HomeಅಂಕಣಗಳುKarnataka SIRಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

- Advertisement -
- Advertisement -

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು ಹಾಗೂ ಕಾರ್ಯಕರ್ತರು, ಸಂಸದರ ಸಭೆಯಲ್ಲೇ ಎಸ್‌ಐಆರ್ ವಿರೋಧಿ ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಿದರು.

ಸಂಸದ ಬಿ.ವೈ.ರಾಘವೇಂದ್ರ ಅವರ ಸಭೆ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿದ ಹೋರಾಟಗಾರರು, ಎಸ್‌ಐಆರ್ ನೀತಿಯಿಂದ ದೇಶದ ನಾಗರಿಕರ ಮತದಾನದ ಹಕ್ಕಿಗೆ ಎದುರಾಗಿರುವ ಭೀತಿಯನ್ನು ಬಿಂಬಿಸುವ ಬ್ಯಾನರ್‌ಗಳನ್ನು ಪ್ರದರ್ಶಿಸಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಯತ್ನಿಸಿದರು ಹಾಗೂ ಜಾಥಾದ ಬ್ಯಾನರ್‌ಗಳನ್ನು ಪ್ರದರ್ಶಿಸದಂತೆ ಬಿಗಿ ಬಂದೋಬಸ್ತ್ ಮಾಡಲು ಮುಂದಾದರು.

ಸರಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಕಾರ್ಯಕರ್ತರು, ಸಭೆಯಲ್ಲಿ ನೆರೆದಿದ್ದ ಸಾರ್ವಜನಿಕರಿಗೆ ಎಸ್‌ಐಆರ್‌ನ ವಿರುದ್ಧ ಜಾಗೃತಿ ಕರಪತ್ರಗಳನ್ನು ಹಂಚಿದರು.

ಕೇಂದ್ರದ ಬಿಜೆಪಿ ಸರಕಾರವು ಚುನಾವಣಾ ಆಯೋಗವನ್ನು ಬಳಸಿಕೊಂಡು ಮತದಾರರ ಪಟ್ಟಿಯಿಂದ ಜೀವಂತವಾಗಿರುವ ಸಾರ್ವಜನಿಕರ ಹೆಸರುಗಳನ್ನು ಡಿಲೀಟ್ ಮಾಡುತ್ತಿದೆ ಮತ್ತು ಇದು ಬಿಜೆಪಿಗೆ ರಾಜಕೀಯ ಲಾಭ ಮಾಡಿಕೊಡುವ ತಂತ್ರ ಎಂದು ಹೋರಾಟಗಾರರು ಸಂಸದರ ಸಭೆಯಲ್ಲೇ ಸಾರ್ವಜನಿಕರ ಗಮನಕ್ಕೆ ತಂದರು.

ʼಯಾವುದೇ ಅಧಿಕಾರದ ಬಲ ಅಥವಾ ಪೊಲೀಸ್ ದಬ್ಬಾಳಿಕೆಯಿಂದ ನಮ್ಮ ಪ್ರಜಾಪ್ರಭುತ್ವದ ರಕ್ಷಣೆಯ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಸಂಸದರ ಸಭೆಯಲ್ಲೇ ನಾವು ಕರಪತ್ರ ಹಂಚಿರುವುದು ಕೇವಲ ಮುನ್ಸೂಚನೆ ಅಷ್ಟೇ. ನಮ್ಮ ಹಕ್ಕನ್ನು ಕಸಿಯಲು ಬಂದರೆ ಜನರು ತಕ್ಕ ಪಾಠ ಕಲಿಸಲಿದ್ದಾರೆʼ ಎಂದು ಕೆಎಲ್ ಅಶೋಕ್ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.

ಶಿವಮೊಗ್ಗದ ಅಂಬೇಟ್ಕರ್‍ ಪ್ರತಿಮೆ ಬಳಿಯಿಂದ ಉದ್ಘಾಟನೆಗೊಂಡ ಜಾಥಾ ತ್ರಿವರ್ಣ ಧ್ವಜಗಳನ್ನು ಹಿಡಿದ ಕಾರ್ಯಕರ್ತರ ತಂಡದೊಂದಿಗೆ ಪ್ರಾರಂಭವಾಯಿತು 5ಜಿಲ್ಲೆಗಳಲ್ಲಿ ಸಂಚರಿಸಿ 20 ರಂದು ಬೆಂಗಳೂರಿನಲ್ಲಿ ಸಮಾವೇಶಗೊಳ್ಳಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...