌ಐಆರ್‌ ಬಗ್ಗೆ ಮೊದಲ ಆದೇಶ ಹೊರಡಿಸಿತು. ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಇದನ್ನು ಪ್ರಾರಂಭಿಸಲಾಯಿತು. ಬಿಹಾರ ಎಸ್‌ಐಆರ್‌ನಿಂದ ರಾಜ್ಯದಲ್ಲಿ ನೋಂದಾಯಿತ ಮತದಾರರ ಸಂಖ್ಯೆಯಲ್ಲಿ 6%ರಷ್ಟು ಇಳಿಕೆಯಾಗಿದೆ.

ನಂತರ, ಅಕ್ಟೋಬರ್ 27ರಂದು ಚುನಾವಣಾ ಆಯೋಗ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಎಸ್‌ಐಆರ್‌ ಬಗ್ಗೆ ಘೋಷಣೆ ಮಾಡಿತು. ಉಳಿದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಲ್ಲೂ ಮುಂದಿನ ಹಂತಗಳಲ್ಲಿ ಎಸ್‌ಐಆರ್‌ ನಡೆಯುವ ಸಾಧ್ಯತೆ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...