Homeಕರ್ನಾಟಕಎಸ್‌ಐಆರ್ ಬಡವರ ವಿರುದ್ಧದ 'ಅಘೋಷಿತ ಯುದ್ಧ': ಶಿವಸುಂದರ್

ಎಸ್‌ಐಆರ್ ಬಡವರ ವಿರುದ್ಧದ ‘ಅಘೋಷಿತ ಯುದ್ಧ’: ಶಿವಸುಂದರ್

- Advertisement -
- Advertisement -

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಡವರ ವಿರುದ್ದದ ‘ಅಘೋಷಿತ ಯುದ್ದ’ವಾಗಿದೆ. ಇದು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ ಚಿಂತಕ ಶಿವಸುಂದರ್ ಹೇಳಿದರು.

ಕಲಬುರಗಿ ನಗರದ ಕನ್ನಡ ಭವನದಲ್ಲಿ ಸಂವಿಧಾನ ರಕ್ಷಣಾ ಸಮಿತಿ ಹಾಗೂ ಎದ್ದೇಳು ಕರ್ನಾಟಕ ಭಾನುವಾರ (ಮಾ.1) ಹಮ್ಮಿಕೊಂಡಿದ್ದ ‘ಎಸ್‌ಐಆರ್ ಪರಿಣಾಮ-ಸವಾಲು ಸಂವಾದಗೋಷ್ಠಿ’ಯಲ್ಲಿ ಅವರು ಮಾತನಾಡಿದರು.

ಎಸ್‌ಐಆರ್ ಕೇವಲ ಮತದಾರರ ಪಟ್ಟಿಯ ಪರಿಷ್ಕರಣೆ ಅಲ್ಲ, ಬದಲಿಗೆ ಅಂಚಿನ ಸಮುದಾಯಗಳ ವಿರುದ್ಧ ನಡೆಸುತ್ತಿರುವ ಸಂಚಿನ ಭಾಗವಾಗಿದೆ ಎಂದು ದೂರಿದರು.

ಎಸ್‌ಐಆರ್ ಎಂದರೆ ಸಾಮಾನ್ಯ ಪರಿಷ್ಕರಣೆ ಅಲ್ಲ. ಇದು ಅಲ್ಪಸಂಖ್ಯಾತರು, ಆದಿವಾಸಿಗಳು, ದಲಿತರು, ಮಹಿಳೆಯರು ಮತ್ತು ಇತರೆ ಹಿಂದುಳಿದ ವರ್ಗಗಳ ಮೇಲೆ ನಡೆಸುತ್ತಿರುವ ವ್ಯವಸ್ಥಿತ ಯುದ್ಧ. ಈ ಯುದ್ಧಕ್ಕೆ ಒಗ್ಗಟ್ಟಿನಿಂದ ಪ್ರತಿರೋಧ ತೋರಿಸದಿದ್ದರೆ, ನಮ್ಮದೇ ದೇಶದಲ್ಲಿ ನಾವು ದ್ವಿತೀಯ ದರ್ಜೆ ನಾಗರಿಕರಾಗಿ ಬದುಕಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಶಿವಸುಂದರ್ ಎಚ್ಚರಿಸಿದರು.

ಎಸ್‌ಐಆರ್ ಹಿಂದೆ ರಾಜಕೀಯ ಉದ್ದೇಶಗಳಿವೆ ಎಂದು ಆರೋಪಿಸಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದರು. ಎಸ್‌ಐಆರ್ ಪ್ರಕ್ರಿಯೆ ಮತದಾರರ ಪಟ್ಟಿಯನ್ನು ನವೀಕರಿಸುವುದಕ್ಕಿಂತ ಹೆಚ್ಚಾಗಿ ನಾಗರಿಕತ್ವವನ್ನು ಪರೀಕ್ಷಿಸುವ ಕ್ರಮವಾಗಿ ಪರಿಣಮಿಸಿದೆ ಎಂದು ಹೇಳಿದರು.

ಸಾಮಾನ್ಯ ಪರಿಷ್ಕರಣೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಯಾರಾದರೂ ಮತದಾರರು ನಿಧನರಾಗಿದ್ದಾರೆಯೇ?.. ಸ್ಥಳಾಂತರಗೊಂಡಿದ್ದಾರೆಯೇ? ಅಥವಾ ಹೊಸ ಮತದಾರ ಅರ್ಹರಾಗಿದ್ದಾರೆಯೇ? ಎಂಬುದನ್ನು ಪರಿಶೀಲಿಸುತ್ತಾರೆ. ಆದರೆ, ಎಸ್‌ಐಆರ್‌ನಲ್ಲಿ ನೀವು ಭಾರತೀಯ ನಾಗರಿಕರೇ?’ ಎಂಬ ಪ್ರಶ್ನೆಯನ್ನು ಆರಂಭದಲ್ಲೇ ಕೇಳಲಾಗುತ್ತಿದೆ. ಬಹುತೇಕ ಆದಿವಾಸಿಗಳು, ಅಲ್ಪಸಂಖ್ಯಾತರು, ಬಡವರು ಮತ್ತು ಮಹಿಳೆಯರ ಬಳಿ ಕೇಳಲಾಗುತ್ತಿರುವ ದಾಖಲೆಗಳು ಇಲ್ಲ. ಇದು ಮುಂದುವರಿದರೆ ಅನೇಕರ ಮತಹಕ್ಕು ಕಳೆದುಹೋಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಭಾರತದ ಸಂವಿಧಾನ ರೂಪಿಸಿದ ಮಹನೀಯರು ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಖಾತ್ರಿ ಮಾಡುವ ಪ್ರಜಾಸತ್ತಾತ್ಮಕ, ಸಮಾಜವಾದಿ ಗಣರಾಜ್ಯದ ಕನಸು ಕಂಡಿದ್ದರು. ಎಸ್‌ಐಆರ್ ಈ ಸಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುವ ಸಂಚಾಗಿದೆ ಎಂದು ಶಿವಸುಂದರ್ ಹೇಳಿದರು.

ಎಸ್‌ಐಆರ್ ಕೇವಲ ಮತದಾರರ ಪಟ್ಟಿಯ ಪರಿಷ್ಕರಣೆ ಅಲ್ಲ. ಇದು ಪ್ರಜಾಸತ್ತಾತ್ಮಕ ಹಾಗೂ ನಾಗರಿಕ ಹಕ್ಕುಗಳ ಹತ್ಯೆ ಎಂದು ಅವರು ಆರೋಪಿಸಿದರು.

ಇತರೆ ರಾಜ್ಯಗಳ ಅಂಕಿ ಅಂಶಗಳನ್ನು ಉಲ್ಲೇಖಿಸಿದ ಅವರು, ಬಿಹಾರದಲ್ಲಿ 65 ಲಕ್ಷ, ತಮಿಳುನಾಡಿನಲ್ಲಿ 74 ಲಕ್ಷ ಹಾಗೂ ಉತ್ತರ ಪ್ರದೇಶದಲ್ಲಿ ಸುಮಾರು 3 ಕೋಟಿ ಮತದಾರರನ್ನು ಎಸ್‌ಐಆರ್ ಮೂಲಕ ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಇವರಲ್ಲಿ ಬಹುತೇಕರು ಮುಸ್ಲಿಮರು ಅಥವಾ ಆಡಳಿತ ಪಕ್ಷದ ವಿರೋಧಿಗಳು ಎಂದು ವಿವರಿಸಿದರು.

ಎಸ್‌ಐಆರ್ ಮೂಲಕ ಆಡಳಿತ ಪಕ್ಷ ತನ್ನ ವಿರೋಧಿಗಳನ್ನು ಮತದಾರರ ಪಟ್ಟಿಯಿಂದ ಅಳಿಸಿ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಲು ಯತ್ನಿಸುತ್ತಿದೆ. ಇದು ಹಗಲಿನಲ್ಲಿ ನಡೆಯುತ್ತಿರುವ ಪ್ರಜಾಪ್ರಭುತ್ವದ ಹತ್ಯೆಯಾಗಿದೆ. ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ರಕ್ಷಿಸಲು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಬೇಕು ಎಂದು ಕರೆ ನೀಡಿದರು.

ನಾಗರಿಕ ಸಮಾಜ ಸಂಸ್ಥೆಗಳು, ವಿದ್ಯಾರ್ಥಿಗಳು, ಯುವಜನರು ಹಾಗೂ ಪ್ರಗತಿಪರ ಸಂಘಟನೆಗಳು ಒಗ್ಗಟ್ಟಿನಿಂದ ಜನರನ್ನು ಜಾಗೃತಿಗೊಳಿಸಿ ಹೋರಾಟ ನಡೆಸಬೇಕು ಎಂದು ಅವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಹೋರಾಟಗಾರರು ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ನಾಗರಿಕರು, ಯುವಜನರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...