Homeಮುಖಪುಟಎಸ್‌ಐಆರ್ 'ಸಾಂಸ್ಥಿಕ ಮತಗಳ್ಳತನ', ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ: ರಾಹುಲ್ ಗಾಂಧಿ

ಎಸ್‌ಐಆರ್ ‘ಸಾಂಸ್ಥಿಕ ಮತಗಳ್ಳತನ’, ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ: ರಾಹುಲ್ ಗಾಂಧಿ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಾಂಸ್ಥಿಕ ಮತಗಳ್ಳತನವಾಗಿದೆ. ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಎಸ್‌ಐಆರ್ ಮತ್ತು ಮತಗಳ್ಳತನದ ವಿರುದ್ದ ಬಿಹಾರದಲ್ಲಿ ಹಮ್ಮಿಕೊಂಡಿರುವ ‘ವೋಟರ್ ಅಧಿಕಾರ್’ ಯಾತ್ರೆಯಲ್ಲಿ ಭಾನುವಾರ ಅವರು ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಕಲಿ ಮತದಾರರನ್ನು ಹೇಗೆ ಸೇರ್ಪಡೆ ಮಾಡಲಾಗಿದೆ ಎಂಬ ನಮ್ಮ ಪ್ರಶ್ನೆಗೆ ಚುನಾವಣಾ ಆಯೋಗ ಉತ್ತರ ನೀಡಿಲ್ಲ. ಹಾಗಾಗಿ, ಅದರ ಎಲ್ಲರಿಗೂ ಸ್ಪಷ್ಟವಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬಿಹಾರದ ಅರಾರಿಯಾದಲ್ಲಿ ‘ವೋಟರ್ ಅಧಿಕಾರ್’ ಯಾತ್ರೆಯ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಮುಂಬರುವ ಬಿಹಾರ ಚುನಾವಣೆಗಾಗಿ ಇಂಡಿಯಾ ಒಕ್ಕೂಟವು ‘ಸೈದ್ಧಾಂತಿಕ ಮತ್ತು ರಾಜಕೀಯವಾಗಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದೆ. ಚುನಾವಣೆಯ ಫಲಿತಾಂಶ ನಮಗೆ ಫಲಪ್ರದವಾಗಲಿದೆ. ನಾವೆಲ್ಲ ಸಾಮಾನ್ಯ ಪ್ರಣಾಳಿಕೆಯೊಂದಿಗೆ ಮತದಾರರ ಮುಂದೆ ಹೋಗುತ್ತೇವೆ” ಎಂದಿದ್ದಾರೆ.

ಮತಗಳ್ಳತನಕ್ಕೆ ಸಂಬಂಧಿಸಿದ ತನ್ನ ಆರೋಪಕ್ಕೆ ಚುನಾವಣಾ ಆಯೋಗ ಪ್ರಮಾಣಪತ್ರ ಕೇಳಿದೆ ಎಂದ ರಾಹುಲ್ ಗಾಂಧಿ, ಅನುರಾಗ್ ಠಾಕೂರ್ ಅಂತಹದ್ದೇ ಆರೋಪ ಮಾಡಿದರೂ ಅವರಿಂದ ಪ್ರಮಾಣಪತ್ರ ಕೇಳಿಲ್ಲ ಎಂದಿದ್ದಾರೆ.

“ನಾನು ಮಹದೇವಪುರದ ಮತಗಳ್ಳತನದ ಕುರಿತು ಪತ್ರಿಕಾಗೋಷ್ಠಿ ಮಾಡುತ್ತಿದ್ದೆ. ಐದು ನಿಮಿಷಗಳಲ್ಲಿ, ರಾಹುಲ್ ಗಾಂಧಿ ಪ್ರಮಾಣಪತ್ರ ನೀಡಬೇಕು. ಅವರು ಪ್ರಮಾಣಪತ್ರ ಸಲ್ಲಿಸದಿದ್ದರೆ ಆರೋಪಗಳನ್ನು ಸ್ವೀಕರಿಸುವುದಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ. ಕೆಲ ದಿನಗಳ ನಂತರ, ಅನುರಾಗ್ ಠಾಕೂರ್ ಅದೇ  ರೀತಿಯ ಆರೋಪಗಳನ್ನು ಮಾಡಿದರು. ಆದರೆ, ಅವರಿಂದ ಯಾವುದೇ ಪ್ರಮಾಣಪತ್ರ ಕೇಳಿಲ್ಲ. ನಾನು ನಕಲಿ ಮತದಾರರ ಬಗ್ಗೆ ಮಾತನಾಡಿದ್ದೆ, ಅವರು ಕೂಡ ಅದನ್ನೇ ಮಾಡಿದ್ದರು. ಐದು ನಿಮಿಷಗಳಲ್ಲಿ ನನ್ನಿಂದ ಪ್ರಮಾಣಪತ್ರ ಕೇಳಲಾಯಿತು. ಆದರೆ, ಇಂದಿನವರೆಗೆ ಅನುರಾಗ್ ಠಾಕೂರ್ ಅವರಿಂದ ಕೇಳಿಲ್ಲ” ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಸಿಪಿಐ (ಎಂಎಲ್) ನ ದೀಪಂಕರ್ ಭಟ್ಟಾಚಾರ್ಯ ಮತ್ತು ವಿಐಪಿಯ ಮುಖೇಶ್ ಸೈನಿ ಇದ್ದರು.

ಇದಕ್ಕೂ ಮೊದಲು ಅರಾರಿಯಾದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿದ ಮೋದಿ ಸರ್ಕಾರ, ಈಗ ಚುನಾವಣಾ ಆಯೋಗದ ಸಹಾಯದಿಂದ ಎಸ್‌ಐಆರ್ ಮೂಲಕ ಬಡವರ ಮತಗಳನ್ನು ಕದಿಯಲು ಬಯಸುತ್ತಿದೆ. ಇದಕ್ಕೆ ಬಿಹಾರದಲ್ಲಿ ಇಂಡಿಯಾ ಒಕ್ಕೂಟ ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

“ಚುನಾವಣಾ ಆಯೋಗ ತಟಸ್ಥವಾಗಿಲ್ಲ, ಅವರು ಮತಗಳನ್ನು ಕದಿಯುತ್ತಿದ್ದಾರೆ. ಎಸ್‌ಐಆರ್ ಎಂಬುವುದು ಮತಗಳನ್ನು ಕದಿಯಲು ಚುನಾವಣಾ ಆಯೋಗ ಮಾಡಿರುವ ಸಾಂಸ್ಥಿಕ ಪ್ರಯತ್ನವಾಗಿದೆ. ಪ್ರತಿಪಕ್ಷಗಳು ಮತದಾರರನ್ನು ಕೈಬಿಟ್ಟ ಬಗ್ಗೆ ದೂರು ನೀಡುತ್ತಿವೆ. ಆದರೆ, ಬಿಜೆಪಿ ಯಾವುದೇ ದೂರು ನೀಡುತ್ತಿಲ್ಲ. ಅದೇಕೆ ಹೀಗೆ? ಏಕೆಂದರೆ, ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಮತ್ತು ಬಿಜೆಪಿ ನಡುವೆ ಒಪ್ಪಂದ ಇದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ಸರಿಯಾದ’ ಮತದಾರರ ಪಟ್ಟಿಯನ್ನು ಒದಗಿಸುವುದು ಚುನಾವಣಾ ಆಯೋಗದ ಕೆಲಸ. ಆದರೆ, ಅವರು ಮಹಾರಾಷ್ಟ್ರ, ಹರಿಯಾಣ ಮತ್ತು ಕರ್ನಾಟಕದಲ್ಲಿ ಆ ಕೆಲಸ ಮಾಡಿಲ್ಲ” ಎಂದು ಒತ್ತಿ ಹೇಳಿದ ರಾಹುಲ್ ಗಾಂಧಿ, “ಚುನಾವಣಾ ಆಯೋಗ ತನ್ನ ನಡವಳಿಕೆಯನ್ನು ಬದಲಾಯಿಸಿರುವುದನ್ನು ಸಾಬೀತುಪಡಿಸುವುದು ನಮ್ಮ ಪ್ರಯತ್ನವಾಗಿದೆ” ಎಂದು ಹೇಳಿದ್ದಾರೆ.

ಚುನಾವಣಾ ಆಯೋಗವು ‘ಗೋದಿ ಆಯೋಗ’ವಾಗಿ ಮಾರ್ಪಟ್ಟಿದೆ. ಚುನಾವಣಾ ಸಂಸ್ಥೆಯ ವಿಶ್ವಾಸಾರ್ಹತೆ ತಳಮಟ್ಟಕ್ಕೆ ಕುಸಿದಿದೆ ಎಂದು ತೇಜಸ್ವಿ ಯಾದವ್ ಆರೋಪಿಸಿದ್ದಾರೆ. ನರೇಂದ್ರ ಮೋದಿ ಸುಳ್ಳು ಹೇಳುತ್ತಿದ್ದಾರೆ. ಅಕ್ರಮ ಮತದಾರರನ್ನು ಪತ್ತೆ ಮಾಡಲು ಎಸ್‌ಐಆರ್ ಮಾಡಲಾಗುತ್ತದೆ ಎಂದು ಪ್ರಧಾನಿ ಹೇಳಿಕೊಂಡಿದ್ದಾರೆ ಆದರೆ, ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಚುನಾವಣಾ ಆಯೋಗವು ಹಾಗೆ ಉಲ್ಲೇಖಿಸಿಲ್ಲ” ಎಂದಿದ್ದಾರೆ.

“ತನ್ನ ವರ್ಚಸ್ಸು ನಷ್ಟಕ್ಕೆ ಚುನಾವಣಾ ಆಯೋಗವನ್ನೇ ದೂಷಿಸಬೇಕು” ಎಂದು ಭಟ್ಟಾಚಾರ್ಯ ಹೇಳಿದ್ದು, “ಇದು ಚುನಾವಣಾ ಆಯೋಗವಲ್ಲ, ಬದಲಾಗಿ ಭಾರತದ ಚುನಾವಣಾ ಲೋಪ” (It is not the Election Commission, but the Election Omission of India) ಎಂದು ಕರೆದಿದ್ದಾರೆ.

‘ಬಿಜೆಪಿ ಗೆಲ್ಲಬೇಕೆಂದು ಬಯಸುವ ಕ್ಷೇತ್ರಗಳಿಗೆ ಇತರ ರಾಜ್ಯಗಳಿಂದ ಜನರನ್ನು ಕರೆ ತರಲಿದೆ’: ಚರ್ಚೆಗೆ ಕಾರಣವಾದ ಕೇರಳ ಬಿಜೆಪಿ ನಾಯಕನ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...