Homeಮುಖಪುಟಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ಗಂಭೀರ ಸವಾಲು: ಪಿಣರಾಯಿ ವಿಜಯನ್ ಎಸ್‌ಐಆರ್‌ಗೆ ವಾಗ್ದಾಳಿ

ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ಗಂಭೀರ ಸವಾಲು: ಪಿಣರಾಯಿ ವಿಜಯನ್ ಎಸ್‌ಐಆರ್‌ಗೆ ವಾಗ್ದಾಳಿ

- Advertisement -
- Advertisement -

12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತದ ಚುನಾವಣಾ ಆಯೋಗದ ನಿರ್ಧಾರವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ತೀವ್ರವಾಗಿ ಟೀಕಿಸಿದ್ದು, “ಪ್ರಜಾಪ್ರಭುತ್ವ ಪ್ರಕ್ರಿಯೆಗೆ ಗಂಭೀರ ಸವಾಲು” ಎಂದು ಬಣ್ಣಿಸಿದ್ದಾರೆ.

ಅಸ್ತಿತ್ವದಲ್ಲಿರುವ ಪಟ್ಟಿ ಬದಲಿಗೆ 2002 ರಿಂದ 2004 ರವರೆಗಿನ ಮತದಾರರ ಪಟ್ಟಿಗಳ ಪರಿಷ್ಕರಣೆಯನ್ನು ಆಧರಿಸಿದ ಚುನಾವಣಾ ಸಮಿತಿಯ ಕ್ರಮವು 1950 ರ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು 1960 ರ ಮತದಾರರ ನೋಂದಣಿ ನಿಯಮಗಳನ್ನು ಉಲ್ಲಂಘಿಸುತ್ತದೆ ಎಂದು ವಿಜಯನ್ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

“ಪ್ರಸ್ತುತ ಮತದಾರರ ಪಟ್ಟಿಯನ್ನು ಅದರ ಅಡಿಪಾಯವಾಗಿ ಬಳಸಿಕೊಂಡು ಯಾವುದೇ ನವೀಕರಣವನ್ನು ಮಾಡಬೇಕು ಎಂದು ಈ ಕಾನೂನುಗಳು ಸ್ಪಷ್ಟವಾಗಿ ಹೇಳುತ್ತವೆ” ಎಂದು ಅವರು ಹೇಳಿದರು.

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಯಾರಿ ನಡೆಸುತ್ತಿರುವುದರಿಂದ, ಈಗ ವಿಶೇಷ ತೀವ್ರ ಪರಿಷ್ಕರಣೆ ನಡೆಸುವುದು ಅಪ್ರಾಯೋಗಿಕ ಎಂದು ರಾಜ್ಯ ಚುನಾವಣಾ ಅಧಿಕಾರಿ ಈಗಾಗಲೇ ಆಯೋಗಕ್ಕೆ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು. “ಈ ಹಂತದಲ್ಲಿ ಎಸ್‌ಐಆರ್‌ನೊಂದಿಗೆ ಮುಂದುವರಿಯುವುದು, ಈ ಕ್ರಮದ ಹಿಂದಿನ ಉದ್ದೇಶದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕುತ್ತದೆ” ಎಂದು ಅವರು ಹೇಳಿದರು.

ಬಿಹಾರದಲ್ಲಿ ಹಿಂದಿನ ಎಸ್‌ಐಆರ್‌ ಪ್ರಕ್ರಿಯೆಯನ್ನು ವಿಜಯನ್ ಉಲ್ಲೇಖಿಸಿ, ಬಿಹಾರದಲ್ಲಿ ಸುಮಾರು 65 ಲಕ್ಷ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಈ ಕ್ರಮವು ಸಂವಿಧಾನದ 326 ನೇ ವಿಧಿಯ ಅಡಿಯಲ್ಲಿ ನಾಗರಿಕರ ಸಾರ್ವತ್ರಿಕ ಮತದಾನದ ಹಕ್ಕಿನ ‘ಸಂಪೂರ್ಣ ಉಲ್ಲಂಘನೆ’ ಎಂದು ಅವರು ಪ್ರತಿಪಾದಿಸಿದರು.

“ನಾಗರಿಕರ ಮೂಲಭೂತ ಹಕ್ಕಾಗಿರುವ ಮತದಾನದ ಹಕ್ಕನ್ನು ರಾಜಕೀಯ ಹಿತಾಸಕ್ತಿಗಳ ಪ್ರಕಾರ ಕಸಿದುಕೊಳ್ಳಲಾಗುವುದಿಲ್ಲ” ಎಂದು ಅವರು ಹೇಳಿದರು.

ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಅನ್ನು ಕಾರ್ಯಗತಗೊಳಿಸಲು ಎಸ್‌ಐಆರ್‌ ಪ್ರಕ್ರಿಯೆಯು ‘ಅನ್ಯ ಮಾರ್ಗ’ವಾಗಬಹುದು ಎಂದು ಮುಖ್ಯಮಂತ್ರಿ ಮತ್ತಷ್ಟು ಕಳವಳ ವ್ಯಕ್ತಪಡಿಸಿದರು. ಈ ಹಿಂದೆ ಮಾಡಿದ ಇದೇ ರೀತಿಯ ಟೀಕೆಗಳನ್ನು ಕೇಂದ್ರ ಅಧಿಕಾರಿಗಳು ನಿರಾಕರಿಸಿಲ್ಲ ಎಂದು ಹೇಳಿದರು.

“ಬಿಹಾರ ಎಸ್‌ಐಆರ್‌ನ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಪರಿಗಣಿಸುತ್ತಿದೆ. ಆದರೆ, ಅದೇ ಪ್ರಕ್ರಿಯೆಯನ್ನು ಇತರ ರಾಜ್ಯಗಳಿಗೆ ವಿಸ್ತರಿಸುವುದನ್ನು ನಾವು ಮುಗ್ಧವಾಗಿ ನೋಡಲಾಗುವುದಿಲ್ಲ. ಪರಿಷ್ಕರಣೆಯನ್ನು ಜನರ ಇಚ್ಛೆಯನ್ನು ಬುಡಮೇಲು ಮಾಡುವ ಆತುರದಲ್ಲಿ ನಡೆಸಲಾಗುತ್ತಿದೆ” ಎಂದು ಆರೋಪಿಸಿದರು.

ಎಸ್‌ಐಆರ್‌ ವಿಶ್ವಾಸಾರ್ಹತೆಯ ಮೇಲೆ ಪರಿಣಾಮ ಬೀರುವ ನಿರ್ಧಾರಗಳಿಂದ ದೂರವಿರಲು ಅವರು ಚುನಾವಣಾ ಆಯೋಗವನ್ನು ಒತ್ತಾಯಿಸಿದರು. ಚುನಾವಣಾ ಸಮಿತಿಯಂತಹ ಸಂಸ್ಥೆಗಳು ‘ಕೇಂದ್ರದಲ್ಲಿ ಆಡಳಿತ ಪಕ್ಷದ ಕೈಗೊಂಬೆಗಳಾಗಬಾರದು’ ಎಂದು ಎಚ್ಚರಿಸಿದರು.

ಎಸ್‌ಐಆರ್ ಅನ್ನು ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ ಏಕೈಕ ರಾಜ್ಯ ಕೇರಳ. ಎರಡನೇ ಹಂತದ ಪರಿಷ್ಕರಣಾ ಪ್ರಕ್ರಿಯೆಯ ವಿರುದ್ಧ ‘ಪ್ರಜಾಪ್ರಭುತ್ವವನ್ನು ರಕ್ಷಿಸುವಲ್ಲಿ ಆಸಕ್ತಿ ಹೊಂದಿರುವ ಎಲ್ಲರೂ’ ಒಗ್ಗೂಡಬೇಕು ಎಂದು ವಿಜಯನ್ ಕರೆ ನೀಡಿದರು.

2026 ರಲ್ಲಿ ವಿಧಾನಸಭಾ ಚುನಾವಣೆಗಳನ್ನು ನಡೆಸಲು ನಿರ್ಧರಿಸಲಾಗಿರುವ ಕೇರಳ, ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳ ಸೇರಿದಂತೆ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನವೆಂಬರ್ ಮತ್ತು ಫೆಬ್ರವರಿ ನಡುವೆ ಎಸ್‌ಐಆರ್ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಸೋಮವಾರ ಘೋಷಿಸಿತ್ತು.

8ನೇ ವೇತನ ಆಯೋಗದ ಉಲ್ಲೇಖಿತ ನಿಯಮಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲಾ ಮಕ್ಕಳಿಗೆ ನ್ಯೂಸ್ ಪೇಪರ್‌ನಲ್ಲಿ ಬಿಸಿಯೂಟ ಬಡಿಸಿದ ವಿಡಿಯೋ ವೈರಲ್ : ಪ್ರಧಾನಿ, ಸಿಎಂಗೆ ನಾಚಿಕೆಯಾಗ್ಬೇಕು ಎಂದ ರಾಹುಲ್ ಗಾಂಧಿ

ಮಧ್ಯಪ್ರದೇಶದ ಶಾಲೆಯೊಂದರ ಮಕ್ಕಳು ನ್ಯೂಸ್‌ ಪೇಪರ್‌ನಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, "ಇಂತಹ ದಯನೀಯ ಸ್ಥಿತಿಯಲ್ಲಿ ಭಾರತದ ಭವಿಷ್ಯ ಬೆಳಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮೋಹನ್...

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ಬಿಹಾರದ ಸಮಸ್ತಿಪುರ ಜಿಲ್ಲೆಯ ಶೀತಲ್‌ಪಟ್ಟಿ ಗ್ರಾಮದ ಎಸ್‌ಆರ್ ಕಾಲೇಜು ಬಳಿ ಭಾರೀ ಸಂಖ್ಯೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್‌) ಸ್ಲಿಪ್‌ಗಳು ಪತ್ತೆಯಾಗಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ...

ಬಿಹಾರದಲ್ಲಿ ರಾಹುಲ್ ಗಾಂಧಿ ‘ಅಂಗಡಿ’ ಮುಚ್ಚಲಿದೆ: ಅಮಿತ್ ಶಾ

‘ಚುನಾವಣೆಯಲ್ಲಿ 160 ಸ್ಥಾನಗಳನ್ನು ಗೆಲ್ಲುವ ಮೂಲಕ ಎನ್‌ಡಿಎ ಮೈತ್ರಿಕೂಟವು ಸರ್ಕಾರ ರಚಿಸಲಿದ್ದು, ಬಿಹಾರದಲ್ಲಿ ರಾಹುಲ್ ಗಾಂಧಿ ಅವರ ‘ಅಂಗಡಿ’ ಮುಚ್ಚಲಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ. ಬಿಹಾರದ ಪುರ್ನಿಯಾದಲ್ಲಿ...

‘ಮತಗಳ್ಳತನ’ ವಿರುದ್ಧ 1.12 ಕೋಟಿ ಸಹಿ ಸಂಗ್ರಹ, ನ.10ರಂದು ಎಐಸಿಸಿಗೆ ಹಸ್ತಾಂತರ : ಡಿ.ಕೆ ಶಿವಕುಮಾರ್

ರಾಜ್ಯ ಹಾಗೂ ದೇಶದಲ್ಲಿ ನಡೆದಿರುವ ಮತಗಳ್ಳತನದ ವಿರುದ್ಧ ಎಐಸಿಸಿ ನಾಯಕರು ಹಮ್ಮಿಕೊಂಡಿರುವ ಸಹಿಸಂಗ್ರಹ ಅಭಿಯಾನದಲ್ಲಿ ಕರ್ನಾಟಕದಿಂದ 1,12,40,000 ಸಹಿಗಳನ್ನು ಸಂಗ್ರಹಿಸಲಾಗಿದೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ ಜೋಡೋ...

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದ ವಿಡಿಯೋ ವೈರಲ್, ಟ್ರೋಲ್; ಅವಮಾನ ಸಹಿಸಲಾಗದೆ ಯುವಕ ಆತ್ಮಹತ್ಯೆ

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಳ್ಲಿ ವೈರಲ್ ಆಗಿ, ಜನರಿಂದ ನಿಂದನೆ, ಟ್ರೋಲ್ ಗಳನ್ನು ಸಹಿಸಲಾಗದೆ 27ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಡೆದಿದೆ. ಅಕ್ಟೋಬರ್...

ಸವಾರಿ ಸಮಯದಲ್ಲಿ ಕಾಲು ಹಿಡಿಯಲು ಪ್ರಯತ್ನಿಸಿದ ರಾಪಿಡೋ ಚಾಲಕ: ಯುವತಿ ಆರೋಪ

ಗುರುವಾರ ಸಂಜೆ ಸವಾರಿ ಮಾಡುವಾಗ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದನೆಂದು ಬೆಂಗಳೂರಿನ ಯುವತಿಯೊಬ್ಬರು ಆರೋಪಿಸಿದ್ದಾರೆ. ನವೆಂಬರ್ 6 ರಂದು ನಡೆದಿರುವುದಾಗಿ ವರದಿಯಾಗಿರುವ ಈ ಘಟನೆಯು, ಅವರು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ...

‘ಬಾಡಿ ಶೇಮಿಂಗ್’ ಪ್ರಶ್ನೆ ಕೇಳಿದ ಪತ್ರಕರ್ತನನ್ನು ತರಾಟೆಗೆ ತೆಗೆದುಕೊಂಡ ನಟಿ ಗೌರಿ ಕಿಶನ್ : ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ

ಬಾಡಿ ಶೇಮಿಂಗ್ (ದೇಹಾಕೃತಿಯನ್ನು ಹಿಯಾಳಿಸುವ) ಮತ್ತು ಲೈಂಗಿಕ ಉದ್ದೇಶವನ್ನು ಹೊಂದಿರುವ ಪ್ರಶ್ನೆ ಕೇಳಿದ ಯೂಟ್ಯೂಬ್ ಪತ್ರಕರ್ತನನ್ನು ನಟಿ ಗೌರಿ ಕಿಶನ್ ತೀವ್ರ ತರಾಟೆ ತೆಗೆದುಕೊಂಡ ಘಟನೆ ನವೆಂಬರ್ 6ರಂದು ಚೆನ್ನೈನಲ್ಲಿ ನಡೆದಿದೆ. ಗೌರಿ ಮತ್ತು...

ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ 3 ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್

ಗ್ವಾಲಿಯರ್ : ಕಳೆದ ತಿಂಗಳು ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಭಿಂಡ್ ಮೂತ್ರ ವಿಸರ್ಜನೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯನ್ನು ಮಧ್ಯಪ್ರದೇಶ ಹೈಕೋರ್ಟ್‌ನ ಗ್ವಾಲಿಯರ್ ಪೀಠ ಶುಕ್ರವಾರ ತಿರಸ್ಕರಿಸಿದೆ. ಕೆಲವು ಮೇಲ್ಜಾತಿಯ ಯುವಕರು ದಲಿತ...

ಬಿಜೆಪಿ-ಆರ್‌ಎಸ್‌ಎಸ್, ಶಿಯಾ ಧರ್ಮಗುರು ಕುರಿತ ಮಾನನಷ್ಟ ಪ್ರಕರಣಗಳಿಂದ ಅಜಂ ಖಾನ್ ಖುಲಾಸೆ

ಉತ್ತರ ಪ್ರದೇಶದ ಮಾಜಿ ಸಚಿವ ಅಜಂ ಖಾನ್ ಅವರನ್ನು ದ್ವೇಷ ಹರಡುವುದು, ಅಧಿಕೃತ ಲೆಟರ್‌ಹೆಡ್ ಅನ್ನು ದುರುಪಯೋಗಪಡಿಸಿಕೊಳ್ಳುವುದು ಸೇರಿದಂತೆ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಪ್ರಮುಖ ಶಿಯಾ ಧರ್ಮಗುರು ಮೌಲಾನಾ ಸೈಯದ್ ಕಲ್ಬೆ ಜವಾದ್...

ಪುಣೆ ಭೂ ಹಗರಣ: ಅಜಿತ್ ಪವಾರ್ ಪುತ್ರ ಪಾರ್ಥ್ ಸಂಸ್ಥೆಗೆ ನೋಟಿಸ್; ದಂಡ ಪಾವತಿಸುವಂತೆ ಕಂದಾಯ ಇಲಾಖೆ ಸೂಚನೆ

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪುತ್ರ ಪಾರ್ಥ್ ಪವಾರ್ ಭಾಗಿಯಾಗಿದ್ದಾರೆ ಎಂದು ಹೇಳಲಾದ ಪುಣೆ ಭೂ ಹಗರಣದಲ್ಲಿ ಹೊಸ ಬೆಳವಣಿಗೆ ಬೆಳಕಿಗೆ ಬಂದಿದೆ. ಪಾರ್ಥ್‌ಗೆ ಸಂಬಂಧಿಸಿದ ಅಮೀಡಿಯಾ ಎಲ್‌ಎಲ್‌ಪಿ ಕಂಪನಿಗೆ ರಾಜ್ಯ...