Homeಮುಖಪುಟಎಸ್‌ಐಆರ್ : 60 ಬಿಎಲ್‌ಒಗಳ ವಿರುದ್ಧ ಎಫ್‌ಐಆರ್ ; ಇಬ್ಬರು ಅಮಾನತು

ಎಸ್‌ಐಆರ್ : 60 ಬಿಎಲ್‌ಒಗಳ ವಿರುದ್ಧ ಎಫ್‌ಐಆರ್ ; ಇಬ್ಬರು ಅಮಾನತು

- Advertisement -
- Advertisement -

ಉತ್ತರ ಪ್ರದೇಶದ ನೋಯ್ಡಾ ಆಡಳಿತವು ಮೂರು ಪೊಲೀಸ್ ಠಾಣೆಗಳಲ್ಲಿ 60ಕ್ಕೂ ಹೆಚ್ಚು ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮತ್ತು ಏಳು ಮೇಲ್ವಿಚಾರಕರ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಬಹ್ರೈಚ್‌ನಲ್ಲಿ ಇಬ್ಬರು ಬಿಎಲ್‌ಒಗಳನ್ನು ನಿರ್ಲಕ್ಷ್ಯದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ ಮತ್ತು ಬಿಜೆಪಿ ನಾಯಕರ ದೂರಿನ ಮೇರೆಗೆ ಮತ್ತೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನೋಯ್ಡಾದಲ್ಲಿ, 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 32ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ನೋಯ್ಡಾದ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೇಧಾ ರೂಪಮ್ ಅವರ ಆದೇಶದ ಮೇರೆಗೆ, ನೋಯ್ಡಾದ ಮೂರು ವಿಧಾನಸಭಾ ವಿಭಾಗಗಳ ಉಪ-ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು, ನಿಯಮ ಪಾಲಿಸದ ಬಿಎಲ್‌ಒಗಳ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲು ಮಾಡಿದ್ದಾರೆ.

ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಎಸ್‌ಐಆರ್ ಹಂತ-IIರ ಭಾಗವಾಗಿ ಒಂದು ತಿಂಗಳ ಮನೆ ಮನೆ ಎಣಿಕೆ ಪ್ರಕ್ರಿಯೆ ಮುಗಿಸಲು ಡಿಸೆಂಬರ್ 4ರ ಗಡುವು ವಿಧಿಸಲಾಗಿದೆ. ಈ ಅವಧಿಯಲ್ಲಿ ಬಿಎಲ್‌ಒಗಳು ಫಾರ್ಮ್‌ಗಳ ವಿತರಣೆ ಮತ್ತು ಸಂಗ್ರಹಣೆ ಮಾಡಬೇಕಿದೆ.

ಮೊದಲ ಹಂತದಲ್ಲಿ ನಡೆದ ಬಿಹಾರದ ಎಸ್‌ಐಆರ್ ಪ್ರಕ್ರಿಯೆಗಿಂತ ಭಿನ್ನವಾಗಿ, ಮನೆ ಮನೆ ಎಣಿಕೆ ಹಂತದಲ್ಲಿಯೇ ಮತದಾರರ ಅಥವಾ ಅವರ ಪೋಷಕರ ಹಳೆಯ ಮತದಾರರ ಪಟ್ಟಿಯೊಂದಿಗೆ ಫಾರ್ಮ್‌ಗಳಲ್ಲಿನ ಮತದಾರರ ವಿವರಗಳನ್ನು ಹೊಂದಿಸುವ ಜವಾಬ್ದಾರಿಯನ್ನು ಬಿಎಲ್‌ಒಗಳಿಗೆ ವಹಿಸಲಾಗಿದೆ.

ನೋಯ್ಡಾ ಆಡಳಿತದ ಪ್ರಕಾರ, ಪದೇ ಪದೇ ಸೂಚನೆ ಮತ್ತು ಎಚ್ಚರಿಕೆಗಳನ್ನು ನೀಡಿದರೂ, ಹಲವಾರು ಬಿಎಲ್‌ಒಗಳು ತಮ್ಮ ನಿಯೋಜಿತ ಪ್ರದೇಶಗಳಿಗೆ ವರದಿ ಮಾಡಿಲ್ಲ ಮತ್ತು ಹಿರಿಯ ಅಧಿಕಾರಿಗಳು ನೀಡಿದ ಆದೇಶಗಳನ್ನು ಪಾಲಿಸಲು ವಿಫಲರಾಗಿದ್ದಾರೆ.

ಒಟ್ಟು ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ. ಎರಡು ದಾದ್ರಿಯಲ್ಲಿ ದಾಖಲಿಸಲಾಗಿದೆ. ಇದರಲ್ಲಿ 18 ಅಧಿಕಾರಿಗಳ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಒಂದರಲ್ಲಿ 12 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸರ್ಕಾರಿ ಶಾಲಾ ಶಿಕ್ಷಕರು, ಮತ್ತು ಇನ್ನೊಂದರಲ್ಲಿ ಮೇಲ್ವಿಚಾರಕರಾಗಿ ನೇಮಕಗೊಂಡ ಆರು ಮಂದಿಯ ಹೆಸರಿದೆ ಎಂದು ವರದಿಯಾಗಿದೆ.

ಗ್ರೇಟರ್ ನೋಯ್ಡಾದ ಇಕೋಟೆಕ್ ಹಂತ 1 ಪೊಲೀಸ್ ಠಾಣೆಯಲ್ಲಿ, 33 ಬಿಎಲ್‌ಒಗಳು ಮತ್ತು ಒಬ್ಬ ಮೇಲ್ವಿಚಾರಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಜೆವರ್ ಪೊಲೀಸ್ ಠಾಣೆಯಲ್ಲಿ, ಅಧಿಕಾರಿಗಳು 17 ಬಿಎಲ್‌ಒಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಪ್ರತಿಯೊಂದು ಎಫ್‌ಐಆರ್ ಅನ್ನು ಆಯಾ ಪ್ರದೇಶದ ಎಸ್‌ಡಿಎಂ ದಾಖಲಿಸಿದ್ದಾರೆ. ಎಸ್‌ಡಿಎಂಗಳು ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ಸ್ಥಳೀಯ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ಆಗಿ ಕಾರ್ಯನಿರ್ವಹಿಸಲು ನೇಮಕಗೊಂಡಿದ್ದಾರೆ.

ಭಾರತೀಯ ಚುನಾವಣಾ ಆಯೋಗದ ಸೂಚನೆಗಳಿಗೆ ಅನುಗುಣವಾಗಿ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರ ‘ವಾರ್ ರೂಮ್’ ನೀಡಿದ ವಿವರವಾದ ಹೇಳಿಕೆಯಲ್ಲಿ ತಿಳಿಸಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶನಿವಾರ, ಜಿಲ್ಲಾಧಿಕಾರಿ ರೂಪಮ್ ಅವರು ಕಲೆಕ್ಟರೇಟ್‌ನಲ್ಲಿ ಸೆಕ್ಟರ್ ಮತ್ತು ವಲಯ ಮ್ಯಾಜಿಸ್ಟ್ರೇಟ್‌ಗಳೊಂದಿಗೆ ಪರಿಶೀಲನಾ ಸಭೆ ನಡೆಸಿ, ಪರಿಷ್ಕರಣಾ ಕಾರ್ಯವನ್ನು ಪರಿಣಾಮಕಾರಿ, ಪಾರದರ್ಶಕ ಮತ್ತು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿದ್ದಾರೆ. ಪ್ರತಿಯೊಬ್ಬ ಬಿಎಲ್‌ಒ ತಮ್ಮ ಪ್ರದೇಶವನ್ನು ಸಮಯಕ್ಕೆ ಸರಿಯಾಗಿ ತಲುಪಬೇಕು, ಮನೆ ಮನೆಗೆ ಭೇಟಿ ನೀಡಬೇಕು ಮತ್ತು ಹೊಸ ಮತದಾರರಿಗೆ ಫಾರ್ಮ್ 6 ಮತ್ತು ವರ್ಗಾವಣೆ ಅಥವಾ ತಿದ್ದುಪಡಿಗಳಿಗಾಗಿ ಫಾರ್ಮ್ 8 ಅನ್ನು ಭರ್ತಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಯಾವುದೇ ವಿಳಂಬ ಅಥವಾ ನಿರ್ಲಕ್ಷ್ಯ ಮಾಡಿದರೆ ನೋಟಿಸ್‌ ಜಾರಿ ಮಾಡಲಾಗುವುದು ಮತ್ತು ಸ್ಪಷ್ಟೀಕರಣ ಕೇಳಲಾಗುವುದು. ಪದೇ ಪದೇ ಆದೇಶ ಪಾಲಿಸದಿರುವುದು ವೇತನ ತಡೆಹಿಡಿಯುವಿಕೆ ಮತ್ತು ಶಿಸ್ತು ಕ್ರಮಕ್ಕೆ ಕಾರಣವಾಗಬಹುದು ಎಂದು ಆಡಳಿತವು ಈ ಹಿಂದೆ ಎಚ್ಚರಿಸಿತ್ತು.

ಬಹ್ರೈಚ್‌ನ ಬೇಸಿಕ್ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಆಶಿಶ್ ಕುಮಾರ್ ಸಿಂಗ್ ಮಾತನಾಡಿ, ಬಿಎಲ್‌ಒ ಆಗಿ ನೇಮಕಗೊಂಡಿದ್ದ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶಮಾ ನಫೀಸ್, ಹಿರಿಯ ಅಧಿಕಾರಿಗಳು ನೀಡಿದ ಜ್ಞಾಪನೆಗಳನ್ನು ಲೆಕ್ಕಿಸದೆ ಕರ್ತವ್ಯಕ್ಕೆ ವರದಿ ಮಾಡುವಂತೆ ಸೂಚಿಸಿದ ಲಿಖಿತ ಸೂಚನೆಗಳು ಮತ್ತು ಪದೇ ಪದೇ ಫೋನ್ ಕರೆಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿದ್ದಾರೆ. ಅದೇ ರೀತಿ, ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕ ಅನುರಾಗ್, ಎಸ್‌ಐಆರ್ ಅಡಿಯಲ್ಲಿ ತನಗೆ ನಿಯೋಜಿಸಲಾದ ಜವಾಬ್ದಾರಿಗಳನ್ನು ನಿರ್ವಹಿಸಲು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ.

ಈ ನಡುವೆ, ಬಿಜೆಪಿ ನಾಯಕ ಅಂಕಿತ್ ಕುಮಾರ್ ಸಿಂಗ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಾಥಮಿಕ ಶಾಲೆಯ ಬೋಧಕ ಬಿಎಲ್‌ಒ ಅಭಿಷೇಕ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...